Toyota: 8-ಸೀಟರ್.. ಜನಮೆಚ್ಚಿದ ಕಾರಿದು, ಆದ್ರೂ ಈ ಟೊಯೊಟಾ ಕಾರಿನ ಮಾರಾಟ ಸ್ವಲ್ಪ ಕುಸಿತ, ಯಾಕೆ?

ಟೊಯೊಟಾ ಇನ್ನೋವಾ (Toyota Innova) ಜನ ಮೆಚ್ಚಿದ ಎಂಪಿವಿಯಾಗಿದೆ. ಇದರ ಆಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳಿಗೆ ಗ್ರಾಹಕರು ಕೂಡ ಮನಸೋತಿದ್ದಾರೆ. ಆದರೂ, ಈ ಕಾರಿನ ಮಾರಾಟ ಸಂಖ್ಯೆ ಕುಸಿತವಾಗಿದೆ. ಇದೇ ಜೂನ್‌ನಲ್ಲಿ ಒಟ್ಟು 8,802 ಯುನಿಟ್ ಇನ್ನೋವಾ ಎಂಪಿವಿಗಳು ಮಾರಾಟವಾಗಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ಮೂಲಕ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ -6% ಇಳಿಕೆಯಾಗಿದೆ. 2024ರ ಜೂನ್‌ನಲ್ಲಿ 9,412 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು.

ಈ ಟೊಯೊಟಾ ಇನ್ನೋವಾ ಕಾರಿನ ಮಾರಾಟ ಸಂಖ್ಯೆ ಇಳಿಮುಖವಾಗಲು ನಾನಾ ಕಾರಣಗಳಿವೆ. ಬಹುಮುಖ್ಯವಾಗಿ ಇನ್ನೋವಾ ದುಬಾರಿ ಬೆಲೆಯನ್ನು ಹೊಂದಿದೆ. ಇದಕ್ಕಿಂದ ಕಡಿಮೆ ದರಕ್ಕೆ ಬೇರೆ ಕಂಪನಿಯ ಫ್ಯಾಮಿಲಿ ಕಾರುಗಳು ಖರೀದಿಗೆ ಲಭ್ಯವಿವೆ. ಗ್ರಾಹಕರು ಅವುಗಳ ಖರೀದಿಯತ್ತ ಮುಖ ಮಾಡಿದ್ದಾರೆ. ಹೀಗಾಗಿ, ಇನ್ನೋವಾ ಎಂಪಿವಿ ಮಾರಾಟ ಸಂಖ್ಯೆ ಕುಸಿತವಾಗಿದೆ ಎಂದು ಹಲವರ ಅಭಿಪ್ರಾಯವಾಗಿದೆ.

Toyota Innova June 2025 Sales Details

ಟೊಯೊಟಾ ಇನ್ನೋವಾ ಹೈಕ್ರಾಸ್ ವಿಶೇಷತೆಗಳೇನು:

ಈ ಎಂಪಿವಿಯು ಸ್ಪರ್ಧಾತ್ಮಕ ಬೆಲೆಯಲ್ಲಿ ಖರೀದಿಗೆ ಲಭ್ಯವಿದ್ದು, ರೂ.19.94 ಲಕ್ಷದಿಂದ ರೂ.32.58 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಜಿಎಕ್ಸ್, ವಿಎಕ್ಸ್, ಜಿಎಕ್ಸ್(ಒ), ವಿಎಕ್ಸ್(ಒ), ಝಡ್ಎಕ್ಸ್ ಹಾಗೂ ಝಡ್ಎಕ್ಸ್ (ಒ) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. ಹೊರಭಾಗದಲ್ಲೂ ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಸೂಪರ್ ವೈಟ್, ಅಟಿಟ್ಯೂಡ್ ಬ್ಲ್ಯಾಕ್ ಮೈಕಾ, ಪ್ಲಾಟಿನಂ ವೈಟ್ ಪರ್ಲ್ ಹಾಗೂ ಸಿಲ್ವರ್ ಮೆಟಾಲಿಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ನೂತನ ಇನ್ನೋವಾ ಹೈಕ್ರಾಸ್ ಎಂಪಿವಿ 2.0-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 2.0-ಲೀಟರ್ ಹೈಬ್ರಿಡ್ (ಎಲೆಕ್ಟ್ರಿಕ್ +ಪೆಟ್ರೋಲ್) ಎಂಜಿನ್‌ನ್ನು ಒಳಗೊಂಡಿದೆ. 23 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 7/ 8 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು.

Toyota Innova June 2025 Sales Details

ಇದು 4755 ಎಂಎಂ ಉದ್ದ, 1845 ಎಂಎಂ ಅಗಲ ಮತ್ತು 1795 ಎತ್ತರವು ಇದೆ. ಜೊತೆಗೆ 2850 ಎಂಎಂ ಉದ್ದದ ವೀಲ್‌ಬೇಸ್‌ನ್ನು ಒಳಗೊಂಡಿದೆ. 10-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಹಾಗೂ ಸನ್‌ರೂಫ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಟೊಯೊಟಾ ಇನ್ನೋವಾ ಕ್ರಿಸ್ಟಾ ಹೇಗಿದೆ:

ಈ ಎಂಪಿವಿಯು ಕನಿಷ್ಠ ರೂ.19.99 ಲಕ್ಷ ಹಾಗೂ ಗರಿಷ್ಠ ರೂ.27.08 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಜಿಎಕ್ಸ್, ಜಿಎಕ್ಸ್ ಪ್ಲಸ್ ಮತ್ತು ವಿಎಕ್ಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. ಪ್ಲಾಟಿನಂ ವೈಟ್ ಪರ್ಲ್, ಸೂಪರ್ ವೈಟ್ ಮತ್ತು ಸಿಲ್ವರ್ ಮೆಟಾಲಿಕ್ ಎಂಬ ಬಣ್ಣಗಳನ್ನು ಪಡೆದಿದೆ.

Toyota Innova June 2025 Sales Details

ಹೊಸ ಕ್ರಿಸ್ಟಾ ಎಂಪಿವಿ 2.4-ಲೀ. ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 8 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 55 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಪಡೆದಿದೆ. 4735 ಎಂಎಂ ಉದ್ದ, 1830 ಎಂಎಂ ಅಗಲ, 1795 ಎತ್ತರ ಹಾಗೂ 2750 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಇದರಲ್ಲಿ 7/ 8 ಆಸನ ಆಯ್ಕೆ ವ್ಯವಸ್ಥೆಯಿದೆ. ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು. 300 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 8-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 7-ಏರ್‌ಬ್ಯಾಗ್‌ಗಳು, ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಫ್ರಂಟ್ & ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಪಡೆದಿದೆ.

More from DriveSpark

Article Published On: Sunday, July 13, 2025, 10:00 [IST]
English summary
Toyota innova june 2025 sales details
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+