7-ಆಸನಗಳು, ಕಮ್ಮಿ ಬೆಲೆಯ ಟೊಯೊಟಾ ರೂಮಿಯನ್ ಎಂಪಿವಿ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
ಟೊಯೊಟಾ ರೂಮಿಯನ್ (Toyota Rumion) ಪ್ರಮುಖ ಎಂಪಿವಿಯಾಗಿದೆ. ಇದು 7-ಆಸನಗಳನ್ನು ಹೊಂದಿದ್ದು, ಎರಡು ಕುಟುಂಬ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣ ಮಾಡಬಹುದು. ಅದಕ್ಕೆ ತಕ್ಕಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಸದ್ಯ, ಈ ಕಾರಿನ ದರವನ್ನು ಪರಿಷ್ಕರಣೆ ಮಾಡಲಾಗಿದ್ದು, ರೂ.10.66 ಲಕ್ಷದಿಂದ ರೂ.13.95 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ನೀವು ಹೊಚ್ಚ ಹೊಸ 'ರೂಮಿಯನ್' ಕಾರನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ನಾವಿಲ್ಲಿ, ಈ ಕಾರಿನ ಆನ್-ರೋಡ್ ಬೆಲೆ (On-Road Price) ಮತ್ತು ಇಎಂಐ (EMI) ಆಯ್ಕೆಯ ಕುರಿತಂತೆ ಸಂಕ್ಷಿಪ್ತವಾಗಿ ತಿಳಿಸಿಕೊಟ್ಟಿದ್ದೇವೆ.
ದೇಶೀಯವಾಗಿ 'ಟೊಯೊಟಾ ರೂಮಿಯನ್' ಎಂಪಿವಿ ಹಲವು ರೂಪಾಂತರಗಳೊಂದಿಗೆ (ವೇರಿಯೆಂಟ್) ಗ್ರಾಹಕರ ಖರೀದಿಗೆ ದೊರೆಯುತ್ತದೆ. ಇದರ 'ಎಸ್' (ಪೆಟ್ರೋಲ್) ರೂಪಾಂತರ ರೂ.12.30 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ. ಈ ಕಾರನ್ನು ರೂ.5 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಕೊಂಡುಕೊಂಡರೆ, ರೂ.7.30 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಕ್ಕೆ ತಿಂಗಳಿಗೆ ರೂ.15,000 ವರೆಗೆ ಇಎಂಐ ಕಟ್ಟಬೇಕು.

ಈ ಎಂಪಿವಿಯ 'ಜಿ' (ಪೆಟ್ರೋಲ್) ರೂಪಾಂತರ ರೂ.13.70 ಲಕ್ಷವರೆಗೆ ಆನ್-ರೋಡ್ ದರವನ್ನು ಒಳಗೊಂಡಿದೆ. ಇದನ್ನು ರೂ.5 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.8.70 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿಯನ್ನು ಹಾಕಿ, 5 ವರ್ಷಗಳಿಗೆ ಮಾಸಿಕ 17,500 ವರೆಗೆ ಇಎಂಐ ಪಾವತಿ ಮಾಡಬೇಕು.
ಇದೇ ರೂಮಿಯನ್ ಕಾರಿನ 'ವಿ' (ಪೆಟ್ರೋಲ್) ರೂಪಾಂತರ ರೂ.14.50 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಪಡೆದಿದೆ. ರೂ.5 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಕೊಂಡುಕೊಂಡರೆ, ರೂ.9.50 ಲಕ್ಷವರೆಗೆ ಸಾಲವಿರುತ್ತದೆ. ಅದಕ್ಕೆ ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಕ್ಕೆ ತಿಂಗಳಿಗೆ ರೂ.19,000 ವರೆಗೆ ಇಎಂಐ ಕಟ್ಟಬೇಕು.

ನೂತನ ಟೊಯೊಟಾ ರೂಮಿಯನ್ ಎಂಪಿವಿಯ 'ಎಸ್' (ಸಿಎನ್‌ಜಿ) ರೂಪಾಂತರ, ರೂ.13.45 ಲಕ್ಷವರೆಗೆ ಆನ್-ರೋಡ್ ದರವನ್ನು ಹೊಂದಿದೆ. ರೂ.5 ಲಕ್ಷ ಡೌನ್-ಪೇಮೆಂಟ್ ಕಟ್ಟಿ ತೆಗೆದುಕೊಂಡರೆ, ರೂ.8.45 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿಯನ್ನು ಹಾಕಿ, 5 ವರ್ಷಗಳಿಗೆ ಮಾಸಿಕ 17,000 ವರೆಗೆ ಇಎಂಐ ಪಾವತಿ ಮಾಡಬೇಕು.
ಹೊಸ ರೂಮಿಯನ್ ಕಾರು ಹೊರಭಾಗದಲ್ಲಿ ನೋಡುಗರ ಕಣ್ಣು ಕುಕ್ಕುವಂತಹ ವಿನ್ಯಾಸವನ್ನು ಹೊಂದಿದೆ. ಹ್ಯಾಲೊಜೆನ್ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, 'ಎಲ್' ಆಕಾರದಂತಿರುವ ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಒಳಗೊಂಡಿದೆ. ಸ್ಪಂಕಿ ಬ್ಲೂ, ರಸ್ಟಿಕ್ ಬ್ರೌನ್, ಎಂಟೈಸಿಂಗ್ ಸಿಲ್ವರ್, ಐಕಾನಿಕ್ ಗ್ರೇ ಮತ್ತು ಕೆಫೆ ವೈಟ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 209 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2740 ವೀಲ್‌ಬೇಸ್‌ನ್ನು ಪಡೆದಿದೆ.

ಈ ಎಂಪಿವಿಯು ಮಾರುತಿ ಸುಜುಕಿ ಎರ್ಟಿಗಾದ ರೀ-ಬ್ಯಾಡ್ಜ್ ಮಾಡೆಲ್ ಆಗಿದ್ದು, ಎರಡು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ತನ್ನಾದಾಗಿಸಿಕೊಂಡಿದೆ. 1.5-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಹೊಂದಿದ್ದು, 5-ಸ್ಪೀಡ್ ಮ್ಯಾನುವಲ್ & 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 20.51 26.1 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ.
ಇದರ ಕ್ಯಾಬಿನ್ ತುಂಬಾ ಅಚ್ಚುಕಟ್ಟಾಗಿದೆ. 7-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, 6-ಸ್ಪೀಕರ್ ಸೌಂಡ್ ಸಿಸ್ಟಮ್, ಆಟೋಮೆಟಿಕ್ ಎಸಿ, ಪ್ಯಾಡಲ್ ಶಿಫ್ಟರ್‌ಗಳು, ಪುಶ್-ಬಟನ್ ಎಂಜಿನ್ ಸ್ಟಾರ್ಟ್/ಸ್ಟಾಪ್ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 4 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ಒಳಗೊಂಡಿದೆ.
ನಿಮ್ಮ ಗಮನಕ್ಕೆ.. ಈ ಟೊಯೊಟಾ ರೂಮಿಯನ್ ಎಂಪಿವಿ ಆನ್-ರೋಡ್ ಬೆಲೆ ಹಾಗೂ ಸಾಲದ ಆಯ್ಕೆಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.


Click it and Unblock the Notifications








