27.97 Km ಮೈಲೇಜ್.. 5-ಸೀಟರ್, 11 ಲಕ್ಷ.. ಈ 'Toyota Suv'ಗೆ ಮುಗಿಬಿದ್ದ ಗ್ರಾಹಕರು.. ರೆಕಾರ್ಡ್ ಸಂಖ್ಯೆಯಲ್ಲಿ ಸೇಲ್ಸ್!

ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ (Toyota Urban Cruiser Hyryder) ಪ್ರಮುಖ ಎಸ್‌ಯುವಿಯಾಗಿದೆ. ಇದು ಹೆಚ್ಚು ಆಕರ್ಷಕವಾಗಿದ್ದು, ಕೊಂಚ ಮಟ್ಟಿಗೆ ಕೈಗೆಟುಕುವ ಬೆಲೆಯಲ್ಲಿಯೇ ಖರೀದಿಗೆ ಸಿಗಲಿದೆ. ಗ್ರಾಹಕರು ಕೂಡ ನಾಮುಂದು - ತಾಮುಂದು ಎಂಬಂತೆ ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ಈ ಏಪ್ರಿಲ್ ತಿಂಗಳಲ್ಲೂ 'ಹೈರೈಡರ್' ಕಾರುಗಳು ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿವೆ. ಬನ್ನಿ, ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಕಳೆದ ತಿಂಗಳು (ಏಪ್ರಿಲ್-2025) ಟೊಯೊಟಾ ಕಂಪನಿಯು ಸರಿ ಸುಮಾರು 4,642 ಯುನಿಟ್ 'ಅರ್ಬನ್ ಕ್ರೂಸರ್ ಹೈರೈಡರ್' ಎಸ್‌ಯುವಿಗಳನ್ನು ಮಾರಾಟ ಮಾಡಿದೆ. 2024ರ ಇದೇ ಅವಧಿಯಲ್ಲಿ 3,252 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು ಈ ಅಂಕಿಸಂಖ್ಯೆಗೆ ಹೋಲಿಸಿದರೆ, ಮಾರಾಟ ಪ್ರಮಾಣ ವರ್ಷದಿಂದ ವರ್ಷಕ್ಕೆ (YoY) ಶೇಕಡ 43% ಪ್ರಗತಿಯಾಗಿದೆ.

Toyota Urban Cruiser Hyryder Suv April 2025 Sales Details

ಈ ವರ್ಷದ ಮೊದಲು 3 ತಿಂಗಳು ಸಹ 'ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್' ಎಸ್‌ಯುವಿಗಳನ್ನು ಉತ್ತಮ ಸಂಖ್ಯೆಯಲ್ಲಿ ಮಾರಾಟ ಮಾಡಲಾಗಿದೆ. ಮಾರ್ಚ್‌ನಲ್ಲಿ 5,286 ಯುನಿಟ್, ಫೆಬ್ರವರಿಯಲ್ಲಿ 4,314 ಯುನಿಟ್ ಹಾಗೂ ಜನವರಿ ತಿಂಗಳಲ್ಲಿ 4,941 ಯುನಿಟ್‌ಗಳನ್ನು ಯಶಸ್ವಿಯಾಗಿ ಮಾರಲಾಗಿತ್ತು.

ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಕಾರಿನ ಮಾರಾಟ ಸಂಖ್ಯೆ ಅಧಿಕಗೊಳ್ಳಲು ನಾನಾ ಕಾರಣವಾಗಿವೆ. ಬಹುಮುಖ್ಯವಾಗಿ ಎಸ್‌ಯುವಿಗಳು ನೋಡಲು ತುಂಬಾ ಚೆನ್ನಾಗಿದ್ದು, ಹೆಚ್ಚಿನ ಇಂಧನ ದಕ್ಷತೆಯನ್ನು ಹೊಂದಿದೆ. ಜೊತೆಗೆ ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಪಡೆದಿದೆ. ಇದರಿಂದಲೇ 'ಹೈರೈಡರ್' ಕಾರನ್ನು ಗ್ರಾಹಕರು ಇಷ್ಟಪಟ್ಟು ತೆಗೆದುಕೊಳ್ಳುತ್ತಿದ್ದಾರೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

Toyota Urban Cruiser Hyryder Suv April 2025 Sales Details

ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ವಿಶೇಷತೆಗಳೇನು..

ಈ ಕಾರು ರೂಪಾಂತರಗಳನ್ನು (ವೇರಿಯೆಂಟ್) ಅವಲಂಭಿಸಿ ರೂ.11.34 ಲಕ್ಷದಿಂದ ರೂ.20.19 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಇದರಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ದೂರದ ಊರುಗಳಿಗೆ ತೆರಳುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 373 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ನೂತನ ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಎಸ್‌ಯುವಿಯು 1.5-ಲೀಟರ್ ಸಾಮರ್ಥ್ಯದ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಹಾಗೂ ಸಿಎನ್‌ಜಿ ಎಂಜಿನ್‌ ಆಯ್ಕೆಯನ್ನು ಒಳಗೊಂಡಿದೆ. 19.39 ರಿಂದ 27.97 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಹೊರಭಾಗದಲ್ಲೂ ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದ್ದು, ಅದು ನೋಡಿಗರನ್ನು ಸೆಳೆಯುತ್ತದೆ. ಕೆಫೆ ವೈಟ್, ಗೇಮಿಂಗ್ ಗ್ರೇ, ಸ್ಪೋರ್ಟಿನ್ ರೆಡ್, ಮಿಡ್‌ನೈಟ್ ಬ್ಲ್ಯಾಕ್ & ಸ್ಪೀಡಿ ಬ್ಲೂ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

Toyota Urban Cruiser Hyryder Suv April 2025 Sales Details

ಹೊಸ 'ಹೈರೈಡರ್' ಎಸ್‌ಯುವಿಯು ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಬಹುಮುಖ್ಯವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (9-ಇಂಚು), ಕನೆಕ್ಟೆಡ್ ಕಾರ್ ಟೆಕ್, ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜರ್, ಪನೋರಮಿಕ್ ಸನ್‌ರೂಫ್‌ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಒಳಗೊಂಡಿದೆ. ಸುರಕ್ಷತೆ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಆಲ್ ವೀಲ್ ಡಿಸ್ಕ್ ಬೈಕ್‌ಗಳನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Wednesday, May 14, 2025, 8:30 [IST]
English summary
Toyota urban cruiser hyryder suv april 2025 sales details
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+