26 Km ಮೈಲೇಜ್.. 7-ಸೀಟರ್, 10 ಲಕ್ಷ.. ಈ ಜನಪ್ರಿಯ MPV ಕುರಿತ ಪ್ರಮುಖಾಂಶಗಳು!

ಟೊಯೊಟಾ ರೂಮಿಯನ್ (Toyota Rumion) ವಿಶ್ವಾಸಾರ್ಹ ಎಂಪಿವಿ ಎಂದೇ ಹೆಸರುವಾಸಿಯಾಗಿದೆ. ಇದು ನೋಡಲು ತುಂಬಾ ಚೆನ್ನಾಗಿದ್ದು, ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದಿದೆ. ಗ್ರಾಹಕರು ಸಹ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿ ಮಾಡಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ, 'ರೂಮಿಯನ್' ಹೆಚ್ಚು ಸೂಕ್ತವಾಗಲಿದೆ. ಇಲ್ಲಿ ಈ ಎಂಪಿವಿಯ ಬೆಲೆ ಹಾಗೂ ವಿಶೇಷತೆಗಳ ಕುರಿತ ಪ್ರಮುಖಾಂಶಗಳು ಏನೆಂಬುದನ್ನು ತಿಳಿಸಿಕೊಟ್ಟಿದ್ದೇವೆ.

ಬೆಲೆ & ರೂಪಾಂತರಗಳು (Price & Variants):

ಇದು ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿದೆ. ರೂ.10.44 ಲಕ್ಷದಿಂದ ರೂ.13.62 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದ್ದು, ಮಧ್ಯಮ ಹಾಗೂ ಶ್ರೀಮಂತ ವರ್ಗದ ಖರೀದಿದಾರರು ಸುಲಭವಾಗಿ ಮನೆಗೆ ತರಬಹುದು. ಎಸ್ (S), ಜಿ (G) ಹಾಗೂ ವಿ (V) ಎಂಬ ರೂಪಾಂತರಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

Toyota Rumion Mpv Price Mileage Features And All Highlights

ವಿನ್ಯಾಸ & ಬಣ್ಣಗಳು (Design & Colors):

ಈ ಕಾರು 'ಮಾರುತಿ ಸುಜುಕಿ ಎರ್ಟಿಗಾ'ದ ರೀ-ಬ್ಯಾಡ್ಜ್ ಮಾಡೆಲ್ ಆಗಿದೆ. ಸಾಕಷ್ಟು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಹ್ಯಾಲೊಜೆನ್ ಪ್ರೊಜೆಕ್ಟರ್‌ ಹೆಡ್‌ಲೈಟ್‌ಗಳು, ಕ್ರೋಮ್ ಫಿನಿಶ್ ಬಂಪರ್, 'ಎಲ್' ಆಕಾರದಲ್ಲಿರುವ ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ 15-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಐಕಾನಿಕ್ ಗ್ರೇ, ರಸ್ಟಿಕ್ ಬ್ರೌನ್, ಸ್ಪಂಕಿ ಬ್ಲೂ, ಕೆಫೆ ವೈಟ್ & ಎಂಟೈಸಿಂಗ್ ಸಿಲ್ವರ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಸುತ್ತಳತೆ (Dimensions):

ನೂತನ 'ರೂಮಿಯನ್' ಹೆಚ್ಚು ವಿಶಾಲ ಗಾತ್ರದಲ್ಲಿದೆ. 4,420 ಮಿ.ಮೀ ಉದ್ದ, 1,735 ಮಿ.ಮೀ ಅಗಲ ಹಾಗೂ 1,690 ಮಿ.ಮೀ ಎತ್ತರವಿದೆ. 209 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,740 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 1,185 ಕೆಜಿ ತೂಕವಿದೆ.

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):

ಇದು 7 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಸುಲಭವಾಗಿ ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 209 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.

ಕಾರ್ಯಕ್ಷಮತೆ (Performance):

ಈ ಕಾರು 2 ಪವರ್‌ಟ್ರೇನ್‌ನ್ನು ಒಳಗೊಂಡಿದೆ. ಇದರ 1.5-ಲೀ. ಪೆಟ್ರೋಲ್ ಎಂಜಿನ್, 6,000 ಆರ್‌ಪಿಎಂನಲ್ಲಿ 102 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 4,400 ಆರ್‌ಪಿಎಂನಲ್ಲಿ 137 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಹಾಗೂ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 20.51 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ.

ಮತ್ತೊಂದು 1.5-ಲೀ. ಪೆಟ್ರೋಲ್ + ಸಿಎನ್‌ಜಿ ಎಂಜಿನ್, 5,500 ಆರ್‌ಪಿಎಂನಲ್ಲಿ 86 ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 4,200 ಆರ್‌ಪಿಎಂನಲ್ಲಿ 121.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 26 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ.

ಒಳಾಂಗಣ & ವೈಶಿಷ್ಟ್ಯಗಳು (Interior & Features):

ಹೊಸ 'ರೂಮಿಯನ್' ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 170 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 7 ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 6 ಸ್ಪೀಕರ್ ಸೌಂಡ್ ಸಿಸ್ಟಮ್, ಆಟೋಮೆಟಿಕ್ ಎಸಿ, ಪುಶ್ ಬಟನ್ ಎಂಜಿನ್ ಸ್ಟಾರ್ಟ್/ಸ್ಟಾಪ್ ಮತ್ತು ಕೀಲೆಸ್ ಎಂಟ್ರಿ ಸೇರಿಂದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features):

ಇದು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಿಲ್ ಹೋಲ್ಡ್ ಅಸಿಸ್ಟ್, ಕ್ರೂಸ್ ಕಂಟ್ರೋಲ್ ಮತ್ತು ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ಹೊಂದಿದೆ.

More from DriveSpark

Article Published On: Monday, November 17, 2025, 16:35 [IST]
English summary
Toyota rumion mpv price mileage features and all highlights
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+