Toyota: 8-ಸೀಟರ್.. ಪ್ರಖ್ಯಾತ ಟೊಯೊಟಾ ಇನ್ನೋವಾಗೆ ಮುಗಿಬಿದ್ದ ಗ್ರಾಹಕರು, ಭಾರೀ ಸಂಖ್ಯೆಯಲ್ಲಿ ಮಾರಾಟ!
ಟೊಯೊಟಾ ಇನ್ನೋವಾ (Toyota Innova) ಜನಪ್ರಿಯ ಎಂಪಿವಿಯಾಗಿ ಹೊರಹೊಮ್ಮಿದೆ. ದೇಶೀಯ ಮಾರುಕಟ್ಟೆಯಲ್ಲಿ ಹೈಕ್ರಾಸ್ (Hycross) ಹಾಗೂ ಕ್ರಿಸ್ಟಾ (Crysta) ಎಂಬ ಎರಡು ವಿಧದಲ್ಲಿ ಖರೀದಿಗೆ ಲಭ್ಯವಿದ್ದು, ಹೆಚ್ಚು ಆಕರ್ಷಕವಾಗಿರುವುದರಿಂದ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಈ 'ಮೇ' ತಿಂಗಳಲ್ಲೂ ಕಂಪನಿಯು ಇದೇ 'ಇನ್ನೋವಾ' ಎಂಪಿವಿಯನ್ನು ಭಾರೀ ಸಂಖ್ಯೆಯಲ್ಲಿ ಮಾರಾಟಗೊಳಿಸಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ಕಳೆದ ತಿಂಗಳು (ಮೇ - 2025) ಟೊಯೋಟಾ ಕಿರ್ಲೋಸ್ಕರ್ ಮೋಟಾರ್, ಒಟ್ಟು 8,882 ಯುನಿಟ್ 'ಇನ್ನೋವಾ'ಗಳನ್ನು ಮಾರಾಟಗೊಳಿಸಿದೆ. 2024ರ 'ಮೇ'ನಲ್ಲಿ 8,548 ಯುನಿಟ್‌ಗಳನ್ನು ಮಾರಲಾಗಿತ್ತು. ಅದಕ್ಕೆ ಹೋಲಿಸಿದರೆ, ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 4% ಪ್ರಗತಿಯಾಗಿದೆ. ಹಾಗೆಯೇ ಏಪ್ರಿಲ್‌ನಲ್ಲಿ 7,699 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಈ ಅಂಕಿ ಸಂಖ್ಯೆಯನ್ನು ಲೆಕ್ಕ ಹಾಕಿದಾಗ ತಿಂಗಳಿಂದ ತಿಂಗಳಿಗೂ ಉತ್ತಮವಾದ ಬೆಳವಣಿಗೆಯಾಗಿದೆ.

ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross) ವಿಶೇಷತೆಗಳೇನು:
ಈ ಎಂಪಿವಿ ರೂ.20 ಲಕ್ಷದಿಂದ ರೂ.32 ಲಕ್ಷವರೆಗೆ ಎಕ್ಸ್-ಶೋರೂಂ ದರವನ್ನು ಪಡೆದಿದೆ. ವಿಎಕ್ಸ್, ವಿಎಕ್ಸ್ (ಒ) ಮತ್ತು ಝಡ್ ಎಕ್ಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. ಹೊರಭಾಗದಲ್ಲಿ ಅತ್ಯಾಧುನಿಕ ವಿನ್ಯಾಸ ಹೊಂದಿದೆ. ಪ್ಲಾಟಿನಂ ವೈಟ್ ಪರ್ಲ್, ಆಟಿಟ್ಯೂಡ್ ಬ್ಲ್ಯಾಕ್ ಮೈಕಾ, ಸಿಲ್ವರ್ ಮೆಟಾಲಿಕ್ ಹಾಗೂ ಸೂಪರ್ ವೈಟ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ಇದು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 2.0-ಲೀಟರ್ 4 ಸಿಲಿಂಡರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 2.0-ಲೀಟರ್ 4 ಸಿಲಿಂಡರ್ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಎಂಜಿನ್ ಆಯ್ಕೆಯನ್ನು ಹೊಂದಿದೆ. ಸಿವಿಟಿ ಗೇರ್‌ಬಾಕ್ಸ್‌ನ್ನು ಪಡೆದಿದೆ. 21 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ನೂತನ ಎಂಪಿವಿ 7/ 8 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 300 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸನ್‌ರೂಫ್ ಮತ್ತು ಫೋನ್ ಚಾರ್ಜಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.
ಟೊಯೊಟಾ ಇನ್ನೋವಾ ಕ್ರಿಸ್ಟಾ (Toyota Innova Crysta) ವಿಶೇಷತೆಗಳೇನು:
ಈ ಎಂಪಿವಿಯು ರೂ.20 ಲಕ್ಷದಿಂದ ರೂ.27 ಲಕ್ಷವರೆಗೆ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಇದು ಹೊರಭಾಗದಲ್ಲಿ ಹೆಚ್ಚು ಅತ್ಯಾಕರ್ಷಕವಾದ ವಿನ್ಯಾಸವನ್ನು ಪಡೆದಿದೆ. ಜೊತೆಗೆ ಪ್ಲಾಟಿನಂ ವೈಟ್ ಪರ್ಲ್, ಸೂಪರ್‌ವೈಟ್, ಸಿಲ್ವರ್ ಮೆಟಾಲಿಕ್ ಮತ್ತು ಆಟಿಟ್ಯೂಡ್ ಬ್ಲ್ಯಾಕ್ ಮೈಕಾ ಎಂಬ ಬಣ್ಣಗಳೊಂದಿಗೆ ದೊರೆಯುತ್ತದೆ.
ಇದು ಕೂಡ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. ಕೇವಲ 2.4-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 8 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ. ಈ ಕಾರಿನಲ್ಲಿ 7/ 8 ಆಸನ ಆಯ್ಕೆ ವ್ಯವಸ್ಯೆಯಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ನಡೆಸಬಹುದು.
ಹೊಸ ಎಂಪಿವಿ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಬಹುಮುಖ್ಯವಾಗಿ 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್‍ನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 7 ಏರ್‌ಬ್ಯಾಗ್‌ಗಳು, ವಿಎಸ್‌ಸಿ (ವೆಹಿಕಲ್ - ಸ್ಟೆಬಿಲಿಟಿ ಕಂಟ್ರೋಲ್), ಮುಂಭಾಗ (ಫ್ರಂಟ್) & ಹಿಂಭಾಗ (ರೇರ್) ಪಾರ್ಕಿಂಗ್ ಸೆನ್ಸರ್‌ಗಳನ್ನು ಪಡೆದಿದೆ.


Click it and Unblock the Notifications








