Toyota: 26.11 Km ಮೈಲೇಜ್.. 7-ಸೀಟರ್.. ಈ ಜನಪ್ರಿಯ ಫ್ಯಾಮಿಲಿ ಕಾರನ್ನು ಖರೀದಿಸಬೇಕೇ.. ನಿಮಗಿದು ಗೊತ್ತಿರಲಿ!
ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motor), ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯು ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga) ರೀ-ಬ್ಯಾಡ್ಜ್ ಮಾಡೆಲ್ ರೂಮಿಯನ್ (Rumion) ಎಂಪಿವಿಯನ್ನು ಮಾರಾಟಗೊಳಿಸುತ್ತಿದೆ. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ, ಈ ಕಾರಿನ ಬೆಲೆಯನ್ನು ಕೊಂಚ ಮಟ್ಟಿಗೆ ಅಧಿಕಗೊಳಿಸಲಾಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ನೂತನ ಟೊಯೊಟಾ ರೂಮಿಯನ್ (Toyota Rumion) ಎಂಪಿವಿ ಬೆಲೆಯನ್ನು ರೂ.10,000 ಏರಿಕೆ ಮಾಡಲಾಗಿದೆ. ಇದರೊಂದಿಗೆ ಈ ಕಾರು, ಕನಿಷ್ಠ ರೂ.10.54 ಲಕ್ಷ ಹಾಗೂ ಗರಿಷ್ಠ ರೂ.13.83 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಎಸ್, ಜಿ, ಹಾಗೂ ವಿ ಎಂಬ ಆಕರ್ಷಕ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ದೊರೆಯುತ್ತದೆ.

ಈ ಫ್ಯಾಮಿಲಿ ಕಾರು ಹೊರಭಾಗದಲ್ಲಿ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. 4420 ಎಂಎಂ ಉದ್ದ, 1735 ಎಂಎಂ ಅಗಲ ಹಾಗೂ 1690 ಎಂಎಂ ಎತ್ತರವಿದೆ. ಜೊತೆಗೆ 2740 ವೀಲ್‌ಬೇಸ್‌ನ್ನು ಒಳಗೊಂಡಿದೆ. ಸ್ಪಂಕಿ ಬ್ಲೂ, ರಸ್ಟಿಕ್ ಬ್ರೌನ್, ಐಕಾನಿಕ್ ಗ್ರೇ, ಕೆಫೆ ವೈಟ್ ಹಾಗೂ ಎಂಟೈಸಿಂಗ್ ಸಿಲ್ವರ್ ಎಂಬ ಬಣ್ಣಗಳ ಆಯ್ಕೆಯನ್ನು ಪಡೆದಿದೆ.
ಹೊಸ ಟೊಯೊಟಾ ರೂಮಿಯನ್ ಎಂಪಿವಿ 7 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಸಂಚಾರ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ತೆರಳುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 209 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.

ನೂತನ ಕಾರು ಎರಡು ಪವರ್‌ಟ್ರೇನ್ ಆಯ್ಕೆಯಲ್ಲಿ ಸಿಗುತ್ತದೆ. ಇದರ 1.5-ಲೀಟರ್ ಪೆಟ್ರೋಲ್ ಎಂಜಿನ್ 103 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 137 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಹಾಗೂ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.
ಮತ್ತೊಂದು 1.5-ಲೀಟರ್ ಸಿಎನ್‌ಜಿ ಎಂಜಿನ್ 88 ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 121.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ 20.11 ರಿಂದ 26.11 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ.

ಈ ಎಂಪಿವಿ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ (7-ಇಂಚು), ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 6-ಸ್ಪೀಕರ್ ಸೌಂಡ್ ಸಿಸ್ಟಮ್, ಆಟೋಮೆಟಿಕ್ ಎಸಿ, ಕ್ರೂಸ್ ಕಂಟ್ರೋಲ್, ಪ್ಯಾಡಲ್ ಶಿಫ್ಟರ್‌ಗಳು, ಪುಶ್-ಬಟನ್ ಎಂಜಿನ್ ಸ್ಟಾರ್ಟ್/ ಸ್ಟಾಪ್, ಕೀಲೆಸ್ ಎಂಟ್ರಿಯಂತಹ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.
ಹೊಸ ಟೊಯೊಟಾ ರೂಮಿಯನ್ ಎಂಪಿವಿ ಪ್ರಯಾಣಿಕರ ರಕ್ಷಣೆಗಾಗಿ ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಇದು 4-ಏರ್‌ಬ್ಯಾಗ್‌ಗಳು, ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಿಲ್ ಹೋಲ್ಡ್ ಅಸಿಸ್ಟ್ ಹಾಗೂ ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








