Toyota: ಶೀಘ್ರವೇ ಹೊಸ ಎಲೆಕ್ಟ್ರಿಕ್ ಕಾರು ಬಿಡುಗಡೆ.. 550 ಕಿ.ಮೀ ರೇಂಜ್, ಬೆಲೆ ಎಷ್ಟಿರಲಿದೆ?
ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motor), ನಂಬಿಕೆಗೆ ಹೆಸರುವಾಸಿಯಾಗಿರುವ ವಾಹನ ತಯಾರಕ ಕಂಪನಿಯಾಗಿ ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯು ವಿವಿಧ ಕಾರುಗಳನ್ನು ಮಾರಾಟಗೊಳಿಸುವ ಮೂಲಕ ದೊಡ್ಡ ಮಟ್ಟದಲ್ಲಿ ಜನಪ್ರಿಯತೆಯನ್ನು ಗಳಿಸಿದೆ. ಇತ್ತೀಚೆಗೆ ಮುಕ್ತಾಯಗೊಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಟೊಯೊಟಾ ಕಂಪನಿಯು 'ಅರ್ಬನ್ ಕ್ರೂಸರ್ ಬಿಇವಿ' ಕಾನ್ಸೆಪ್ಟ್ ಎಲೆಕ್ಟ್ರಿಕ್ ಎಸ್‌ಯುವಿಯನ್ನು ಬಹಿರಂಗಪಡಿಸಿದೆ. ಬನ್ನಿ.. ಈ ಕಾರಿನ ವಿಶೇಷತೆಗಳ ಕುರಿತಂತೆ ಪ್ರಮುಖ ಮಾಹಿತಿಯನ್ನು ತಿಳಿಯೋಣ.
ಮಾರುತಿ ಸುಜುಕಿ ಇ ವಿಟಾರಾ (Maruti Suzuki e Vitara) ಆಧಾರಿತ ನೂತನ ಟೊಯೊಟಾ ಅರ್ಬನ್ ಕ್ರೂಸರ್ ಬಿಇವಿ (Toyota Urban Cruiser BEV) ಕಾನ್ಸೆಪ್ಟ್ ಎಲೆಕ್ಟ್ರಿಕ್ ಕಾರು, ಹೊರಭಾಗದಲ್ಲಿ ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಉತ್ತಮವಾಗಿರುವ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಚಾರ್ಜಿಂಗ್ ಪೋರ್ಟ್, ಅಲಾಯ್ ವೀಲ್‌ಗಳು & ರೂಫ್ ಮೌಂಟೆಡ್ ಸ್ಪಾಯ್ಲರ್‌ನ್ನು ಪಡೆದಿದೆ.

ಹೊಸ ಟೊಯೊಟಾ ಅರ್ಬನ್ ಕ್ರೂಸರ್ ಬಿಇವಿ ಎಲೆಕ್ಟ್ರಿಕ್ ಎಸ್‌ಯುವಿ, ಹೆಚ್ಚು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಹೊಂದಿರುವ ನಿರೀಕ್ಷೆಯಿದೆ. 49 ಕೆಡಬ್ಲ್ಯೂಹೆಚ್ ಹಾಗೂ 61 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್‌ನ್ನು ಪಡೆದುಕೊಂಡಿರಬಹುದು ಎಂದು ಹೇಳಲಾಗಿದೆ. ಭರ್ತಿ ಚಾರ್ಜ್‌ನಲ್ಲಿ 550 ಕಿ.ಮೀ ವರೆಗೆ ರೇಂಜ್ (ಮೈಲೇಜ್) ಕೊಡಬಹುದು ಎನ್ನಲಾಗಿದೆ.
ಈ ಕಾರು, ಮಾರುತಿ ಸುಜುಕಿ ಇ ವಿಟಾರಾ ಎಲೆಕ್ಟ್ರಿಕ್ ಎಸ್‌ಯುವಿಗೆ ಹೋಲಿಕೆಯಾಗುವ ಬಹುತೇಕ ವೈಶಿಷ್ಟ್ಯಗಳನ್ನು ಹೊಂದಿರುವ ಸಾಧ್ಯತೆಯಿದೆ. ಅರ್ಬನ್ ಕ್ರೂಸರ್ ಬಿಇವಿ ಮಾಡೆಲ್, ಇನ್ಸ್ಟ್ರೋಮೆಂಟ್ ಕ್ಲಸ್ಟರ್ & ಇನ್ಫೋಟೈನ್ಮೆಂಟ್ ಸಿಸ್ಟಮ್‌ಗಾಗಿ ಡುಯಲ್ ಡಿಸ್‌ಪ್ಲೇ ಸೆಟಪ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಟೂ-ಸ್ಪೋಕ್ ಸ್ಟೀರಿಂಗ್ ವೀಲ್‌ಗಳು, ಸ್ಕ್ವೇರ್ ಎಸಿ ವೆಂಟ್‌ಗಳು, ವೈರ್‌ಲೆಸ್ ಫೋನ್ ಚಾರ್ಜಿಂಗ್, ಆಟೋ ಆಟೋ ಎಸಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿರುವ ನಿರೀಕ್ಷೆಯಿದೆ.

ನೂತನ ಎಸ್‌ಯುವಿ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸಲಿದೆ ಎನ್ನಲಾಗಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಪಡೆದುಕೊಂಡಿರಬಹುದು ಎಂದು ಹೇಳಲಾಗಿದೆ.
ಹೊಚ್ಚ ಹೊಸ ಟೊಯೊಟಾ ಅರ್ಬನ್ ಕ್ರೂಸರ್ ಬಿಇವಿ ಎಲೆಕ್ಟ್ರಿಕ್ ಎಸ್‌ಯುವಿ, ಬಜೆಟ್ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಾಗಬಹುದು ಎಂದು ಹೇಳಲಾಗಿದೆ. ರೂ.18 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿರಬಹುದು ಎನ್ನಲಾಗಿದೆ. ಈ ಕಾರು, ವರ್ಷಾಂತ್ಯದ ಕೊನೆಯಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗುವ ನೀರಿಕ್ಷೆಯಿದೆ.

ಇನ್ನು, ನೂತನ ಅರ್ಬನ್ ಕ್ರೂಸರ್ ಬಿಇವಿ ಎಲೆಕ್ಟ್ರಿಕ್ ಎಸ್‌ಯುವಿಗೆ ಟಾಟಾದ ನೆಕ್ಸಾನ್ ಇವಿ (Nexon EV) ಹಾಗೂ ಕರ್ವ್ ಇವಿ (Curvv EV) ಮಾಡೆಲ್‌ಗಳು ಪ್ರಬಲವಾದ ಎದುರಾಳಿಯಾಗಲಿವೆ. ಈ ಕಾರು ಆಕರ್ಷಕ ವಿನ್ಯಾಸ ಮತ್ತು ವೈಶಿಷ್ಟ್ಯಗಳನ್ನು ಪಡೆದುಕೊಂಡು ಮಾರಾಟಕ್ಕೆ ಬರುವುವುದು ದೃಢಪಟ್ಟಿದ್ದು, ಹಲವರ ಕುಟುಂಬದ ಆಯ್ಕೆ ವಾಹನವಾಗುವುದರಲ್ಲಿ ಎರಡು ಮಾತಿಲ್ಲ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








