26.11 ಕಿ.ಮೀ ಮೈಲೇಜ್.. 7-ಸೀಟರ್.. ಸದ್ದಿಲ್ಲದೇ ಅಗ್ಗದ ಟೊಯೊಟಾ ಕಾರಿನ ಬೆಲೆಯೂ ಏರಿಕೆ.. ನೂತನ ದರವೆಷ್ಟು?
ಟೊಯೊಟಾ ರೂಮಿಯನ್ (Toyota Rumion) ಜನಪ್ರಿಯ ಎಂಪಿವಿಯಾಗಿದೆ. ಇದು ದೊಡ್ಡ ಗಾತ್ರದ ಕಾರಾಗಿದ್ದು, ವಿಶ್ವಾಸಾರ್ಹತೆಗೂ ಹೆಸರುವಾಸಿಯಾಗಿದೆ. ಗ್ರಾಹಕರು ಕೂಡ ಮುಗಿಬಿದ್ದು ಖರೀದಿ ಮಾಡುತ್ತಿದ್ದಾರೆ. ಈ ವರ್ಷದ ಮೊದಲರ್ಧದಲ್ಲೂ ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 11,630 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಸದ್ಯ, ಇದೇ 'ರೂಮಿಯನ್' ಎಂಪಿವಿ ಬೆಲೆ ಏರಿಕೆಯಾಗಿದೆ ಎಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ಹೊಚ್ಚ ಹೊಸ ಟೊಯೊಟಾ ರೂಮಿಯನ್ ಕಾರಿನ ಎಲ್ಲ ರೂಪಾಂತರಗಳ (ವೇರಿಯೆಂಟ್) ಬೆಲೆಯನ್ನು ರೂ.12,500 ವರೆಗೆ ಏರಿಕೆ ಮಾಡಲಾಗಿದೆ. ಇನ್ಮುಂದೆ ಈ ಎಂಪಿವಿ ರೂ.10.66 ಲಕ್ಷದಿಂದ ರೂ.13.95 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿರಲಿದೆ ಎಂಬ ವಿವರಗಳು ಲಭ್ಯವಾಗಿವೆ.

ಹೊಸ ರೂಮಿಯನ್ ಮಾರುತಿ ಸುಜುಕಿ ಎರ್ಟಿಗಾ ಕಾರಿನ ರೀ-ಬ್ಯಾಡ್ಜ್ ಮಾಡೆಲ್ ಆಗಿದ್ದು, ಎಸ್, ಜಿ, ಮತ್ತು ವಿ ಎಂಬ ರೂಪಾಂತರಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಹ್ಯಾಲೊಜೆನ್ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, ಕ್ರೋಮ್ ಫಿನಿಶ್ ಬಂಪರ್ ಹಾಗೂ 'ಎಲ್' ಆಕಾರಕ್ಕೆ ಹೋಲಿಕೆಯಾಗುವ ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಪಡೆದಿದೆ. ಎಂಟೈಸಿಂಗ್ ಸಿಲ್ವರ್, ಸ್ಪಂಕಿ ಬ್ಲೂ, ರಸ್ಟಿಕ್ ಬ್ರೌನ್, ಐಕಾನಿಕ್ ಗ್ರೇ & ಕೆಫೆ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ಇದರಲ್ಲಿ 7 ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಓಡಾಟ ನಡೆಸಬಹುದು. ವಾರಾಂತ್ಯ & ರಜಾದಿನಗಳಲ್ಲಿ ದೂರದ ಊರುಗಳಿಗೆ ಕುಟುಂಬದೊಂದಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು 209 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ. 4420 ಎಂಎಂ ಉದ್ದ, 1735 ಎಂಎಂ ಅಗಲ ಮತ್ತು 1690 ಎಂಎಂ ಎತ್ತರವು ಇದೆ. ಜೊತೆಗೆ 209 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2740 ವೀಲ್‌ಬೇಸ್‌ನ್ನು ಪಡೆದಿದೆ.

ಈ ಕಾರು ಬಲಿಷ್ಠವಾದ 2 ಪವರ್‌ಟ್ರೇನ್‌ನ್ನು ಪಡೆದಿದೆ. ಇದರ 1.5-ಲೀಟರ್ ಸಾಮರ್ಥ್ಯದ ಪೆಟ್ರೋಲ್ ಎಂಜಿನ್, 103 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 137 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 20.51 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.
ಇನ್ನೊಂದು 1.5-ಲೀಟರ್ ಸಿಎನ್‌ಜಿ ಎಂಜಿನ್, 88 ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 121.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯಲ್ಲಿ ಮಾತ್ರ ದೊರೆಯಲಿದ್ದು, 26.1 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.

ನೂತನ ರೂಮಿಯನ್ 170 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 12 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಈ ಕಾರಿನ ಕ್ಯಾಬಿನ್ ವಿನ್ಯಾಸವು ತುಂಬಾ ಅಚ್ಚುಕಟ್ಟಾಗಿದೆ. 7-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 6-ಸ್ಪೀಕರ್ ಸೌಂಡ್ ಸಿಸ್ಟಮ್, ಆಟೋಮೆಟಿಕ್ ಎಸಿ, ಪ್ಯಾಡಲ್ ಶಿಫ್ಟರ್‌ಗಳು, ಪುಶ್-ಬಟನ್ ಎಂಜಿನ್ ಸ್ಟಾರ್ಟ್/ ಸ್ಟಾಪ್ ಹಾಗೂ ಕೀಲೆಸ್ ಎಂಟ್ರಿ ಸೇರಿಂದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.
ಹೊಸ ರೂಮಿಯನ್ ಎಂಪಿವಿ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 4 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಿಲ್ ಹೋಲ್ಡ್ ಅಸಿಸ್ಟ್, ಕ್ರೂಸ್ ಕಂಟ್ರೋಲ್ ಹಾಗೂ ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ಒಳಗೊಂಡಿದೆ.


Click it and Unblock the Notifications








