ಕರ್ನಾಟಕದಲ್ಲಿ ತಯಾರಾಗುವ ಟೊಯೊಟಾ ಕಾರುಗಳಿಗೆ ಫುಲ್ ಡಿಮ್ಯಾಂಡ್.. ಮುಗಿಬಿದ್ದ ಗ್ರಾಹಕರು!
ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motor), ಪ್ರಮುಖ ಕಾರು ತಯಾರಕ ಕಂಪನಿಯಾಗಿ ಹೊರಹೊಮ್ಮಿದೆ. ದೇಶೀಯ ಮಾರುಕಟ್ಟೆಯಲ್ಲಿ ಹ್ಯಾಚ್‌ಬ್ಯಾಕ್, ಎಸ್‌ಯುವಿ ಹಾಗೂ ಎಂಪಿವಿಗಳು ಸೇರಿದಂತೆ ವಿವಿಧ ಕಾರುಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ವಿಶೇಷವಾಗಿ ಕರ್ನಾಟಕದ ಬಿಡದಿಯಲ್ಲಿ ಕಂಪನಿಯ ಕಾರುಗಳು ತಯಾರಾಗುತ್ತಿವೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಈ ನವೆಂಬರ್ ತಿಂಗಳಲ್ಲೂ ಟೊಯೊಟಾದ ಕಾರುಗಳು ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿವೆ. ಬರೋಬ್ಬರಿ 33,752 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2024ರ ಇದೇ ಅವಧಿಯಲ್ಲಿ 26,323 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯನ್ನು ವಿಶ್ಲೇಷಿಸಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 28% ಪ್ರಗತಿಯಾಗಿದೆ.
ಈ ಬಗ್ಗೆ ಟೊಯೊಟಾದ ಮಾರಾಟ ವಿಭಾಗದ ಉಪಾಧ್ಯಕ್ಷರಾದ ವರೀಂದರ್ ವಾಧ್ವಾ ಅವರು ಪ್ರತಿಕ್ರಿಯಿಸಿದ್ದಾರೆ. 'ಹಬ್ಬದ ಋತುವಿನ ಬಳಿಕವು ಕೇಂದ್ರ ಸರ್ಕಾರದ ಜಿಎಸ್‌ಟಿ ಸುಧಾರಣೆಯಿಂದ ಉತ್ತಮವಾದ ಬೆಳವಣಿಗೆಯನ್ನು ದಾಖಲಿಸಿದ್ದೇವೆ. ಇದರೊಂದಿಗೆ, ಒಟ್ಟಾರೆ ಮಾರಾಟದ ಅಭಿವೃದ್ಧಿಗೆ ಅರ್ಬನ್ ಕ್ರೂಸರ್ ಹೈರೈಡರ್ ಏರೋ ಎಡಿಷನ್ ಹಾಗೂ ಫಾರ್ಚೂನರ್ ಲೀಡರ್ ಎಡಿಷನ್‌ಗಳ ಪರಿಚಯವು ಸಹ ಸಾಕಷ್ಟು ನೆರವಾಗಿದೆ' ಎಂದು ಹೇಳಿದ್ದಾರೆ.

ಇದೇ ನವೆಂಬರ್‌ನಲ್ಲಿ ಮಾರಾಟದಲ್ಲಿ ಟೊಯೊಟಾ ಕಂಪನಿಯು ಈ ಪರಿಪ್ರಮಾಣದಲ್ಲಿ ಪ್ರಗತಿ ಸಾಧಿಸಲು ಇನ್ನೋವಾ ಹೈಕ್ರಾಸ್, ಇನ್ನೋವಾ ಕ್ರಿಸ್ಟಾ, ಗ್ಲಾನ್ಜಾ, ಅರ್ಬನ್ ಕ್ರೂಸರ್ ಹೈರೈಡರ್ ಹಾಗೂ ಫಾರ್ಚುನರ್ ಸೇರಿದಂತೆ ಹಲವು ಕಾರುಗಳು ಪ್ರಮುಖವಾದ ಕಾರಣವಾಗಿವೆ. ಇವು ಸಾಕಷ್ಟು ಅತ್ಯಾಧುನಿಕವಾಗಿದ್ದು, ಹತ್ತಾರು ವೈಶಿಷ್ಟ್ಯಗಳಿಗೂ ಸಾಕ್ಷಿಯಾಗಿವೆ.
ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross):
ಈ ಎಂಪಿವಿಯನ್ನು ಗ್ರಾಹಕರು ಮೆಚ್ಚಿಕೊಂಡಿದ್ದಾರೆ. ರೂ.18.16 ಲಕ್ಷದಿಂದ ರೂ.30.83 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 7/ 8 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. 2-ಲೀ. ಪೆಟ್ರೋಲ್ ಮತ್ತು 2-ಲೀ. ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಎಂಜಿನ್‌ನ್ನು ಒಳಗೊಂಡಿದೆ. 16.13 ರಿಂದ 23.24 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 10.1 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಮತ್ತು 6 ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

ಟೊಯೊಟಾ ಇನ್ನೋವಾ ಕ್ರಿಸ್ಟಾ (Toyota Innova Crysta):
ಇದು ಪ್ರಮುಖ ಎಂಪಿವಿ ಎಂದೇ ಹೆಸರುವಾಸಿಯಾಗಿದೆ. ರೂ.18.66 ಲಕ್ಷದಿಂದ ರೂ.25.27 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 7/ 8 ಆಸನಗಳನ್ನು ಹೊಂದಿದೆ. 2.4-ಲೀ. ಡೀಸೆಲ್ ಎಂಜಿನ್‌ನ್ನು ಪಡೆದಿದೆ. 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ರೇರ್ ಎಸಿ ವೆಂಟ್‌ಗಳು ಮತ್ತು 6 ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.
ಟೊಯೊಟಾ ಗ್ಲಾನ್ಜಾ (Toyota Glanza):
ಈ ಹ್ಯಾಚ್‌ಬ್ಯಾಕ್, ರೂ.6.40 ಲಕ್ಷದಿಂದ ರೂ.9 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 1.2-ಲೀ. ಪೆಟ್ರೋಲ್ & 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ತನ್ನದಾಗಿಸಿಕೊಂಡಿದೆ. 22 ರಿಂದ 30 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕೀಲೆಸ್ ಎಂಟ್ರಿ ಹಾಗೂ 6 ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ (Toyota Urban Cruiser Hyryder):
ಇದೊಂದು ವಿಶ್ವಾಸಾರ್ಹ ಎಸ್‌ಯುವಿಯಾಗಿದೆ. ರೂ.10.95 ಲಕ್ಷದಿಂದ ರೂ.19.76 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 5 ಆಸನಗಳನ್ನು ಪಡೆದಿದೆ. 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಮತ್ತು 1.5-ಲೀ. ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಸನ್‌ರೂಫ್ ಮತ್ತು 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.
ಟೊಯೊಟಾ ಫಾರ್ಚುನರ್ (Toyota Fortuner):
ಈ ಫುಲ್-ಸೈಜ್ ಎಸ್‌ಯುವಿಯು ರೂ.33.65 ಲಕ್ಷದಿಂದ ರೂ.48.85 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 7 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. 2.8-ಲೀ. ಮೈಲ್ಡ್ ಹೈಬ್ರಿಡ್ ಡೀಸೆಲ್, 2.8-ಲೀ. ಡೀಸೆಲ್ ಹಾಗೂ 2.7-ಲೀ. ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 8 ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, 6 ಸ್ಪೀಕರ್ ಸೌಂಡ್ ಸಿಸ್ಟಮ್, ವೈರ್‌ಲೆಸ್ ಚಾರ್ಜರ್ ಹಾಗೂ 7 ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.


Click it and Unblock the Notifications