ಕಲ್ಲು ಬಂಡೆಯಂತಹ ಕಾರಿದು.. 11 ಲಕ್ಷ, 5-ಸೀಟರ್.. ಈ Toyota SUVಗೆ ಮುಗಿಬಿದ್ದ ಗ್ರಾಹಕರು, ಬಿಸಿ ಜಾಮೂನಿನಂತೆ ಮಾರಾಟ!
ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ (Toyota Urban Cruiser Hyryder) ಪ್ರಮುಖ ಎಸ್‌ಯುವಿಯಾಗಿದೆ. ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹಾಗೂ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಉತ್ತಮ ಇಂಧನ ದಕ್ಷತೆಯನ್ನು ಹೆಸರುವಾಗಿದೆ. ಗ್ರಾಹಕರು ಕೂಡ ಮುಗಿಬಿದ್ದು ಖರೀದಿ ಮಾಡುತ್ತಿದ್ದಾರೆ. ಅದಕ್ಕೆ ತಕ್ಕಂತೆ ಈ 2025ರ ಜುಲೈನಲ್ಲಿ 'ಹೈರೈಡರ್' ಕಾರು ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 8,814 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಣೆ ಮಾಡಲಾಗಿದೆ. ಇದರೊಂದಿಗೆ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 19% ಪ್ರಗತಿಯಾಗಿದೆ. 2024ರ ಇದೇ ಅವಧಿಯಲ್ಲಿ 7,419 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು.
ಈ ವರ್ಷದ ಮೊದಲ 6 ತಿಂಗಳಲ್ಲೂ 'ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್' ಎಸ್‌ಯುವಿ ಸ್ಪರ್ಧಾತ್ಮಕ ಸಂಖ್ಯೆಯಲ್ಲಿ ಮಾರಾಟವಾಗಿದೆ. ಬರೋಬ್ಬರಿ 29,277 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಈ ಅಂಕಿ ಸಂಖ್ಯೆಯನ್ನು ವಿಶ್ಲೇಷಣೆ ಮಾಡಿದಾಗ, ಪ್ರತಿ ತಿಂಗಳು 4,879 ಯುನಿಟ್‌ಗಳನ್ನು ಮಾರಲಾಗಿದೆ.

ಟೊಯೊಟಾ ಅರ್ಬನ್ ಕ್ರೂಸರ್ ಹೈರಡರ್ ವಿಶೇಷತೆಗಳೇನು:
ಇದೊಂದು ಕಾಂಪ್ಯಾಕ್ಟ್ ಎಸ್‌ಯುವಿಯಾಗಿದ್ದು, ಬಜೆಟ್ ಬೆಲೆಯಲ್ಲಿಯೂ ಸಿಗುತ್ತದೆ. ರೂ.11.34 ಲಕ್ಷದಿಂದ ರೂ.20.19 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದ್ದು, ಎಲ್ಲ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ಇ, ಎಸ್, ಜಿ ಹಾಗೂ ವಿ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ದೊರೆಯುತ್ತದೆ.
ಈ ಕಾರು ಹೊರಭಾಗದಲ್ಲಿ ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದ್ದು, ಅದು ನೋಡುಗರನ್ನು ಸೆಳೆಯುವಂತಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಪ್ರೀಮಿಯಂ ಗ್ರಿಲ್, ಎಲ್ಇಡಿ ಟೈಲ್ ಲ್ಯಾಂಪ್‌ಗಳು, ರೂಫ್ ರೈಲ್‌ಗಳು, ಸ್ಪೋರ್ಟಿ ರೇರ್ ಸ್ಕಿಡ್ ಪ್ಲೇಟ್ ಹಾಗೂ 17-ಇಂಚಿರುವ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ.

ನೂತನ ಅರ್ಬನ್ ಕ್ರೂಸರ್ ಹೈರೈಡರ್ ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಹೊಂದಿದೆ. 1.5-ಲೀಟರ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) & ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಮತ್ತು ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 19 ರಿಂದ 27.97 ಕಿ.ಮೀ ವರೆಗೆ ಮೈಲೇಜ್ ಕೊಡಬಲ್ಲದು. 45 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಹೊಂದಿದೆ.
ಇದು ಎಂಟೈಸಿಂಗ್ ಸಿಲ್ವರ್, ಗೇಮಿಂಗ್ ಗ್ರೇ, ಸ್ಪೋರ್ಟಿನ್ ರೆಡ್, ಕೆಫೆ ವೈಟ್, ಮಿಡ್‌ನೈಟ್ ಬ್ಲ್ಯಾಕ್ ಹಾಗೂ ಸ್ಪೀಡಿ ಬ್ಲೂ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. ಜೊತೆಗೆ 4365 ಎಂಎಂ ಉದ್ದ, 1795 ಎಂಎಂ ಅಗಲ ಹಾಗೂ 1645 ಎಂಎಂ ಎತ್ತರವಿದೆ. 210 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2600 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.

ಈ ಕಾರಿನ ಕ್ಯಾಬಿನ್ ಸಹ ಚೆನ್ನಾಗಿದೆ. 5 ಆಸನಗಳನ್ನು ಒಳಗೊಂಡಿದೆ. 373 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ - ಡ್ರೈವರ್ ಡಿಸ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಪನೋರಮಿಕ್ ಸನ್‌ರೂಫ್, ರೇರ್ ಎಸಿ ವೆಂಟ್‌ಗಳು ಹಾಗೂ ಯುಎಸ್‌ಬಿ ಪೋರ್ಟ್‌ಗಳು ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಹೊಸ ಹೈರೈಡರ್ ಪ್ರಯಾಣಿಕರಿಗೆ ಗರಿಷ್ಠ ಮಟ್ಟದ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೆಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಹಿಲ್-ಹೋಲ್ಡ್ ಕಂಟ್ರೋಲ್ ಮತ್ತು ಆಲ್-ವೀಲ್ ಡಿಸ್ಕ್ ಬ್ರೆಕ್‌ಗಳನ್ನು ಪಡೆದಿದೆ. ಇದಕ್ಕೆ ಮಾರುತಿ ಗ್ರ್ಯಾಂಡ್ ವಿಟಾರಾ, ಕಿಯಾ ಸೆಲ್ಟೋಸ್, ಹೋಂಡಾ ಎಲಿವೇಟ್ ಮತ್ತು ಸ್ಕೋಡಾ ಕುಶಾಕ್ ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.


Click it and Unblock the Notifications








