Toyota: ಕರ್ನಾಟಕದಲ್ಲಿ ತಯಾರಾಗುವ ಟೊಯೊಟಾ ಕಾರುಗಳಿಗೆ ಫುಲ್ ಡಿಮ್ಯಾಂಡ್.. ಮುಗಿಬಿದ್ದ ಗ್ರಾಹಕರು!

ಟೊಯೊಟಾ (Toyota) ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿ ಹೆಸರುವಾಸಿಯಾಗಿದೆ. ರಾಜ್ಯದ ಬಿಡದಿಯಲ್ಲಿ ಅತಿ ದೊಡ್ಡ ಉತ್ಪಾದನಾ ಘಟಕವನ್ನು ಹೊಂದಿದ್ದು, ಭಾರೀ ಸಂಖ್ಯೆಯಲ್ಲಿಯೂ ಕಾರುಗಳನ್ನು ಮಾರಾಟಗೊಳಿಸುತ್ತಿದೆ. ಅದಕ್ಕೆ ಈ ಜುಲೈ ತಿಂಗಳು ಕೂಡ ಹೊರತಾಗಿಲ್ಲ. ಒಟ್ಟು 32,575 ಯುನಿಟ್‌ಗಳನ್ನು ಮಾರಲಾಗಿದೆ. 2024ರ ಇದೇ ಅವಧಿಯಲ್ಲಿ 31,656 ಮಾರಾಟ ಮಾಡಲಾಗಿತ್ತು. ಈ ಅಂಕಿ ಸಂಖ್ಯೆಗೆ ಹೋಲಿಕೆ ಮಾಡಿದರೆ, ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 3% ಪ್ರಗತಿಯಾಗಿದೆ.

ಟೊಯೊಟಾ ಈ ಮಟ್ಟದಲ್ಲಿ ಬೆಳವಣಿಗೆ ಸಾಧಿಸಲು ಹಲವು ಕಾರಣಗಳಿವೆ. ಬಹುಮುಖ್ಯವಾಗಿ, ಈ ಕಂಪನಿಯ ಕಾರುಗಳು ಅತ್ಯಾಧುನಿಕ ವಿನ್ಯಾಸ ಹಾಗೂ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿವೆ. ಜೊತೆಗೆ ಸ್ವಲ್ಪ ವಿಶಾಲ ಗಾತ್ರದಲ್ಲಿರಲಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಾಗುತ್ತವೆ. ಹೀಗಾಗಿ, ಗ್ರಾಹಕರು ಸಹ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

Toyota July 2025 Sales Report 3 percent Growth

ಟೊಯೊಟಾ ಮಾರಾಟಗೊಳಿಸುವ ಜನಪ್ರಿಯ ಕಾರುಗಳ ಕುರಿತ ಸಂಕ್ಷಿಪ್ತ ವಿವರ:

ಟೊಯೊಟಾ ಇನ್ನೋವಾ ಹೈಕ್ರಾಸ್: ಇದು ಜನಪ್ರಿಯ ಎಂಪಿವಿಯಾಗಿದೆ. ಕನಿಷ್ಠ ರೂ.19.94 ಲಕ್ಷ ಹಾಗೂ ಗರಿಷ್ಠ ರೂ.31.49 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 2.0-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 2.0-ಲೀಟರ್ ಹೈಬ್ರಿಡ್ (ಎಲೆಕ್ಟ್ರಿಕ್+ಪೆಟ್ರೋಲ್) ಎಂಜಿನ್‌ ಪಡೆದಿದ್ದು, 23.24 ಕಿ.ಮೀ ವರೆಗೂ ಮೈಲೇಜ್ ನೀಡಬಲ್ಲದು. 7/ 8 ಆಸನಗಳಿದ್ದು, 10.1-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಟೊಯೊಟಾ ಇನ್ನೋವಾ ಕ್ರಿಸ್ಟಾ: ಈ ಎಂಪಿವಿಯನ್ನು ಗ್ರಾಹಕರು ಮೆಚ್ಚಿಕೊಂಡಿದ್ದಾರೆ. ಅದಕ್ಕೆ ತಕ್ಕಂತೆ ರೂ.19.99 ಲಕ್ಷದಿಂದ ರೂ.27 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 2.4-ಲೀಟರ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದ್ದು, 8 ಕಿ.ಮೀ ವರೆಗೂ ಮೈಲೇಜ್ ಕೊಡಬಲ್ಲದು. 7/ 8 ಆಸನಗಳನ್ನು ಪಡೆದಿದೆ. 8-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್‌ನಂತಹ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

Toyota July 2025 Sales Report 3 percent Growth

ಟೊಯೊಟಾ ರೂಮಿಯನ್: ಇದೊಂದು ಅಗ್ಗದ ದರದಲ್ಲಿ ಸಿಗುವ ಎಂಪಿವಿಯಾಗಿದೆ. ಕನಿಷ್ಠ ರೂ.10.66 ಲಕ್ಷ ಮತ್ತು ಗರಿಷ್ಠ ರೂ.13.95 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.5-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಹೊಂದಿದ್ದು, 20 ರಿಂದ 26 ಕಿ.ಮೀ ವರೆಗೂ ಮೈಲೇಜ್ ನೀಡಬಲ್ಲದು. 7 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 7-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್: ಇದು ಪಮುಖ ಎಸ್‍ಯುವಿಯಾಗಿದೆ. ರೂ.7.74 ಲಕ್ಷದಿಂದ ರೂ.13 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 1.0-ಲೀಟರ್ ಪೆಟ್ರೋಲ್, 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ ಆಯ್ಕೆಯನ್ನು ಒಳಗೊಂಡಿದೆ. 19 ರಿಂದ 28 ಕಿ.ಮೀ ವರೆಗೂ ಮೈಲೇಜ್ ನೀಡಬಲ್ಲದು. 5 ಆಸನಗಳನ್ನು ತನ್ನದಾಗಿಸಿಕೊಂಡಿದೆ. 9-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್‌ನಂತಹ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

Toyota July 2025 Sales Report 3 percent Growth

ಟೊಯೊಟಾ ಗ್ಲಾನ್ಜಾ: ಇದೊಂದು ಹ್ಯಾಚ್‌ಬ್ಯಾಕ್‌ ಆಗಿದೆ. ಕನಿಷ್ಠ ರೂ.6.90 ಲಕ್ಷ ಹಾಗೂ ಗರಿಷ್ಠ ರೂ.10 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.2-ಲೀಟರ್ ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 22.35 ರಿಂದ 30.61 ಕಿ.ಮೀ ವರೆಗೂ ಮೈಲೇಜ್ ಕೊಡಬಲ್ಲದು. 5 ಆಸನಗಳನ್ನು ಹೊಂದಿದ್ದು, 9-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್: ಈ ನಂಬಿಕಾರ್ಹ ಎಸ್‍ಯುವಿ, ರೂ.11.34 ಲಕ್ಷದಿಂದ ರೂ.20.19 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.5-ಲೀಟರ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) & ಸಿಎನ್‌ಜಿ ಎಂಜಿನ್‌ ಒಳಗೊಂಡಿದೆ. 19 ರಿಂದ 28 ಕಿ.ಮೀ ವರೆಗೆ ಮೈಲೇಜ್ ನೀಡಬಲ್ಲದು. 5 ಆಸನಗಳನ್ನು ಹೊಂದಿದೆ. 9-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್‌ನಂತಹ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

More from DriveSpark

Article Published On: Friday, August 1, 2025, 17:30 [IST]
English summary
Toyota july 2025 sales report 3 percent growth
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+