Toyota: ಸಿದ್ಧರಾಗಿ.. 2026ರಲ್ಲಿ ಬಿಡುಗಡೆಗೊಳ್ಳಲಿವೆ 3 ಗಟ್ಟಿಮುಟ್ಟಾದ ಹೊಸ ಟೊಯೊಟಾ ಕಾರುಗಳು!
ಟೊಯೊಟಾ (Toyota) ಕಂಪನಿಗೆ '2026' ಮಹತ್ವದ ವರ್ಷವಾಗಿದೆ. ವಿವಿಧ ಹೊಚ್ಚ ಹೊಸ ಕಾರುಗಳನ್ನು ಬಿಡುಗಡೆಗೊಳಿಸಲು ತಯಾರಿ ಮಾಡಿಕೊಳ್ಳುತ್ತಿದೆ. ಬಹುಮುಖ್ಯವಾಗಿ ಅರ್ಬನ್ ಕ್ರೂಸರ್ ಬಿಇವಿ, 9ನೇ ತಲೆಮಾರಿನ ಹಾಗೂ ನವೀಕರಣಗೊಂಡ ಅರ್ಬನ್ ಕ್ರೂಸರ್ ಹೈರೈಡರ್ ಕಾರುಗಳು ಅದ್ದೂರಿಯಾಗಿ ಮಾರಾಟಕ್ಕೆ ಬರಲಿವೆ. ಇವುಗಳು ತುಂಬಾ ಚೆನ್ನಾಗಿರುವ ವಿನ್ಯಾಸ ಹೊಂದಿರಲಿದ್ದು, ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದಿರಲಿವೆ. ಜೊತೆಗೆ ಸ್ಪರ್ಧಾತ್ಮಕ ಬೆಲೆಯಲ್ಲಿಯೂ ಗ್ರಾಹಕರ ಖರೀದಿಗೆ ಲಭ್ಯವಾಗುವ ನಿರೀಕ್ಷೆಯಿದೆ.
ಟೊಯೊಟಾ ಅರ್ಬನ್ ಕ್ರೂಸರ್ ಬಿಇವಿ (Toyota Urban Cruiser BEV):
ಇದೊಂದು ಎಲೆಕ್ಟ್ರಿಕ್ ಚಾಲಿತ ಎಸ್‌ಯುವಿಯಾಗಿದೆ. 2026ರ ಮೊದಲರ್ಧದಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ. ರೂ.18 ಲಕ್ಷ (ಎಕ್ಸ್-ಶೋರೂಂ) ಪರಿಚಯಾತ್ಮಕ ಬೆಲೆಯನ್ನು ಹೊಂದಿರಬಹುದು ಎಂದು ಹೇಳಲಾಗಿದೆ. ಈ ವರ್ಷದ ಶುರುವಿನಲ್ಲಿಯೇ 'ಅರ್ಬನ್ ಕ್ರೂಸರ್ ಬಿಇವಿ'ಯನ್ನು ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲೂ ಪ್ರದರ್ಶಿಸಲಾಗಿತ್ತು. ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದ್ದು, ಎಲ್ಇಡಿ ಹೆಡ್‌ಲೈಟ್‌ಗಳು, 12-ಪೀಸ್ ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲೈಟ್‌ಗಳು, ಎಲ್ಇಡಿ ಟೈಲ್ ಲೈಟ್ ಹಾಗೂ ಅಲಾಯ್ ವೀಲ್‌ಗಳನ್ನು ಪಡೆದಿದೆ.

ಈ ಕಾರು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿರಲಿದೆ. 49 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 61 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿರಲಿದೆ. ಸಂಪೂರ್ಣ ಚಾರ್ಜ್‌ನಲ್ಲಿ 550 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡಬಹುದು ಎಂದು ಅಂದಾಜಿಸಲಾಗಿದೆ. 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು.
ನೂತನ 'ಅರ್ಬನ್ ಕ್ರೂಸರ್ ಬಿಇವಿ' ಬೃಹದಾಕಾರದ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಟೂ-ಸ್ಪೋಕ್ ಸ್ಟೀರಿಂಗ್ ವೀಲ್‌ಗಳು, ವೈರ್‌ಲೆಸ್ ಫೋನ್ ಚಾರ್ಜಿಂಗ್, ಆಟೋ ಎಸಿ, ಸನ್‌ರೂಫ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಹೊಂದಿರುವ ನಿರೀಕ್ಷೆಯಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಹೊಂದಿರಬಹುದು ಎನ್ನಲಾಗಿದೆ.

ಟೊಯೊಟಾ ಹಿಲಕ್ಸ್ (Toyota Hilux):
ಇದೇ ನವೆಂಬರ್‌ನಲ್ಲಿ 9ನೇ ತಲೆಮಾರಿನ 'ಟೊಯೊಟಾ ಹಿಲಕ್ಸ್' ಪಿಕ್ಅಪ್ ಟ್ರಕ್‌ನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಅನಾವರಣಗೊಳಿಸಲಾಯಿತು. 2026ರಲ್ಲಿ ದೇಶೀಯವಾಗಿಯೂ ಮಾರಾಟಕ್ಕೆ ಬರಲಿದೆ. ರೂ.30 ಲಕ್ಷದಿಂದ ರೂ.35 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿರುವ ಸಾಧ್ಯತೆಯಿದೆ. ಅತ್ಯಾಕರ್ಷಕವಾದ ಸ್ಲಿಮ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು ಮತ್ತು ಎಲ್ಇಡಿ ಟೈಲ್‌ಲೈಟ್‌ಗಳನ್ನು ಒಳಗೊಂಡಿದೆ.
ಈ ಕಾರು 2.7-ಲೀಟರ್ ಪೆಟ್ರೋಲ್ & 2.8-ಲೀಟರ್ ಮೈಲ್ಡ್-ಹೈಬ್ರಿಡ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. ಎಲೆಕ್ಟ್ರಿಕ್ ಚಾಲಿತ ಮಾಡೆಲ್, 59.2 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 240 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ ಎಂದು ಕಂಪನಿ ಹೇಳಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 12.3 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ನವೀಕರಿಸಿದ ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ (Updated Toyota Urban Cruiser Hyryder):
ಸ್ವಲ್ಪ ಮಟ್ಟಿಗೆ ನವೀಕರಣಕ್ಕೆ ಒಳಪಟ್ಟ 'ಅರ್ಬನ್ ಕ್ರೂಸರ್ ಹೈರೈಡರ್' ಕೂಡ 2026ರಲ್ಲಿ ಮಾರಾಟಕ್ಕೆ ಬರುವ ಸಾಧ್ಯತೆಯಿದೆ. ವಿನ್ಯಾಸದಲ್ಲಿ ಹಲವು ಬದಲಾವಣೆಗಳನ್ನು ಹೊಂದಿರಲಿದೆ. ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದುಕೊಂಡಿರಲಿದೆ ಎಂದು ಹೇಳಲಾಗಿದೆ.
ಪ್ರಸ್ತುತ ಗ್ರಾಹಕರ ಖರೀದಿಗೆ ದೊರೆಯುವ ಸ್ಟ್ಯಾಂಡರ್ಡ್ 'ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್' ರೂ.10.95 ಲಕ್ಷದಿಂದ ರೂ.19.76 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಹಾಗೂ 1.5-ಲೀಟರ್ ಸಿಎನ್‌ಜಿ ಆಯ್ಕೆಯನ್ನು ಹೊಂದಿದೆ. 19.20 ರಿಂದ 27.97 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಹೊಂದಿದೆ.


Click it and Unblock the Notifications








