Toyota: 27.97 ಕಿ.ಮೀ ಮೈಲೇಜ್.. ಸನ್‌ರೂಫ್, 5-ಸೀಟರ್.. ಈ ಪ್ರಖ್ಯಾತ ಟೊಯೊಟಾ ಕಾರಿಗಾಗಿ ಕ್ಯೂ ನಿಂತ ಗ್ರಾಹಕರು!

ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ (Toyota Urban Cruiser Hyryder) ಜನಪ್ರಿಯ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಈ ಕಾರು ಆಕರ್ಷಕ ವಿನ್ಯಾಸ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಇತ್ತೀಚೆಗೆ ಎಲ್ಲ ವಾಹನ ತಯಾರಕ ಕಂಪನಿಗಳು ಈ ಜನವರಿ ತಿಂಗಳ ಕಾರು ಮಾರಾಟದ ಅಂಕಿ-ಅಂಶಗಳ ವರದಿಯನ್ನು ಪ್ರಕಟಿಸಿವೆ. ಅದರಲ್ಲೂ ಅರ್ಬನ್ ಕ್ರೂಸರ್ ಹೈರೈಡರ್ ಕಾರು ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಬನ್ನಿ ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಕಳೆದ ತಿಂಗಳು (ಜನವರಿ - 2025) ಟೊಯೊಟಾ ಕಂಪನಿಯು ಬರೋಬ್ಬರಿ 4,941 ಅರ್ಬನ್ ಕ್ರೂಸರ್ ಹೈರೈಡರ್ ಎಸ್‌ಯುವಿಗಳನ್ನು ಮಾರಾಟಗೊಳಿಸಿದೆ. 2024 ಡಿಸೆಂಬರ್ ತಿಂಗಳಲ್ಲಿ ಮಾರಾಟ ಮಾಡಿದ 4,770 ಯುನಿಟ್‌ಗಳಿಗೆ ಹೋಲಿಕೆ ಮಾಡಿದರೆ, ತಿಂಗಳಿನಿಂದ ತಿಂಗಳಿಗೆ (MoM) ಶೇಕಡ 3.46% ಬೆಳವಣಿಗೆಯನ್ನು ದಾಖಲಿಸಲಾಗಿದೆ.

Toyota Urban Cruiser Hyryder Suv January 2025 Sales Report Details

ಪ್ರತಿ ತಿಂಗಳು ಈ ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಕಾರು, 4,000 ಯುನಿಟ್‌ಗೂ ಅಧಿಕ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. 2024ರ ನವೆಂಬರ್‌ನಲ್ಲಿ 4,857 ಯುನಿಟ್, ಅಕ್ಟೋಬರ್‌ನಲ್ಲಿ 5,449 ಯುನಿಟ್, ಸೆಪ್ಟೆಂಬರ್‌ನಲ್ಲಿ 5,385 ಯುನಿಟ್ ಹಾಗೂ ಆಗಸ್ಟ್ ತಿಂಗಳಲ್ಲಿ 6,534 ಯುನಿಟ್‌ಗಳು ಮಾರಾಟಗೊಂಡಿವೆ.

ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ವಿಶೇಷತೆಗಳೇನು: ಈ ಎಸ್‌ಯುವಿ ಕನಿಷ್ಠ ರೂ.11.14 ಲಕ್ಷ ಮತ್ತು ಗರಿಷ್ಠ ರೂ.19.99 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ಇ, ಎಸ್, ಜಿ & ವಿ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಹೊಂದಿದೆ. ಕೆಫೆ ವೈಟ್, ಎಂಟೈಸಿಂಗ್ ಸಿಲ್ವರ್, ಗೇಮಿಂಗ್ ಗ್ರೇ, ಸ್ಪೋರ್ಟಿನ್ ರೆಡ್, ಮಿಡ್‌ನೈಟ್ ಬ್ಲ್ಯಾಕ್ ಮತ್ತು ಸ್ಪೀಡಿ ಬ್ಲೂ ಎಂಬ ಬಣ್ಣಗಳನ್ನು ಪಡೆದಿದೆ.

Toyota Urban Cruiser Hyryder Suv January 2025 Sales Report Details

ಈ ಕಾರು 1.5-ಲೀ. ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಮತ್ತು ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 19.39 ರಿಂದ 27.97 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದು 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು 373 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

ನೂತನ ಎಸ್‌ಯುವಿ 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕನೆಕ್ಟೆಡ್ ಕಾರ್ ಟೆಕ್, ಆಂಬಿಯೆಂಟ್ ಲೈಟಿಂಗ್, ಪ್ಯಾಡಲ್ ಶಿಫ್ಟರ್‌ಗಳು, ವೈರ್‌ಲೆಸ್ ಫೋನ್ ಚಾರ್ಜರ್, ಪನೋರಮಿಕ್ ಸನ್‌ರೂಫ್‌ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್) ಹಾಗೂ ಆಲ್ ವೀಲ್ ಡಿಸ್ಕ್ ಬೈಕ್‌ಗಳನ್ನು ಹೊಂದಿದೆ.

Toyota Urban Cruiser Hyryder Suv January 2025 Sales Report Details

ಒಟ್ಟಾರೆ ಟೊಯೊಟಾದ ಮಾರಾಟ ವಿವರಗಳು: ಹೋದ ತಿಂಗಳು (ಜನವರಿ) ಕಂಪನಿಯು ಸರಿ ಸುಮಾರು 29,371 ಯುನಿಟ್ ಕಾರುಗಳನ್ನು ಮಾರಾಟಗೊಳಿಸಿದೆ. 2024ರ ಇದೇ ಅವಧಿಯಲ್ಲಿ ಮಾರಾಟ ಮಾಡಿದ 24,609 ಯುನಿಟ್‌ಗಳಿಗೆ ಹೋಲಿಕೆ ಮಾಡಿದರೆ, ವರ್ಷದಿಂದ ವರ್ಷಕ್ಕೆ (YoY) ಶೇಕಡ 19% ಪ್ರಗತಿಯಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, February 10, 2025, 10:03 [IST]
English summary
Toyota urban cruiser hyryder suv january 2025 sales report details
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+