Toyota: ಟೊಯೊಟಾ ಇನ್ನೋವಾಗಾಗಿ ಮುಗಿಬಿದ್ದ ಗ್ರಾಹಕರು.. 1 ವರ್ಷ ಕಾಯಲೇ ಬೇಕು, ಫುಲ್ ಡಿಮ್ಯಾಂಡ್!

ಟೊಯೊಟಾ ಇನ್ನೋವಾ (Toyota Innova) ಜನಪ್ರಿಯ ಎಂಪಿವಿಯಾಗಿದೆ. ಇದು ಕ್ರಿಸ್ಟಾ ಹಾಗೂ ಹೈಕ್ರಾಸ್ ಎಂಬ ರೂಪದಲ್ಲಿ ಖರೀದಿಗೆ ದೊರೆಯಲಿದ್ದು, ಹೆಚ್ಚು ಆಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಈ ಹಿನ್ನೆಲೆ, ಗ್ರಾಹಕರು ಕೂಡ ನಾಮುಂದು - ತಾಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಅದಕ್ಕೆ ತಕ್ಕಂತೆ ಇನ್ನೋವಾ ಕ್ರಿಸ್ಟಾ ಮತ್ತು ಹೈಕ್ರಾಸ್ ಎಂಪಿವಿಗೆ ಭಾರೀ ಬೇಡಿಕೆಯಿದ್ದು, ದೇಶದ ಪ್ರಮುಖ ನಗರಗಳಲ್ಲಿ ವಿತರಣೆ ಪಡೆಯಲು ಒಂದಷ್ಟು ಕಾಲ ಕಾಯಬೇಕು.

ಬೆಂಗಳೂರಿನಲ್ಲಿ ಟೊಯೊಟಾ ಇನ್ನೋವಾ ಕ್ರಿಸ್ಟಾ (Toyota Innova Crysta) ಎಂಪಿವಿಯನ್ನು ಇವತ್ತು ಬುಕ್ಕಿಂಗ್ ಮಾಡಿದರೆ, ಗ್ರಾಹಕರಿಗೆ 2 ತಿಂಗಳ ಬಳಿಕ ವಿತರಣೆ ಮಾಡಲಾಗುತ್ತದೆ. ಇದೇ ಕಾರು ನವದೆಹಲಿಯಲ್ಲಿ 4 ತಿಂಗಳು, ಮುಂಬೈನಲ್ಲಿ 2 ರಿಂದ 3 ತಿಂಗಳು, ಹೈದರಾಬಾದ್‌ನಲ್ಲಿ 3 ತಿಂಗಳು, ಪುಣೆಯಲ್ಲಿ 1 ತಿಂಗಳು, ಚೆನ್ನೈನಲ್ಲಿ 4 ತಿಂಗಳು, ಜೈಪುರದಲ್ಲಿ 3 ತಿಂಗಳು, ಲಕ್ನೋದಲ್ಲಿ 2 ತಿಂಗಳು ಕಾಯುವಿಕೆ ಅವಧಿಯನ್ನು ಒಳಗೊಂಡಿದೆ.

Toyota Innova Mpv April 2025 Waiting Period Revealed Upto 1 Year Details

ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross) ಎಂಪಿವಿಯು ಕೊಂಚ ಹೆಚ್ಚಿನ ಕಾಯುವಿಕೆ ಅವಧಿಯನ್ನು ಹೊಂದಿದೆ. ಬೆಂಗಳೂರಿನಲ್ಲಿ ಈ ಕಾರನ್ನು 10 ತಿಂಗಳ ನಂತರ ವಿತರಿಸಲಾಗಿದೆ. ನವದೆಹಲಿಯಲ್ಲಿ 1 ವರ್ಷ, ಮುಂಬೈನಲ್ಲಿ 3 ರಿಂದ 4 ತಿಂಗಳು, ಹೈದರಾಬಾದ್‌ನಲ್ಲಿ 8 ತಿಂಗಳು, ಪುಣೆಯಲ್ಲಿ 1 ವರ್ಷ, ಚೆನ್ನೈನಲ್ಲಿ 4 ತಿಂಗಳು ಮತ್ತು ಜೈಪುರದಲ್ಲಿ 10 ರಿಂದ 12 ತಿಂಗಳ ಬಳಿಕ ಇನ್ನೋವಾ ಹೈಕ್ರಾಸ್ ಎಂಪಿವಿ ಗ್ರಾಹಕರ ಕೈಸೇರಲಿದೆ.

ಸದ್ಯ ದೇಶೀಯವಾಗಿ ಖರೀದಿಗೆ ದೊರೆಯುವ ನೂತನ ಟೊಯೊಟಾ ಇನ್ನೋವಾ ಕ್ರಿಸ್ಟಾ ಎಂಪಿವಿ, ರೂ.19.99 ಲಕ್ಷದಿಂದ ರೂ.26.82 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಇದು 2.4-ಲೀ. ಡೀಸೆಲ್ ಎಂಜಿನ್‌ ಮತ್ತು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಪಡೆದಿದೆ. 8 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

Toyota Innova Mpv April 2025 Waiting Period Revealed Upto 1 Year Details

ಈ ಇನ್ನೋವಾ ಕ್ರಿಸ್ಟಾ ಕಾರು 7 & 8 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಪ್ಲಾಟಿನಂ ವೈಟ್ ಪರ್ಲ್, ಸೂಪರ್ ವೈಟ್ ಹಾಗೂ ಸಿಲ್ವರ್ ಮೆಟಾಲಿಕ್ ಸೇರಿದಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ & ರೇರ್-ಎಸಿ ವೆಂಟ್‌ಯಂತಹ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 7-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

ಟೊಯೊಟಾ ಇನ್ನೋವಾ ಹೈಕ್ರಾಸ್ ಎಂಪಿವಿ ಬಗ್ಗೆ ಹೇಳುವುದಾದರೆ, ಈ ಕಾರು ರೂ.19.94 ಲಕ್ಷದಿಂದ ರೂ.31.34 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 2-ಲೀ. ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಮತ್ತು 2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. ಜೊತೆಗೆ ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 16.13 ರಿಂದ 23.24 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

Toyota Innova Mpv April 2025 Waiting Period Revealed Upto 1 Year Details

ನೂತನ ಇನ್ನೋವಾ ಹೈಕ್ರಾಸ್ ಎಂಪಿವಿ 7 & 8 ಆಸನಗಳನ್ನು ಹೊಂದಿದೆ. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ಸ್ ಡಿಸ್‌ಪ್ಲೇ, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್, ಪನೋರಮಿಕ್ ಸನ್‌ರೂಫ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Thursday, April 10, 2025, 8:31 [IST]
English summary
Toyota innova mpv april 2025 waiting period revealed upto 1 year details
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+