ಕಲ್ಲು ಬಂಡೆಯಂತಹ ಕಾರಿದು.. 27.97 ಕಿ.ಮೀ ಮೈಲೇಜ್, 10.95 ಲಕ್ಷ.. ಈ ಟೊಯೊಟಾ ಎಸ್‌ಯುವಿಗೆ ಫುಲ್ ಡಿಮ್ಯಾಂಡ್!

ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ (Toyota Urban Cruiser Hyryder) ವಿಶ್ವಾಸಾರ್ಹ ಎಸ್‌ಯುವಿ ಎಂದೇ ಹೆಸರುವಾಸಿಯಾಗಿದೆ. ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಗ್ರಾಹಕರು ಕೂಡ ಮುಗಿಬಿದ್ದು ಖರೀದಿ ಮಾಡುತ್ತಿದ್ದಾರೆ. ಈ ಸೆಪ್ಟೆಂಬರ್ ತಿಂಗಳಲ್ಲೂ 'ಹೈರೈಡರ್' ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 7,608 ಯುನಿಟ್‌ಗಳನ್ನು ವಿತರಿಸಲಾಗಿದೆ. 2024ರ ಇದೇ ಅವಧಿಯಲ್ಲಿ 5,385 ಯುನಿಟ್‌ಗಳನ್ನು ಮಾರಲಾಗಿತ್ತು. ಈ ದತ್ತಾಂಶವನ್ನು ಲೆಕ್ಕಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 41.28% ಬೆಳವಣಿಗೆಯಾಗಿದೆ.

ನೂತನ 'ಟೊಯೊಟಾ ಹೈರೈಡರ್'' ಮಾರಾಟ ಪ್ರಮಾಣವು ದಿನದಿಂದ ದಿನಕ್ಕೆ ಅಧಿಕಗೊಳ್ಳಲು ನಾನಾ ಕಾರಣಗಳನ್ನು ಪಟ್ಟಿ ಮಾಡಬಹುದು. ಬಹುಮುಖ್ಯವಾಗಿ ಸೆ.22 ರಿಂದ ಪರಿಷ್ಕೃತ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ದರಗಳು ಅಧಿಕೃತವಾಗಿ ಜಾರಿಗೊಂಡಿವೆ. ಇದರ ಸಂಪೂರ್ಣ ಲಾಭವು 'ಹೈರೈಡರ್' ಕಾರಿಗೂ ಲಭ್ಯವಿದ್ದು, ರೂ.66,100 ವರೆಗೆ ಬೆಲೆ ಇಳಿಕೆಯಾಗುದೆ. ಜೊತೆಗಿದು ನವರಾತ್ರಿ ಹಿನ್ನೆಲೆ, ಭಾರೀ ಸಂಖ್ಯೆಯಲ್ಲಿ ಮಾರಾಟವಾಗಿದೆ ಎಂದು ವಿಶ್ಲೇಷಣೆ ಮಾಡಲಾಗಿದೆ.

Toyota Urban Cruiser Hyryder September 2025 Sales Report

ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ವಿಶೇಷತೆಗಳೇನು:

ಇದೊಂದು ಎಸ್‌ಯುವಿಯಾಗಿದ್ದು, ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಕನಿಷ್ಠ ರೂ.10.95 ಲಕ್ಷ ಹಾಗೂ ಗರಿಷ್ಠ ರೂ.19.76 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಇ, ಎಸ್, ಜಿ ಹಾಗೂ ವಿ ಎಂಬ ಆಕರ್ಷಕ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ.

ಈ ಕಾರು ನೋಡುಗರ ಕಣ್ಣು ಕುಕ್ಕುವಂತಹ ವಿನ್ಯಾಸವನ್ನು ಹೊಂದಿದೆ. ಉತ್ತಮವಾದ ಪ್ರೀಮಿಯಂ ಗ್ರಿಲ್ & ಬಂಪರ್, ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು, ರೂಫ್ ರೈಲ್‌ಗಳು ಮತ್ತು 17 ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ಕೆಫೆ ವೈಟ್, ಎಂಟೈಸಿಂಗ್ ಸಿಲ್ವರ್, ಗೇಮಿಂಗ್ ಗ್ರೇ, ಸ್ಪೋರ್ಟಿನ್ ರೆಡ್, ಮಿಡ್‌ನೈಟ್ ಬ್ಲ್ಯಾಕ್, ಕೇವ್ ಬ್ಲ್ಯಾಕ್ ಹಾಗೂ ಸ್ಪೀಡಿ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

Toyota Urban Cruiser Hyryder September 2025 Sales Report

ನೂತನ 'ಟೊಯೊಟಾ ಹೈರೈಡರ್' ದೊಡ್ಡ ಗಾತ್ರದ ಎಸ್‌ಯುವಿಯಾಗಿದೆ. 4,365 ಮಿ.ಮೀ ಉದ್ದ, 1,795 ಮಿ.ಮೀ ಅಗಲ ಹಾಗೂ 1,645 ಮಿ.ಮೀ ಎತ್ತರವಿದೆ. ಹಾಗೆಯೇ 210 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,600 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ. ಬರೋಬ್ಬರಿ 1,755 ಕೆಜಿ ತೂಕವಿದೆ.

ಇದು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. 1.5-ಲೀ. ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) & ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ & ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಯಾವ ಬೈಕ್‌ಗೂ ಕಮ್ಮಿಯಿಲ್ಲವೆಂಬಂತೆ 19 ರಿಂದ 27.97 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. ಸರಿ ಸುಮಾರು 45 ಲೀ.ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ತನ್ನದಾಗಿಸಿಕೊಂಡಿದೆ.

Toyota Urban Cruiser Hyryder September 2025 Sales Report

ಈ ಕಾರು 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ದೂರದ ಊರುಗಳಿಗೆ ಪ್ರವಾಸಕ್ಕೆ ತೆರಳುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 373 ಲೀಟರ್‌ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. 12.4 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಹೊಸ 'ಟೊಯೊಟಾ ಹೈರೈಡರ್' ಕ್ಯಾಬಿನ್ ವಿನ್ಯಾಸವು ಚೆನ್ನಗಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸನ್‌ರೂಫ್, ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್‌ಗಳು ಹಾಗೂ ರೇರ್ ಎಸಿ ವೆಂಟ್‌ಗಳು ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

ಇದು ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೆಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೆನ್ಸರ್ಸ್, 360 ಡಿಗ್ರಿ ಕ್ಯಾಮೆರಾದಂತಹ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

More from DriveSpark

Article Published On: Friday, October 10, 2025, 8:30 [IST]
English summary
Toyota urban cruiser hyryder september 2025 sales report
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+