GST ಪರಿಷ್ಕರಣೆ.. Toyota ಕಾರುಗಳಿಗೆ ಫುಲ್ ಡಿಮ್ಯಾಂಡ್.. ಶೋರೂಂ ಮುಂದೆ ಕ್ಯೂ ನಿಂತ ಗ್ರಾಹಕರು!
ಟೊಯೋಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motor) ಜಗಮೆಚ್ಚಿದ ವಾಹನ ತಯಾರಕ ಕಂಪನಿಯಾಗಿದೆ. ಈಗಾಗಲೇ ಪರಿಷ್ಕೃತ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ದರಗಳು ಜಾರಿಗೊಂಡಿವೆ. ಅದರ ಪರಿಣಾಮ ಕಂಪನಿಯ ಕಾರುಗಳಿಗೆ ಭಾರೀ ಬೇಡಿಕೆ ಬಂದಿದ್ದು, ಈ ಸೆಪ್ಟೆಂಬರ್ ತಿಂಗಳು ದೊಡ್ಡ ಸಂಖ್ಯೆಯಲ್ಲಿ ಮಾರಾಟಗೊಂಡಿವೆ. ಬರೋಬ್ಬರಿ 31,091 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಣೆ ಮಾಡಲಾಗಿದೆ. 2024ರ ಇದೇ ಸೆಪ್ಟೆಂಬರ್‌ನಲ್ಲಿ 26,847 ಯುನಿಟ್‌ಗಳನ್ನು ಮಾರಲಾಗಿದೆ. ಈ ಅಂಕಿಸಂಖ್ಯೆಯನ್ನು ವಿಶ್ಲೇಷಣೆ ಮಾಡಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 16% ಪ್ರಗತಿಯಾಗಿದೆ.
ಒಟ್ಟು ಮಾರಾಟ ಸಂಖ್ಯೆಯಲ್ಲಿ ದೇಶೀಯವಾಗಿ 27,089 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ. ಅದೇ ರೀತಿಯಲ್ಲಿ ವಿದೇಶಗಳಿಗೆ 4,002 ಯುನಿಟ್‌ಗಳನ್ನು ರಫ್ತು ಮಾಡಲಾಗಿದೆ. ಪ್ರಸಕ್ತ ಆರ್ಥಿಕ ವರ್ಷದ ಮೊದಲ 6 ತಿಂಗಳಲ್ಲಿ (ಏಪ್ರಿಲ್ - ಸೆಪ್ಟೆಂಬರ್ 2025) ಟೊಯೊಟಾ ಕಂಪನಿಯು 1,84,959 ಯುನಿಟ್ ಕಾರುಗಳನ್ನು ಮಾರಾಟ ಮಾಡಿದೆ. 2024ರ ಹಣಕಾಸು ವರ್ಷದ ಇದೇ ಅವಧಿಯಲ್ಲಿ 1,62,623 ಯುನಿಟ್‌ಗಳನ್ನು ಮಾರಲಾಗಿದೆ. ಈ ಅಂಕಿಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಸಂಖ್ಯೆಯು ವರ್ಷದಿಂದ ವರ್ಷಕ್ಕೆ ಶೇಕಡ 14% ಅಧಿಕಗೊಂಡಿದೆ.

ಸದ್ಯ ಭಾರತದಲ್ಲಿ ಟೊಯೊಟಾ ಕಂಪನಿಯು ಇನ್ನೋವಾ ಹೈಕ್ರಾಸ್, ಇನ್ನೋವಾ ಕ್ರಿಸ್ಟಾ, ಅರ್ಬನ್ ಕ್ರೂಸರ್ ಹೈರೈಡರ್, ಟೈಸರ್, ಗ್ಲಾನ್ಜಾ & ಫಾರ್ಚೂನರ್ ಸೇರಿದಂತೆ ಹಲವು ಕಾರುಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಜಿಎಸ್‌ಟಿ ಪರಿಷ್ಕರಣೆಗೊಂಡ ನಂತರದಲ್ಲಿ ಈ ಕಾರುಗಳ ಬೆಲೆ ರೂ.65,400 ರಿಂದ ರೂ.3.49 ಲಕ್ಷವರೆಗೆ ಇಳಿಕೆಯಾಗಿದೆ.
ಟೊಯೊಟಾ ಮಾರಾಟಗೊಳಿಸುವ ಪ್ರಮುಖ ಕಾರುಗಳ ಕುರಿತಂತೆ ಸಂಕ್ಷಿಪ್ತ ವಿವರ:
ಟೊಯೊಟಾ ಇನ್ನೋವಾ ಹೈಕ್ರಾಸ್: ಇದೊಂದು ಎಂಪಿವಿಯಾಗಿದೆ. ರೂ.18.16 ಲಕ್ಷದಿಂದ ರೂ.30.83 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ. 2.0 ಲೀಟರ್ ಪೆಟ್ರೋಲ್ ಮತ್ತು 2.0 ಲೀಟರ್ ಹೈಬ್ರಿಡ್ (ಎಲೆಕ್ಟ್ರಿಕ್+ಪೆಟ್ರೋಲ್) ಎಂಜಿನ್‌ನ್ನು ಒಳಗೊಂಡಿದೆ. 16 ರಿಂದ 23 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 7/ 8 ಆಸನಗಳನ್ನು ಹೊಂದಿದೆ. 10.1 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಟೊಯೊಟಾ ಇನ್ನೋವಾ ಕ್ರಿಸ್ಟಾ: ಈ ಎಂಪಿವಿಯು ಕನಿಷ್ಠ ರೂ.18.66 ಲಕ್ಷ ಹಾಗೂ ಗರಿಷ್ಠ ರೂ.25.27 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 2.4-ಲೀಟರ್ ಡೀಸೆಲ್ ಎಂಜಿನ್‌ನ್ನು ಪಡೆದಿದೆ. 8 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 7/ 8 ಆಸನಗಳನ್ನು ತನ್ನದಾಗಿಸಿಕೊಂಡಿದೆ. 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.
ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್: ಇದು ಎಸ್‌ಯುವಿಯಾಗಿದೆ. ರೂ.10.95 ಲಕ್ಷದಿಂದ ರೂ.19.76 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.5-ಲೀಟರ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) & ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 19 ರಿಂದ 27.97 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳಿದ್ದು, 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್: ಈ ಎಸ್‌ಯುವಿಯು ಕನಿಷ್ಠ ರೂ.7.21 ಲಕ್ಷ ಮತ್ತು ರೂ.12.06 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.2-ಲೀಟರ್ ಪೆಟ್ರೋಲ್, 1.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 19 ರಿಂದ 28 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ಹೊಂದಿದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.
ಟೊಯೊಟಾ ಗ್ಲಾನ್ಜಾ: ಇದೊಂದು ಹ್ಯಾಚ್‌ಬ್ಯಾಕ್ ಆಗಿದೆ. ರೂ.6.39 ಲಕ್ಷದಿಂದ ರೂ.9.15 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ & 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 22 ರಿಂದ 30 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳಿದ್ದು, 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.


Click it and Unblock the Notifications








