Toyota: 26.11 Km ಮೈಲೇಜ್.. 10.54 ಲಕ್ಷ, 7-ಸೀಟರ್.. ಈ ಜನಪ್ರಿಯ ಕಾರಿನ ಮಾರಾಟ ಪ್ರಮಾಣ 204% ಏರಿಕೆ!

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motor), ಪ್ರಮುಖ ವಾಹನ ತಯಾರಕ ಕಂಪನಿಯಾಗಿದೆ. ಕರ್ನಾಟಕದ ಬಿಡದಿಯಲ್ಲಿ ಉತ್ಪಾದನಾ ಘಟಕವನ್ನು ಹೊಂದಿದ್ದು, ಇನ್ನೋವಾ, ಅರ್ಬನ್ ಕ್ರೂಸರ್ ಹೈರೈಡರ್ ಮತ್ತು ಟೈಸರ್ ಸೇರಿದಂತೆ ಹಲವು ಕಾರುಗಳನ್ನು ತಯಾರಿಸಿ ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಕಳೆದ ತಿಂಗಳು (ಜನವರಿ - 2025) ಕೂಡ ಕಂಪನಿಯು 26,178 ಯುನಿಟ್ ಕಾರುಗಳನ್ನು ಮಾರಾಟಗೊಳಿಸಿದೆ. 2024 ಇದೇ ಅವಧಿಯಲ್ಲಿ ಮಾರಲ್ಪಟ್ಟ 23,197 ಯುನಿಟ್‌ಗಳಿಗೆ ಹೋಲಿಸಿದರೆ, ಮಾರಾಟ ಪ್ರಮಾಣ ವರ್ಷದಿಂದ ವರ್ಷಕ್ಕೆ ಶೇಕಡ 13% ಏರಿಕೆಯಾಗಿದೆ. ಅದರಲ್ಲೂ ರೂಮಿಯನ್ ಎಂಪಿವಿ ಮಾರಾಟ ನಿರೀಕ್ಷಿತ ಮಟ್ಟಕ್ಕಿಂದಲೂ ಹೆಚ್ಚಳಗೊಂಡಿದೆ.

ಟೊಯೊಟಾ ಕಂಪನಿಯು ಹೋದ ತಿಂಗಳು ಬರೋಬ್ಬರಿ 1,944 ಯುನಿಟ್ ರೂಮಿಯನ್ (Rumion) ಎಂಪಿವಿಗಳನ್ನು ಯಶಸ್ವಿಯಾಗಿ ಮಾರಾಟ ಮಾಡಿದೆ. 2024 ಜನವರಿಯಲ್ಲಿ ಮಾರಾಟ ಮಾಡಿದ 639 ಯುನಿಟ್‌ಗಳಿಗೆ ಹೋಲಿಕೆ ಮಾಡಿದರೆ, ವರ್ಷದಿಂದ ವರ್ಷಕ್ಕೆ (YoY) ಶೇಕಡ 204% ಪ್ರಗತಿಯನ್ನು ಸಾಧಿಸಿದೆ.

Toyota Rumion Mpv January 2025 Report Sales 204 Percent Growth Details

2024ರ ಆಗಸ್ಟ್ ಬಳಿಕ, ಟೊಯೊಟಾ ರೂಮಿಯನ್ (Toyota Rumion) ಎಂಪಿವಿ ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಆ ತಿಂಗಳು 1,721 ಯುನಿಟ್, ಸೆಪ್ಟೆಂಬರ್‌ನಲ್ಲಿ 1,968 ಯುನಿಟ್, ಅಕ್ಟೋಬರ್‌ನಲ್ಲಿ 2,169 ಯುನಿಟ್, ನವೆಂಬರ್‌ನಲ್ಲಿ 1,803 ಹಾಗೂ ಡಿಸೆಂಬರ್‌ನಲ್ಲಿ 1,775 ರೂಮಿಯನ್ ಕಾರುಗಳನ್ನು ಮಾರಾಟ ಮಾಡಲಾಗಿದೆ.

ಟೊಯೊಟಾ ರೂಮಿಯನ್ ವಿಶೇಷತೆಗಳೇನು: ಈ ಎಂಪಿವಿ ಕನಿಷ್ಠ ರೂ.10.54 ಲಕ್ಷ ಮತ್ತು ಗರಿಷ್ಠ ರೂ.13.83 ಲಕ್ಷ ಎಕ್ಸ್-ಶೋರೂಂ ಬೆಲೆಯನ್ನು ಒಳಗೊಂಡಿದೆ. ಎಸ್, ಜಿ ಮತ್ತು ವಿ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಹೊಂದಿದೆ. ಸ್ಪಂಕಿ ಬ್ಲೂ, ರಸ್ಟಿಕ್ ಬ್ರೌನ್, ಐಕಾನಿಕ್ ಗ್ರೇ, ಕೆಫೆ ವೈಟ್ ಮತ್ತು ಎಂಟೈಸಿಂಗ್ ಸಿಲ್ವರ್ ಎಂಬ ಬಣ್ಣಗಳ ಆಯ್ಕೆಯನ್ನು ಪಡೆದಿದೆ.

ಈ ಕಾರು 1.5-ಲೀ. ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಹೊಂದಿದೆ. ಜೊತೆಗೆ ಯಾವುದೇ ಸಾಧಾರಣ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 20.11 ರಿಂದ 26.11 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ.

ನೂತನ ಎಂಪಿವಿ 7 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 209 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ತನ್ನದಾಗಿಸಿಕೊಂಡಿದೆ. 7 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್ ಮತ್ತು ಪ್ಯಾಡಲ್ ಶಿಫ್ಟರ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಟೊಯೊಟಾ ರೂಮಿಯನ್ ಎಂಪಿವಿ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 4 - ಏರ್‌ಬ್ಯಾಗ್‌ಗಳು, ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಬಿಎಸ್ (ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್), ಹಿಲ್ ಹೋಲ್ಡ್ ಅಸಿಸ್ಟ್, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Wednesday, February 12, 2025, 23:31 [IST]
English summary
Toyota rumion mpv january 2025 report sales 204 percent growth details
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+