ಟೊಯೊಟಾದ ಮೊದಲ ಎಲೆಕ್ಟ್ರಿಕ್ ಕಾರು ಬಿಡುಗಡೆಗೊಳ್ಳುವ ಸನಿಹಕ್ಕೆ.. 5-ಸೀಟರ್, ಬೆಲೆಯೂ ತುಂಬಾ ಅಗ್ಗ?

ಭಾರತದ ಕಾರು ಮಾರುಕಟ್ಟೆಯಲ್ಲಿ 'ಟೊಯೊಟಾ ಕಿರ್ಲೋಸ್ಕರ್ ಮೋಟಾರ್' ತನ್ನದೇಯಾದ ಛಾಪನ್ನು ಮೂಡಿಸಿದ್ದು, ವಿವಿಧ ಕಾರುಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಇವೆಲ್ಲ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್), ಪೆಟ್ರೋಲ್ ಹಾಗೂ ಸಿಎನ್‌ಜಿ ಚಾಲಿತ ಕಾರುಗಳಿವೆ. ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಯನ್ನು ಪ್ರವೇಶಿಸಲು ಕೂಡ ಕಂಪನಿಯು ತಯಾರಿ ಮಾಡಿಕೊಳ್ಳುತ್ತಿದೆ. ಎಲ್ಲವು ಅಂದುಕೊಂಡಂತೆ ನಡೆದರೆ, ಅತಿ ಶೀಘ್ರದಲ್ಲೇ ಹೊಚ್ಚ ಹೊಸ 'ಅರ್ಬನ್ ಕ್ರೂಸರ್ ಇವಿ'ಯನ್ನು ಬಿಡುಗಡೆಗೊಳಿಸಲಿದೆ. ಬನ್ನಿ, ನೂತನ ಕಾರಿನ ನಿರೀಕ್ಷಿತ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಯೋಣ.

2026ರ ಮೊದಲರ್ಧದಲ್ಲಿ ಹೊಚ್ಚ ಹೊಸ ಟೊಯೊಟಾ ಅರ್ಬನ್ ಕ್ರೂಸರ್ ಇವಿ (Toyota Urban Cruiser EV) ಬಿಡುಗಡೆಯಾಗುವ ಸಾಧ್ಯತೆಯಿದೆ. ಸ್ಪರ್ಧಾತ್ಮಕ ಬೆಲೆಯಲ್ಲಿಯೂ ಲಭ್ಯವಾಗಲಿದ್ದು, ಗ್ರಾಹಕರು ಸುಲಭವಾಗಿ ಖರೀದಿ ಮಾಡಬಹುದು. ಅದಕ್ಕೆ ತಕ್ಕಂತೆ ರೂ.18 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದುಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.

Toyota Urban Cruiser EV Launch Soon Expected Price Range And Features Details

ಈ ವರ್ಷದ ಜನವರಿಯಲ್ಲಿ ಮುಕ್ತಾಯಗೊಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲೂ ಇದೇ 'ಟೊಯೊಟಾ ಅರ್ಬನ್ ಕ್ರೂಸರ್ ಇವಿ'ಯ ಕಾನ್ಸೆಪ್ಟ್ ಕಾರನ್ನು ಅನಾವರಣಗೊಳಿಸಲಾಯಿತು. ಇದು 'ಮಾರುತಿ ಸುಜುಕಿ ಇ ವಿಟಾರಾ'ವನ್ನು ಆಧರಿಸಿದ್ದು, ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಪಡೆದಿದೆ. ನೋಡುಗರ ಕಣ್ಣು ಕುಕ್ಕುವಂತಿದೆ.

ಹೊಸ 'ಟೊಯೊಟಾ ಅರ್ಬನ್ ಕ್ರೂಸರ್ ಇವಿ'ಯು ಎಲ್ಇಡಿ ಹೆಡ್‌ಲೈಟ್‌ಗಳು, 12-ಪೀಸ್ ಎಲ್ಇಡಿ ಡಿಆರ್‌ಎಲ್‌ಗಳು, ಫಾಗ್ ಲೈಟ್‌ಗಳು, ಎಲ್ಇಡಿ ಟೈಲ್ ಲೈಟ್, ರೂಫ್ ಮೌಂಟೆಡ್ ಸ್ಪಾಯ್ಲರ್, ಚಾರ್ಜಿಂಗ್ ಪೋರ್ಟ್ ಮತ್ತು ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಜೊತೆಗೆ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

Toyota Urban Cruiser EV Launch Soon Expected Price Range And Features Details

ಇದು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 49 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 61 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿರಬಹುದು ಎಂದು ಹೇಳಲಾಗಿದೆ. ಪೂರ್ತಿ ಚಾರ್ಜ್‌ನಲ್ಲಿ 550 ಕಿ.ಮೀ ರೇಂಜ್ (ಮೈಲೇಜ್) ಕೊಡಬಹುದು ಎನ್ನಲಾಗಿದೆ. ಇದರೊಂದಿಗೆ ಹೆಚ್ಚಿನ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ ಪೀಕ್ ಟಾರ್ಕ್ ಸಹ ಉತ್ಪಾದಿಸುವ ನಿರೀಕ್ಷೆಯಿದೆ.

ಈ ಕಾರು 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿರಲಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ & ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ ಬೃಹತ್ ಗಾತ್ರದ 400 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದುಕೊಂಡಿರಬಹುದು ಎಂದು ಹೇಳಲಾಗಿದೆ.

ನೂತನ ಟೊಯೊಟಾ ಅರ್ಬನ್ ಕ್ರೂಸರ್ ಇವಿಯ ಕ್ಯಾಬಿನ್ ವಿನ್ಯಾಸವು ಹೆಚ್ಚು ಉತ್ತಮವಾಗಿರಲಿದೆ. ದೊಡ್ಡ ಗಾತ್ರದ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಟೂ ಸ್ಪೋಕ್ ಸ್ಟೀರಿಂಗ್ ವೀಲ್‌ಗಳು, ವೈರ್‌ಲೆಸ್ ಫೋನ್ ಚಾರ್ಜಿಂಗ್, ಆಟೋ ಎಸಿ, ಸನ್‌ರೂಫ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಪಡೆದುಕೊಂಡಿರುವ ನಿರೀಕ್ಷೆಯಿದೆ.

ಹೊಸ 'ಅರ್ಬನ್ ಕ್ರೂಸರ್ ಇವಿ' ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಪಡೆದುಕೊಂಡಿರಬಹುದು ಎಂದು ಹೇಳಲಾಗಿದೆ.

ಇನ್ನು ಮುಂಬರುವ ಟೊಯೊಟಾ ಅರ್ಬನ್ ಕ್ರೂಸರ್ ಇವಿಗೆ ಟಾಟಾ ಹ್ಯಾರಿಯರ್ ಇವಿ, ಟಾಟಾ ಕರ್ವ್ ಇವಿ ಎಂಜಿ ಝಡ್ಎಸ್ ಇವಿ ಹಾಗೂ ಎಂಜಿ ವಿಂಡ್ಸರ್ ಇವಿಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಲಿವೆ. ಈ ಕಾರು ತುಂಬಾ ಅತ್ಯಾಧುನಿಕವಾಗಿದ್ದು, ಸ್ಪರ್ಧಾತ್ಮಕ ಬೆಲೆಯಲ್ಲಿಯೂ ಬಿಡುಗಡೆಯಾಗುವ ನಿರೀಕ್ಷೆಯಿದೆ. ದೇಶೀಯವಾಗಿ ಮಾರಾಟಕ್ಕೆ ಬಂದ ಮೇಲೆ ಖರೀದಿದಾರರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

More from DriveSpark

Article Published On: Wednesday, August 27, 2025, 20:49 [IST]
English summary
Toyota urban cruiser ev launch soon expected price range and features details
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+