Toyota Cars: ಜನ ಮುಗಿಬಿದ್ದು ಖರೀದಿ.. ಫುಲ್ ಡಿಮ್ಯಾಂಡ್, ಆಗಸ್ಟ್‌ನಲ್ಲಿ ಭಾರೀ ಸಂಖ್ಯೆಯಲ್ಲಿ ಮಾರಾಟ!

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motor), ಪ್ರಮುಖ ವಾಹನ ತಯಾರಕ ಕಂಪನಿಯಾಗಿ ಹೊರಹೊಮ್ಮಿದೆ. ದೇಶೀಯ ಮಾರುಕಟ್ಟೆಯಲ್ಲಿ ವಿವಿಧ ಕಾರುಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಗ್ರಾಹಕರು ಕೂಡ ತಾ ಮುಂದು - ನಾಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಈ 2025ರ ಆಗಸ್ಟ್‌ನಲ್ಲೂ ಕಂಪನಿಯ ಕಾರುಗಳನ್ನು ಭಾರೀ ಸಂಖ್ಯೆಯಲ್ಲಿ ಮಾರಾಟ ಮಾಡಲಾಗಿದೆ. ಒಟ್ಟು 34,236 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಣೆ ಮಾಡಲಾಗಿದೆ. ಇದರೊಂದಿಗೆ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 11% ಪ್ರಗತಿಯಾಗಿದೆ. 2024ರ ಇದೇ ಅವಧಿಯಲ್ಲಿ 30,879 ಯುನಿಟ್‌ಗಳನ್ನು ಮಾರಲಾಗಿತ್ತು.

ಇದೇ ವರ್ಷದ ಜನವರಿಯಿಂದ ಆಗಸ್ಟ್ ತಿಂಗಳವರೆಗೆ ಟೊಯೊಟಾ ಕಾರುಗಳು ದೊಡ್ಡ ಸಂಖ್ಯೆಯಲ್ಲಿ ಮಾರಾಟವಾಗಿವೆ. ಈ 8 ತಿಂಗಳಲ್ಲೇ 2,41,696 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. 2024ರ ಆಗಸ್ಟ್‌ನಲ್ಲಿ 2,12,785 ಮಾರಲಾಗಿತ್ತು. ಅದಕ್ಕೆ ಹೋಲಿಕೆ ಮಾಡಿದರೆ, ಶೇಕಡ 14% ಬೆಳವಣಿಗೆ ಸಾಧಿಸಲಾಗಿದೆ.

Toyota Sales 34 236 Units In August 2025 Details

ಟೊಯೊಟಾ ಕಂಪನಿಯು ಕಾರು ಮಾರಾಟದಲ್ಲಿ ಈ ಮಟ್ಟದಲ್ಲಿ ಅಭಿವೃದ್ಧಿ ಸಾಧಿಸಲು ಇನ್ನೋವಾ ಹೈಕ್ರಾಸ್, ಇನ್ನೋವಾ ಕ್ರಿಸ್ಟಾ, ಟೈಸರ್, ಹೈರೈಡರ್, ಫಾರ್ಚುನರ್, ರೂಮಿಯನ್ ಹಾಗೂ ಗ್ಲಾನ್ಜಾಗಳು ಪ್ರಮುಖ ಕಾರಣವಾಗಿವೆ. ಇವುಗಳು ಸ್ಪರ್ಧಾತ್ಮಕ ಬೆಲೆಯಲ್ಲಿ ಖರೀದಿಗೆ ದೊರೆಯುವುದು ಮಾತ್ರವಲ್ಲದೆ, ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿವೆ.

ಟೊಯೊಟಾ ಇನ್ನೋವಾ ಹೈಕ್ರಾಸ್:

ಇದೊಂದು ಎಂಪಿವಿಯಾಗಿದೆ. ಕನಿಷ್ಠ ರೂ.19.94 ಲಕ್ಷ ಹಾಗೂ ಗರಿಷ್ಠ ರೂ.32.58 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 2.0-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 2.0-ಲೀಟರ್ ಹೈಬ್ರಿಡ್ (ಎಲೆಕ್ಟ್ರಿಕ್+ಪೆಟ್ರೋಲ್) ಎಂಜಿನ್‌ನ್ನು ಪಡೆದಿದೆ. 7/8 ಆಸನಗಳನ್ನು ಹೊಂದಿದೆ. 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಸನ್‌ರೂಫ್ ಮತ್ತು 6-ಏರ್‌ಬ್ಯಾಗ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Toyota Sales 34 236 Units In August 2025 Details

ಟೊಯೊಟಾ ಇನ್ನೋವಾ ಕ್ರಿಸ್ಟಾ:

ಈ ಎಂಪಿವಿಯು ರೂ.19.99 ಲಕ್ಷದಿಂದ ರೂ.27 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 2.4-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 7/8 ಆಸನಗಳನ್ನು ತನ್ನದಾಗಿಸಿಕೊಂಡಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ರೇರ್ ಎಸಿ ವೆಂಟ್‌ಗಳು, 7-ಏರ್‌ಬ್ಯಾಗ್‌ಗಳು, ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್:

ಇದು ಕೂಡ ಎಸ್‌ಯುವಿಯಾಗಿದೆ. ಕನಿಷ್ಠ ರೂ.11.34 ಲಕ್ಷ ಮತ್ತು ರೂ.20.19 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.5-ಲೀಟರ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಮತ್ತು ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 5 ಆಸನಗಳನ್ನು ಹೊಂದಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಪನೋರಮಿಕ್ ಸನ್‌ರೂಫ್ ಮತ್ತು 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

Toyota Sales 34 236 Units In August 2025 Details

ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್:

ಈ ಎಸ್‌ಯುವಿ ಸ್ಪರ್ಧಾತ್ಮಕ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ರೂ.7.89 ಲಕ್ಷದಿಂದ ರೂ.13.19 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 5 ಆಸನಗಳನ್ನು ಒಳಗೊಂಡಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್‌ಗಳು ಹಾಗೂ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಟೊಯೊಟಾ ಗ್ಲಾನ್ಜಾ:

ಇದೊಂದು ಪ್ರೀಮಿಯಂ ಹ್ಯಾಚ್‌ಬ್ಯಾಕ್‌ ಆಗಿದೆ. ಕನಿಷ್ಠ ರೂ.6.90 ಲಕ್ಷ ಹಾಗೂ ಗರಿಷ್ಠ ರೂ.10 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಸಂಚಾರ ಮಾಡಬಹುದು. 9-ಇಂಚಿನ ಎಂಜಿನ್ ಸ್ಟಾರ್ಟ್/ಸ್ಟಾಪ್ ಸಿಸ್ಟಮ್, ಆಟೋ ಕ್ಲೇಮೇಟ್ ಕಂಟ್ರೋಲ್ ಮತ್ತು 6 ಏರ್‌ಬ್ಯಾಗ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

More from DriveSpark

Article Published On: Monday, September 1, 2025, 16:11 [IST]
English summary
Toyota sales 34236 units in august 2025 details
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+