ಬೈಕ್‌ನ್ನು ಮೀರಿಸುವ ಮೈಲೇಜ್.. 11 ಲಕ್ಷ, ಈ Toyota ಕಾರಿಗೆ ದಿಢೀರನೆ ಬೇಡಿಕೆ ಹೆಚ್ಚಾಯ್ತು, ಕ್ಯೂ ನಿಂತ ಗ್ರಾಹಕರು!

ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ (Toyota Urban Cruiser Hyryder) ಜನಪ್ರಿಯ ಎಸ್‍ಯುವಿಯಾಗಿದೆ. ಈ ಕಾರಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಇದನ್ನು ಕರ್ನಾಟಕದ ಬಿಡದಿಯಲ್ಲಿ ತಯಾರಿಸಲಾಗುತ್ತದೆ. ಸದ್ಯ, ಈ 'ಮೇ' ತಿಂಗಳಲ್ಲೂ ದಾಖಲೆ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಕಂಪನಿಯು ಸಹ 'ಅರ್ಬನ್ ಕ್ರೂಸರ್ ಹೈರೈಡರ್' ಎಸ್‍ಯುವಿಯು ಇಷ್ಟೊಂದು ಪರಿ ಪ್ರಮಾಣದಲ್ಲಿ ಮಾರಾಟವಾಗುತ್ತದೆ ಎಂದು ಅಂದಾಜಿಸಿರಲಿಲ್ಲ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಹೋದ ತಿಂಗಳು (ಮೇ-2025) ಟೊಯೊಟಾ ಕಿರ್ಲೋಸ್ಕರ್ ಮೋಟಾರ್, ಒಟ್ಟು 7,573 ಯುನಿಟ್ 'ಅರ್ಬನ್ ಕ್ರೂಸರ್ ಹೈರೈಡರ್' ಎಸ್‍ಯುವಿಗಳನ್ನು ಮಾರಾಟಗೊಳಿಸಿದೆ. 2024ರ ಇದೇ ಅವಧಿಯಲ್ಲಿ ಮಾರಿದ 3,906 ಯುನಿಟ್‌ಗಳಿಗೆ ಹೋಲಿಸಿದರೆ, ವರ್ಷದಿಂದ ವರ್ಷಕ್ಕೆ ಶೇಕಡ 94% ಬೆಳವಣಿಗೆಯಾಗಿದೆ.

Toyota Urban Cruiser Hyryder Suv May 2025 Sales Details

ಇದೇ ವರ್ಷದ ಮೊದಲ 4 ತಿಂಗಳಲ್ಲೂ 'ಹೈರೈಡರ್' ಎಸ್‍ಯುವಿ ಸ್ಪರ್ಧಾತ್ಮಕ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಏಪ್ರಿಲ್‌ನಲ್ಲಿ 4,642 ಯುನಿಟ್, ಮಾರ್ಚ್‌ನಲ್ಲಿ 5,286 ಯುನಿಟ್, ಫೆಬ್ರವರಿಯಲ್ಲಿ 4,314 ಯುನಿಟ್ ಹಾಗೂ ಜನವರಿಯಲ್ಲಿ 4,941 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಈ ಅಂಕಿಸಂಖ್ಯೆಯನ್ನು ಲೆಕ್ಕಹಾಕಿದಾಗ ಪ್ರತಿ ತಿಂಗಳು ಸರಾಸರಿ 4500 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ.

ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಎಸ್‍ಯುವಿ ಮಾರಾಟ ಸಂಖ್ಯೆ ದಿಢೀರನೆ ಏರಿಕೆಯಾಗಿದೆ. ಅದಕ್ಕೆ ಹಲವು ಕಾರಣಗಳಿವೆ. ಈ ಕಾರು ಹೆಚ್ಚು ಆಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಖರೀದಿದಾರರು ಕೂಡ ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ಜೊತೆಗೆ ಕೈಗೆಟುಕುವ ಬೆಲೆಯಲ್ಲಿಯೂ ಸಿಗುವುದರಿಂದ ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

Toyota Urban Cruiser Hyryder Suv May 2025 Sales Details

ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಎಸ್‍ಯುವಿ ವಿಶೇಷತೆಗಳೇನು..

ಈ ಎಸ್‍ಯುವಿ ಕನಿಷ್ಠ ರೂ.11.34 ಲಕ್ಷ ಹಾಗೂ ಗರಿಷ್ಠ ರೂ.20.19 ಲಕ್ಷ ಎಕ್ಸ್-ಶೋರೂಂ ದರವನ್ನು ಇದು ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಪಡೆದಿದೆ, ಕೆಫೆ ವೈಟ್, ಗೇಮಿಂಗ್ ಗ್ರೇ, ಸ್ಪೋರ್ಟಿನ್ ರೆಡ್ ಮತ್ತು ಮಿಡ್‌ನೈಟ್ ಬ್ಲ್ಯಾಕ್ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

ಇದು ಹೆಚ್ಚು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.5-ಲೀ. ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಮತ್ತು ಸಿಎನ್‌ಜಿ ಎಂಜಿನ್‌ ಆಯ್ಕೆಯನ್ನು ಹೊಂದಿದೆ. 19 ರಿಂದ 28 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ. ಈ ಕಾರಿನಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದೆ. ಹೆಚ್ಚಿನ ಲಗೇಜ್ ಸಾಗಿಸಲು 373 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.

Toyota Urban Cruiser Hyryder Suv May 2025 Sales Details

ನೂತನ ಅರ್ಬನ್ ಕ್ರೂಸರ್ ಹೈರೈಡರ್ ಎಸ್‍ಯುವಿಯು ಖರೀದಿದಾರರನ್ನು ಸೆಳೆಯಬಲ್ಲ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಮುಖವಾಗಿ 9 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸನ್‌ರೂಫ್‌, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಹೊಂದಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಲು 6 ಏರ್‌ಬ್ಯಾಗ್‌ಗಳು ಹಾಗೂ ಆಲ್ - ವೀಲ್ ಡಿಸ್ಕ್ ಬೈಕ್‌ಗಳನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Saturday, June 7, 2025, 9:52 [IST]
English summary
Toyota urban cruiser hyryder suv may 2025 sales details
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+