ಟೊಯೊಟಾ ಇನ್ನೋವಾಗಾಗಿ ಶೋರೂಂ ಎಡತಾಕಿದ ಗ್ರಾಹಕರು, ದಾಖಲೆ ಸಂಖ್ಯೆಯಲ್ಲಿ ಸೇಲ್ಸ್.. ಕಾರಣವೇನು?

ಟೊಯೊಟಾ ಇನ್ನೋವಾ (Toyota Innova) ಪ್ರಮುಖ ಎಂಪಿವಿಯಾಗಿ ಹೆಸರುವಾಸಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಈ ಕಾರು, ಹೈಕ್ರಾಸ್ & ಕ್ರಿಸ್ಟಾ ಎಂಬ ಎರಡು ವಿಧದಲ್ಲಿ ಖರೀದಿ ದೊರೆಯುತ್ತದೆ. ಸದ್ಯ, ಏಪ್ರಿಲ್ ತಿಂಗಳ ಟೊಯೊಟಾ ಕಾರುಗಳ ಮಾರಾಟದ ಅಂಕಿಅಂಶಗಳ ವರದಿ ಪ್ರಕಟಗೊಂಡಿದ್ದು, ಇದೇ 'ಇನ್ನೋವಾ' ಎಂಪಿವಿ ಗೇಮ್ ಚೇಂಜರ್ ಕಾರಾಗಿ ಹೊರಹೊಮ್ಮಿದೆ. ಅದಕ್ಕೆ ತಕ್ಕಂತೆ ಭಾರೀ ಸಂಖ್ಯೆಯಲ್ಲಿಯೂ ಮಾರಾಟಗೊಂಡಿದ್ದು, ಗ್ರಾಹಕರು ಕೂಡ ಮುಗಿಬಿದ್ದು ಕೊಂಡುಕೊಂಡಿದ್ದಾರೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಕಳೆದ ತಿಂಗಳು (ಏಪ್ರಿಲ್-2025) ಟೊಯೊಟಾ ಕಂಪನಿಯು ಬರೋಬ್ಬರಿ 7,699 ಯುನಿಟ್ 'ಇನ್ನೋವಾ' ಎಂಪಿವಿಗಳನ್ನು ಯಶಸ್ವಿಯಾಗಿ ಮಾರಾಟ ಮಾಡಿದೆ. 2024ರ ಇದೇ ಅವಧಿಯಲ್ಲಿ 7,103 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. ಈ ಅಂಕಿಸಂಖ್ಯೆಗೆ ಹೋಲಿಕೆ ಮಾಡಿದರೆ ಮಾರಾಟ ಪ್ರಮಾಣ ವರ್ಷದಿಂದ ವರ್ಷಕ್ಕೆ (YoY) ಶೇಕಡ 8% ಪ್ರಗತಿಯಾಗಿದೆ.

Toyota Innova Mpv April 2025 Sales Details

ಟೊಯೊಟಾ ಇನ್ನೋವಾ ಎಂಪಿವಿ ಮಾರಾಟ ಸಂಖ್ಯೆಯು ದಿನದಿಂದ ದಿನಕ್ಕೆ ಅಧಿಕಗೊಳ್ಳಲು ನಾನಾ ಕಾರಣಗಳಿವೆ. ಬಹುಮುಖ್ಯವಾಗಿ ಇದೊಂದು ಫ್ಯಾಮಿಲಿ ಕಾರಾಗಿದ್ದು, ವಿಶಾಲವಾದ ಆಸನಗಳನ್ನು ಪಡೆದಿರುವುದರಿಂದ ಖರೀದಿದಾರರು ಸಹ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ವಿಶೇಷವಾಗಿ ಈ ಎಂಪಿವಿಯಲ್ಲಿ ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣ ಮಾಡಬಹುದು.. ಜೊತೆಗೆ ಸಾಕಷ್ಟು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿರುವುದರಿಂದಾಗಿ ಭಾರತೀಯ ಗ್ರಾಹಕರ ಆಯ್ಕೆಯ ವಾಹನವಾಗಿದೆ ಎಂದು ಹೇಳಬಹುದು.

ಟೊಯೊಟಾ ಇನ್ನೋವಾ ಹೈಕ್ರಾಸ್ ವಿಶೇಷತೆಗಳೇನು..

ಈ ಎಂಪಿವಿ ರೂ.19.94 ಲಕ್ಷದಿಂದ ರೂ.32.5 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಇದು 7/ 8 ಆಸನ ಆಯ್ಕೆಯನ್ನು ಪಡೆದಿದೆ. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 300 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

Toyota Innova Mpv April 2025 Sales Details

ನೂತನ ಇನ್ನೋವಾ ಹೈಕ್ರಾಸ್ ಕಾರು ಜಿಎಕ್ಸ್, ಜಿಎಕ್ಸ್ (ಒ), ವಿಎಕ್ಸ್ ಮತ್ತು ಝಡ್ಎಕ್ಸ್ ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. ಈ ಕಾರು ಪೆಟ್ರೋಲ್ ಎಂಜಿನ್‌ನ್ನು ಹೊಂದಿದ್ದು, ಯಾವುದೇ ಸಾಮಾನ್ಯ ಬೈಕ್‌ಗೂ ಕಡಿಮೆಯಿಲ್ಲದ ರೀತಿಯಲ್ಲಿ 23.24 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಹೊಸ ಟೊಯೊಟಾ ಇನ್ನೋವಾ ಹೈಕ್ರಾಸ್ ಎಂಪಿವಿ ಹೊರಭಾಗದಲ್ಲಿ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಸೂಪರ್ ವೈಟ್, ಪ್ಲಾಟಿನಂ ವೈಟ್ ಪರ್ಲ್ ಮತ್ತು ಸಿಲ್ವರ್ ಮೆಟಾಲಿಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾಗಳನ್ನು ಒಳಗೊಂಡಿದೆ.

ಟೊಯೊಟಾ ಇನ್ನೋವಾ ಕ್ರಿಸ್ಟಾ ಹೇಗಿದೆ..

ಈ ಎಂಪಿವಿ ಕನಿಷ್ಠ ರೂ.19.99 ಲಕ್ಷ ಮತ್ತು ಗರಿಷ್ಠ ರೂ.26.82 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 2.4-ಲೀ. ಡೀಸೆಲ್ ಎಂಜಿನ್‌ನ್ನು ಹೊಂದಿದ್ದು, 8 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿಯೂ 7/ 8 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. 300 ಲೀಟರ್‌ನ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

Take a Poll

ನೂತನ ಇನ್ನೋವಾ ಕ್ರಿಸ್ಟಾ ಕಾರು ಸಹ ಹೊರಭಾಗದಲ್ಲಿ ಉತ್ತಮವಾದ ವಿನ್ಯಾಸವನ್ನು ಹೊಂದಿದೆ. ಪ್ಲಾಟಿನಂ ವೈಟ್ ಪರ್ಲ್ & ಸೂಪರ್ ವೈಟ್ ಒಳಗೊಂಡಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಈ ಕಾರು ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 7-ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Thursday, May 15, 2025, 17:02 [IST]
English summary
Toyota innova mpv april 2025 sales details
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+