26 Km ಮೈಲೇಜ್: 2 ಕುಟುಂಬ ಪ್ರಯಾಣಿಸಬಹುದಾದ ಸಾಮಾನ್ಯ ಜನರ ಅಂಬಾರಿಗೆ ಕ್ಯೂ ನಿಂತ ಜನ

ಜನಪ್ರಿಯ ವಾಹನ ತಯಾರಕ ಕಂಪನಿಯಾದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motor - TKM) ತನ್ನ ರೂಮಿಯನ್ (Rumion) ಎಂಪಿವಿಯನ್ನು ಭರ್ಜರಿಯಾಗಿ ಮಾರಾಟ ಮಾಡುತ್ತಿದೆ. ಇದು ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga) ರೀ-ಬ್ಯಾಡ್ಜ್ ಆವೃತ್ತಿಯಾಗಿದೆ. ಇದೀಗ ಟೊಯೊಟಾ ಕಂಪನಿಯು ಕಳೆದ ತಿಂಗಳ ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ. 2024ರ ಡಿಸೆಂಬರ್ ತಿಂಗಳಿನಲ್ಲಿ ಟೊಯೊಟಾ ರೂಮಿಯನ್ ಮಾದರಿಯ 1,775 ಯುನಿಟ್ ಗಳು ಮಾರಾಟವಾಗಿವೆ. ಕಳೆದ ವರ್ಷದ ಡಿಸೆಂಬರ್ ತಿಂಗಳಿನಲ್ಲಿ 833ಯುನಿಟ್ ಗಳು ಮಾರಾಟವಾಗಿತ್ತು.

ಇನ್ನು ಕಳೆದ ವರ್ಷದ ಡಿಸೆಂಬರ್ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.113 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಈ ಟೊಯೊಟಾ ರೂಮಿಯನ್ (Toyota Rumion) ಮಾದರಿಯು ಭಾರತದಲ್ಲಿ ಹಲವು ರೂಪಾಂತರಗಳಲ್ಲಿ ಲಭ್ಯವಿದೆ. ಈ ಎಂಪಿವಿಯು ಐಕಾನಿಕ್ ಗ್ರೇ, ಸ್ಪಂಕಿ ಬ್ಲೂ, ಕೆಫೆ ವೈಟ್ ಮತ್ತು ಎಂಟೈಸಿಂಗ್ ಸಿಲ್ವರ್ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಿದೆ. ಈ ಕಾರಿನಲ್ಲಿ 7 ಮಂದಿ ಆರಾಮದಾಯವಾಗಿ ಪ್ರಯಾಣಿಸಬಹುದು.

Toyota Rumion

ಈ ಕಾರು ಪೆಟ್ರೋಲ್ ಹಾಗೂ ಸಿಎನ್‌ಜಿ ಪವರ್‌ಟ್ರೇನ್ ಆಯ್ಕೆಯನ್ನು ಪಡೆದಿದೆ. ಇದರ 1.5-ಲೀಟರ್ ಪೆಟ್ರೋಲ್ ಎಂಜಿನ್ 103 ಪಿಎಸ್ ಪವರ್ ಮತ್ತು 137 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 5-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಒಳಗೊಂಡಿದೆ.

ಸಿಎನ್‌ಜಿ ಚಾಲಿತ ರೂಪಾಂತರವು ಇದೇ ಎಂಜಿನ್ ಆಯ್ಕೆಯನ್ನು ಹೊಂದಿದೆ. ಆದರೆ, 88 ಪವರ್ ಹಾಗೂ 121.5 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ ಮಾತ್ರ ಲಭ್ಯವಿದೆ. ರೂಪಾಂತರಗಳಿಗೆ ಅನುಗುಣವಾಗಿ 20.11 ರಿಂದ 26.11 ಕಿ.ಮೀ.ವರೆಗೆ ಮೈಲೇಜ್ ನೀಡುತ್ತದೆ.

Toyota Rumion

ಈ ಟೊಯೊಟಾ ರೂಮಿಯನ್ ಎಂಪಿವಿಯು ಫೀಚರ್ಸ್ ದೃಷ್ಟಿಯಿಂದಲ್ಲೂ ಅತ್ಯುತ್ತಮವಾಗಿದ್ದು, 7 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ಪ್ಯಾಡಲ್ ಶಿಫ್ಟರ್‌ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಜೊತೆಗೆ 209 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಅನ್ನು ಹೊಂದಿದೆ.

ಸುರಕ್ಷತೆಯ ವಿಚಾರದಲ್ಲೂ ಈ ಕಾರು ಅತ್ಯಾಧುನಿಕವಾಗಿದ್ದು, 4 ಏರ್‌ಬ್ಯಾಗ್‌, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಹಿಲ್ ಹೋಲ್ಡ್ ಅಸಿಸ್ಟ್, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ರೇರ್ ಪಾರ್ಕಿಂಗ್ ಕ್ಯಾಮೆರಾ, ISOFIX ಚೈಲ್ಡ್ ಸೀಟ್ ಆಂಕರ್ಸ್ ಅನ್ನು ಪಡೆದಿದೆ. ಟೊಯೊಟಾ ರೂಮಿಯನ್ ಎಂಪಿವಿಗೆ ಕಿಯಾ ಕ್ಯಾರೆನ್ಸ್, ಮಹೀಂದ್ರಾ ಮರಾಜೋ ಪ್ರತಿಸ್ಪರ್ಧಿಯಾಗಿವೆ.

Toyota Rumion

ಇನ್ನು ಬೆಂಗಳೂರಿನಲ್ಲಿ ಹೊಚ್ಚ ಹೊಸ ಟೊಯೊಟಾ ರೂಮಿಯನ್ ಹಲವು ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಸಿಗುತ್ತದೆ. ಈ ಟೊಯೊಟಾ ರೂಮಿಯನ್ ಎಂಪಿವಿ ಮಾದರಿಯು ಐಕಾನಿಕ್ ಗ್ರೇ, ಸ್ಪಂಕಿ ಬ್ಲೂ ಹಾಗೂ ಕೆಫೆ ವೈಟ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ. ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರುವುದು ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ರೂಮಿಯನ್ ಕಾರನ್ನು ಖರೀದಿ ಮಾಡುತ್ತಿದ್ದಾರೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, January 13, 2025, 11:36 [IST]
English summary
Toyota rumion sales in december 2024 details
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+