Toyota: 8-ಸೀಟರ್, ಈ ಜನಪ್ರಿಯ ಟೊಯೊಟಾ MPVಗೆ ಫುಲ್ ಡಿಮ್ಯಾಂಡ್.. ಶೋರೂಂ ಎಡತಾಕಿದ ಗ್ರಾಹಕರು!

ಟೊಯೊಟಾ ಇನ್ನೋವಾ (Toyota Innova) ಜಗಮೆಚ್ಚಿದ ಎಂಪಿವಿಯಾಗಿದೆ. ಇದು ಇನ್ನೋವಾ ಹೈಕ್ರಾಸ್ ಹಾಗೂ ಇನ್ನೋವಾ ಕ್ರಿಸ್ಟಾ ಎಂಬ ಎರಡು ವಿಧದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಈ ಅಕ್ಟೋಬರ್ ತಿಂಗಳು ಭಾರೀ ಸಂಖ್ಯೆಯಲ್ಲಿಯೂ ಮಾರಾಟಗೊಂಡಿದೆ. ಒಟ್ಟು 11,089 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2024ರ ಇದೇ ಅವಧಿಯಲ್ಲಿ 8,838 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ ಸಂಖ್ಯೆಯನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಶೇಕಡ 25% ಪ್ರಗತಿಯಾಗಿದೆ.

ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross) ವಿಶೇಷತೆಗಳೇನು:

ಈ ಎಂಪಿವಿಯು ರೂ.18.16 ಲಕ್ಷದಿಂದ ರೂ.30.83 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಜಿ, ಜಿಎಕ್ಸ್, ವಿಎಕ್ಸ್, ಝಡ್ಎಕ್ಸ್ (ಒ) ಹಾಗೂ ವಿಎಕ್ಸ್ (ಒ) ಎಂಬ ರೂಪಾಂತರಗಳೊಂದಿಗೂ ದೊರೆಯುತ್ತದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಪ್ಲಾಟಿನಂ ವೈಟ್ ಪರ್ಲ್, ಆಟಿಟ್ಯೂಡ್ ಬ್ಲ್ಯಾಕ್ ಮೈಕಾ, ಸಿಲ್ವರ್ ಮೆಟಾಲಿಕ್ ಮತ್ತು ಸೂಪರ್ ವೈಟ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.

Toyota Innova Mpv October 2025 Sales Report

ಇದು 7/ 8 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ದೊಡ್ಡ ಗಾತ್ರದ 300 ಲೀ.ನಷ್ಟು 300 ಲೀಟರ್‌ನಷ್ಟು ಹೊಂದಿದೆ. 185 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2850 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

ನೂತನ 'ಇನ್ನೋವಾ ಹೈಕ್ರಾಸ್' ಬಲಿಷ್ಠವಾದ 2 ಪವರ್‌ಟ್ರೇನ್‌ನ್ನು ಹೊಂದಿದೆ. 2-ಲೀ. ಪೆಟ್ರೋಲ್ ಹಾಗೂ 2-ಲೀಟರ್, 4-ಸಿಲಿಂಡರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಎಂಜಿನ್‌ನ್ನು ಒಳಗೊಂಡಿದೆ. ಸಿವಿಟಿ ಮತ್ತು ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 16.13 ರಿಂದ 23.24 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 170 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 10.69 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

Toyota Innova Mpv October 2025 Sales Report

ಈ ಎಂಪಿವಿಯು 10.1 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 4-ಸ್ಪೀಕರ್ ಮ್ಯೂಸಿಕ್ ಸಿಸ್ಟಮ್, ಆಟೋ ಎಸಿ, ಸನ್‌ರೂಫ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಮತ್ತು ರೇರ್ ಎಸಿ ವೆಂಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಹಿಲ್ ಸ್ಟಾರ್ಟ್ ಅಸಿಸ್ಟ್, ಪಾರ್ಕಿಂಗ್ ಸೆನ್ಸರ್‌ಗಳು ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಟೊಯೊಟಾ ಇನ್ನೋವಾ ಕ್ರಿಸ್ಟಾ (Toyota Innova Crysta) ಹೇಗಿದೆ:

ಇದು ರೂ.18.66 ಲಕ್ಷದಿಂದ ರೂ.25.27 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಜಿಎಕ್ಸ್, ಜಿಎಕ್ಸ್ ಪ್ಲಸ್, ವಿಎಕ್ಸ್ ಹಾಗೂ ಝಡ್ಎಕ್ಸ್ ಎಂಬ ರೂಪಾಂತರಗಳೊಂದಿಗೂ ಲಭ್ಯವಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದೆ. ಪ್ಲಾಟಿನಂ ವೈಟ್ ಪರ್ಲ್, ಸೂಪರ್ ವೈಟ್, ಸಿಲ್ವರ್ ಮೆಟಾಲಿಕ್ ಮತ್ತು ಆಟಿಟ್ಯೂಡ್ ಬ್ಲ್ಯಾಕ್ ಮೈಕಾ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 178 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ & 2,750 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಹೊಸ 'ಇನ್ನೋವಾ ಕ್ರಿಸ್ಟಾ' ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಹೊಂದಿದೆ. 2.4-ಲೀ. ಡೀಸೆಲ್ ಎಂಜಿನ್‌ ಹಾಗೂ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 10.5 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 170 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 15 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಈ ಎಂಪಿವಿ 7/ 8 ಆಸನ ಆಯ್ಕೆ ವ್ಯವಸ್ಥೆಯನ್ನು ತನ್ನದಾಗಿಸಿಕೊಂಡಿದೆ. ಹೆಚ್ಚಿನ ಲಗೇಜ್ ಕೊಂಡೊಯ್ಯಲು 300 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ರೇರ್ ಎಸಿ ವೆಂಟ್‌ಗಳು, ಆಂಬಿಯೆಂಟ್ ಲೈಟಿಂಗ್ ಒಳಗೊಂಡಂತೆ ನಾನಾ ಬಗೆಯ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 7 ಏರ್‌ಬ್ಯಾಗ್‌ಗಳು, ಇಬಿಎ (ಎಲೆಕ್ಟ್ರಾನಿಕ್ ಬ್ರೇಕ್ ಅಸಿಸ್ಟ್), ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಫ್ರಂಟ್ & ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಪಡೆದಿದೆ.

More from DriveSpark

Article Published On: Wednesday, November 19, 2025, 8:30 [IST]
English summary
Toyota innova mpv october 2025 sales report
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+