ಗಟ್ಟಿಮುಟ್ಟಾದ ಕಾರಿದು.. 27.97 ಕಿ.ಮೀ ಮೈಲೇಜ್, 11 ಲಕ್ಷ.. ಈ Toyota SUVಗೆ ಫುಲ್ ಡಿಮ್ಯಾಂಡ್, ಜನ ಮುಗಿಬಿದ್ದು ಖರೀದಿ!
ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ (Toyota Urban Cruiser Hyryder) ಜನಮೆಚ್ಚಿದ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಅತ್ಯಾಧುನಿಕವಾದ ವಿನ್ಯಾಸ ಹಾಗೂ ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಈ ಆಗಸ್ಟ್ ತಿಂಗಳಲ್ಲೂ 'ಹೈರೈಡರ್' ದೊಡ್ಡ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಬರೋಬ್ಬರಿ 9854 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 4,385 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಅಂಶವನ್ನು ವಿಶ್ಲೇಷಣೆ ಮಾಡಿದಾಗ ಮಾರಾಟ ಪ್ರಮಾವು ವರ್ಷದಿಂದ ವರ್ಷಕ್ಕೆ ಶೇಕಡ 124.52% ಪ್ರಗತಿಯಾಗಿದೆ.
ನೂತನ ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಎಸ್‌ಯುವಿ, ಇಷ್ಟೊಂದು ಸಂಖ್ಯೆಯಲ್ಲಿ ಮಾರಾಟವಾಗಲು ಕಾರಣಗಳನ್ನು ಪಟ್ಟಿ ಮಾಡಬಹುದು. ವಿಶೇಷವಾಗಿ ಈ ಕಾರು, ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಎಂಜಿನ್ ಹೊಂದಿದೆ. ಜೊತೆಗೆ ತುಂಬಿ ತುಳುಕುವಂತೆ ಭರಪೂರ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಹೀಗಾಗಿ ಉತ್ತಮವಾಗಿ ಮಾರಾಟಗೊಳ್ಳುತ್ತಿದೆ ಎಂದು ಹೇಳಲಾಗಿದೆ.

ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ವಿಶೇಷತೆಗಳೇನು:
ಸದ್ಯ, ಇದೇ ಎಸ್‌ಯುವಿ ಕನಿಷ್ಠ ರೂ.11.34 ಲಕ್ಷ ಹಾಗೂ ಗರಿಷ್ಠ ರೂ.20.19 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಕೇಂದ್ರ ಸರ್ಕಾರವು ವಿವಿಧ ಮಾದರಿ ಕಾರುಗಳ ಖರೀದಿ ಮೇಲೆ ವಿಧಿಸುತ್ತಿದ್ದ ಜಿಎಸ್‌ಟಿ ಪ್ರಮಾಣವನ್ನು 28% ರಿಂದ 18%ಗೆ ಇಳಿಸಿದೆ. ಪರಿಷ್ಕೃತ ತೆರಿಗೆ ದರಗಳು ಸೆಪ್ಟೆಂಬರ್ 22 ರಿಂದ ಜಾರಿಗೆ ಬರಲಿದ್ದು, ಆ ಬಳಿಕ 'ಹೈರೈಡರ್' ಬೆಲೆಯು ಕಡಿಮೆಯಾಗಲಿದೆ.
ಇದು ಹೊರಭಾಗದಲ್ಲಿ ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಪ್ರತಿಯೊಬ್ಬರನ್ನು ತನ್ನತ್ತ ಆಕರ್ಷಿಸುತ್ತದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು, ರೂಫ್ ರೈಲ್‌ಗಳು, ಮತ್ತು ಅಲಾಯ್ - ವೀಲ್‌ಗಳನ್ನು ಹೊಂದಿದೆ. ಎಂಟೈಸಿಂಗ್ ಸಿಲ್ವರ್, ಗೇಮಿಂಗ್ ಗ್ರೇ, ಸ್ಪೋರ್ಟಿನ್ ರೆಡ್, ಕೆಫೆ ವೈಟ್ ಮತ್ತು ಮಿಡ್‌ನೈಟ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಈ ಕಾರು ಹೆಚ್ಚು ವಿಶಾಲ ಗಾತ್ರದಲ್ಲಿದೆ. 4365 ಎಂಎಂ ಉದ್ದ, 1795 ಎಂಎಂ ಅಗಲ ಮತ್ತು 1645 ಎಂಎಂ ಎತ್ತರವಿದೆ. 210 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2600 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 1755 ಕೆಜಿ ತೂಕವು ಇದೆ.
ಹೊಸ ಹೈರೈಡರ್ ಹೆಚ್ಚು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.5-ಲೀಟರ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಹಾಗೂ ಸಿಎನ್‌ಜಿ ಎಂಜಿನ್‌ನ್ನು ತನ್ನದಾಗಿಸಿಕೊಂಡಿದೆ. ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ & ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಹೊಂದಿದೆ. 19 ರಿಂದ 27.97 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 45 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ.

ಇದರ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 373 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 12.4 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸನ್‌ರೂಫ್, ಯುಎಸ್‌ಬಿ ಪೋರ್ಟ್‌ಗಳು ಮತ್ತು ರೇರ್ ಎಸಿ ವೆಂಟ್‌ಗಳು ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.
ಈ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ಸುರಕ್ಷತೆ ಒದಗಿಸುತ್ತದೆ. ಅದಕ್ಕಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೆಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್ ಹೋಲ್ಡ್ ಕಂಟ್ರೋಲ್, ರೇರ್ ಪಾರ್ಕಿಂಗ್ ಸೆನ್ಸರ್ಸ್, 360 ಡಿಗ್ರಿ ಕ್ಯಾಮೆರಾ ಹಾಗೂ ಆಲ್ ವೀಲ್ ಡಿಸ್ಕ್ ಬ್ರೆಕ್‌ಗಳನ್ನು ಹೊಂದಿದೆ.


Click it and Unblock the Notifications








