Toyota: 8-ಸೀಟರ್.. 23 ಕಿ.ಮೀ ಮೈಲೇಜ್, ಗಜ ಗಾತ್ರದ ಟೊಯೊಟಾ ಇನ್ನೋವಾಗೆ ಮನಸೋತ ಗ್ರಾಹಕರು!
ಟೊಯೊಟಾ ಇನ್ನೋವಾ (Toyota Innova) ಜಗದ್ವಿಖ್ಯಾತ ಫ್ಯಾಮಿಲಿ ಎಂಪಿವಿಯಾಗಿ ಹೊರಹೊಮ್ಮಿದೆ. ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಸ್ಪರ್ಧಾತ್ಮಕ ಬೆಲೆಯಲ್ಲಿಯೂ ಸಿಗುತ್ತದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಈ ಸೆಪ್ಟೆಂಬರ್ ತಿಂಗಳಲ್ಲೂ 'ಇನ್ನೋವಾ' ಕಾರು ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 9,783 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 8,052 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆ ವಿಶ್ಲೇಷಣೆ ಮಾಡಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 21% ಪ್ರಗತಿಯಾಗಿದೆ.
ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross) ವಿಶೇಷತೆಗಳೇನು:
ಈ ಎಂಪಿವಿಯು ರೂ.18.16 ಲಕ್ಷದಿಂದ ರೂ.30.83 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ಬೆಲೆಯನ್ನು ಹೊಂದಿದೆ. ಜಿಎಕ್ಸ್, ಜಿಎಕ್ಸ್ (ಒ), ವಿಎಕ್ಸ್ & ಜಡ್ಎಕ್ಸ್ ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಪ್ಲಾಟಿನಂ ವೈಟ್ ಪರ್ಲ್, ಆಟಿಟ್ಯೂಡ್ ಬ್ಲ್ಯಾಕ್ ಮೈಕಾ, ಸಿಲ್ವರ್ ಮೆಟಾಲಿಕ್ ಮತ್ತು ಸೂಪರ್ ವೈಟ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.

ನೂತನ 'ಇನ್ನೋವಾ ಹೈಕ್ರಾಸ್' ದೊಡ್ಡ ಗಾತ್ರದ ಕಾರಾಗಿದೆ. 4,755 ಮಿ.ಮೀ ಉದ್ದ, 1845 ಮಿ.ಮೀ ಅಗಲ & 1,795 ಮಿ.ಮೀ ಎತ್ತರವಿದೆ. 185 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2850 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ. 7/8 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು 300 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ತನ್ನದಾಗಿಸಿಕೊಂಡಿದೆ.
ಇದು ಶಕ್ತಿಶಾಲಿಯಾದ ಎರಡು ಪವರ್‌ಟ್ರೇನ್‌ನ್ನು ಪಡೆದಿದೆ. 2.0-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 2.0-ಲೀ. ಹೈಬ್ರಿಡ್ (ಎಲೆಕ್ಟ್ರಿಕ್ + ಪೆಟ್ರೋಲ್) ಎಂಜಿನ್‌ನ್ನು ಹೊಂದಿದೆ. ಸಾಮಾನ್ಯ ಕಾರುಗಳಿಗೆ ಕಮ್ಮಿಯಿಲ್ಲದ ರೀತಿಯಲ್ಲಿ 16 ರಿಂದ 23 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 170 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. 10.69 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಈ ಕಾರಿನ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. ಅದಕ್ಕೆ ತಕ್ಕಂತೆ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (10.1 ಇಂಚು), ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಪನೋರಮಿಕ್ ಸನ್‌ರೂಫ್, 9 ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಆಟೋ ಎಸಿ & ರೇರ್ ಎಸಿ ವೆಂಟ್‌ಗಳು ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.
ಹೊಸ 'ಇನ್ನೋವಾ ಹೈಕ್ರಾಸ್' ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ ಭಾರತ್ ಎನ್‌ಸಿಎಪಿಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ತನ್ನದಾಗಿಸಿಕೊಂಡಿದೆ. 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360 ಡಿಗ್ರಿ ಕ್ಯಾಮೆರಾ ಒಳಗೊಂಡಂತೆ ವಿವಿಧ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಹೊಂದಿದೆ.
ಟೊಯೊಟಾ ಇನ್ನೋವಾ ಕ್ರಿಸ್ಟಾ (Toyota Innova Crysta) ಸಹ ಖರೀದಿ ಲಭ್ಯ:
ಇದು ಕನಿಷ್ಠ ರೂ.18.66 ಲಕ್ಷ ಹಾಗೂ ಗರಿಷ್ಠ ರೂ.25.27 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ಬೆಲೆಯನ್ನು ಒಳಗೊಂಡಿದೆ. ನೋಡುಗರ ಕಣ್ಣು ಕುಕ್ಕುವಂತಹ ವಿನ್ಯಾಸವನ್ನು ಹೊಂದಿದೆ. ಪ್ಲಾಟಿನಂ ವೈಟ್ ಪರ್ಲ್, ಸೂಪರ್ ವೈಟ್, ಸಿಲ್ವರ್ ಮೆಟಾಲಿಕ್ & ಆಟಿಟ್ಯೂಡ್ ಬ್ಲ್ಯಾಕ್ ಮೈಕಾ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 185 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2850 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.
ಈ ಕಾರು 7/ 8 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಬಲಿಷ್ಠವಾದ 2.4-ಲೀ. ಡೀಸೆಲ್ ಎಂಜಿನ್‌ನ್ನು ಒಳಗೊಂಡಿದ್ದು, 8 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 170 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 9.9 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (8 ಇಂಚು), ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ರೇರ್ ಎಸಿ ವೆಂಟ್‌ಗಳು ಮತ್ತು 7-ಏರ್‌ಬ್ಯಾಗ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.


Click it and Unblock the Notifications








