Toyota: 2 ಕುಟುಂಬ ಹೋಗಬಹುದು.. ಬೈಕ್‌ನಂತೆ ಮೈಲೇಜ್, ಶೀಘ್ರ ಟೊಯೊಟಾದ ಹೊಸ ಕಾರು ಬಿಡುಗಡೆ!
ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motor), ನಂಬಿಕೆಗೆ ಹೆಸರುವಾಸಿಯಾಗಿರುವ ವಾಹನ ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿ ಮಾರಾಟಗೊಳಿಸುವ ಅರ್ಬನ್ ಕ್ರೂಸರ್ ಹೈರೈಡರ್ (Urban Cruiser Hyryder) ಜನಪ್ರಿಯ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ, ಟೊಯೊಟಾ ಇದೇ ಕಾರನ್ನು ಹೊಸ ರೂಪದಲ್ಲಿ ಬಿಡುಗಡೆಗೊಳಿಸಲು ತಯಾರಿ ನಡೆಸುತ್ತಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಈ ವರ್ಷದ ಆಗಸ್ಟ್‌ನಲ್ಲಿ 7 ಆಸನ ಆಯ್ಕೆ ವ್ಯವಸ್ಥೆಯೊಂದಿರುವ ಹೊಚ್ಚ ಹೊಸ ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಎಸ್‌ಯುವಿ ಮಾರಾಟಕ್ಕೆ ಬರುವ ನಿರೀಕ್ಷೆಯಿದೆ. ನೂತನ ಕಾರಿನ ವಿನ್ಯಾಸ, ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿರುವುದಿಲ್ಲ ಎನ್ನಲಾಗಿದೆ. ಈ ಕಾರು ರೂ.14 ಲಕ್ಷ (ಎಕ್ಸ್ ಶೋರೂಂ) ಬೆಲೆಯಲ್ಲಿ ಮಾರಾಟಕ್ಕೆ ಬರುವ ಸಾಧ್ಯತೆಯಿದೆ.

ಸದ್ಯ ದೇಶೀಯವಾಗಿ ಲಭ್ಯವಿರುವ 5 ಆಸನಗಳನ್ನು ಹೊಂದಿರುವ ಹೊಸ ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಕಾರು, ಕನಿಷ್ಠ ರೂ.11.14 ಮತ್ತು ಗರಿಷ್ಠ ರೂ.19.99 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ಇ, ಎಸ್, ಜಿ ಹಾಗೂ ವಿ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಒಳಗೊಂಡಿದೆ.
ನೂತನ ಎಸ್‌ಯುವಿ ಹೊರಭಾಗದಲ್ಲಿಯೂ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸ ಹೊಂದಿದೆ. ಕೆಫೆ ವೈಟ್, ಎಂಟೈಸಿಂಗ್ ಸಿಲ್ವರ್, ಗೇಮಿಂಗ್ ಗ್ರೇ, ಸ್ಪೋರ್ಟಿನ್ ರೆಡ್, ಮಿಡ್‌ನೈಟ್ ಬ್ಲ್ಯಾಕ್, ಕೇವ್ ಬ್ಲ್ಯಾಕ್ & ಸ್ಪೀಡಿ ಬ್ಲೂ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ. ವಾರಾಂತ್ಯ ಮತ್ತು ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 373 ಲೀಟರ್ ಸ್ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

ಈ ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಎಸ್‌ಯುವಿ ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. 1.5-ಲೀಟರ್ ಪೆಟ್ರೋಲ್, ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) & ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದ್ದು, 19.39 ರಿಂದ 27.97 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.
ಹೊಸ ಕಾರು ಹಲವು ನವೀನ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕನೆಕ್ಟೆಡ್ ಕಾರ್ ಟೆಕ್, ಆಂಬಿಯೆಂಟ್ ಲೈಟಿಂಗ್, ಪ್ಯಾಡಲ್ ಶಿಫ್ಟರ್‌ಗಳು, ಹೆಡ್ಸ್ - ಅಪ್ ಡಿಸ್ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಪನೋರಮಿಕ್ ಸನ್‌ರೂಫ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಹೊಂದಿದೆ.

ನೂತನ ಅರ್ಬನ್ ಕ್ರೂಸರ್ ಹೈರೈಡರ್ ಎಸ್‌ಯುವಿ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು ಆಲ್ ವೀಲ್ ಡಿಸ್ಕ್ ಬೈಕ್‌ಗಳನ್ನು ಒಳಗೊಂಡಿದೆ.
ಈ ಕಾರಿಗೆ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೋಸ್, ಹೋಂಡಾ ಎಲಿವೇಟ್, ಸ್ಕೋಡಾ ಕುಶಾಕ್, ಎಂಜಿ ಆಸ್ಟರ್, ಫೋಕ್ಸ್‌ವ್ಯಾಗನ್ ಟೈಗನ್ ಮತ್ತು ಸಿಟ್ರನ್ ಸಿ3 ಏರ್‌ಕ್ರಾಸ್ ಎಸ್‌ಯುವಿಗಳು ಪ್ರಬಲ ಎದುರಾಳಿಯಾಗಿವೆ. ಇನ್ನು, ಮುಂಬರುವ ತಿಂಗಳಲ್ಲಿ ಬಿಡುಗಡೆಯಾಗಲಿರುವ 7 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿರುವ 'ಅರ್ಬನ್ ಕ್ರೂಸರ್ ಹೈರೈಡರ್' ದೇಶೀಯ ಗ್ರಾಹಕರ ನೆಚ್ಚಿನ ಕುಟುಂಬದ ಕಾರಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಬಹುದು.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








