Toyota: ಕಲ್ಲು ಬಂಡೆಯಂತಹ ಕಾರಿದು.. 28 Km ಮೈಲೇಜ್, 10.95 ಲಕ್ಷ.. ಕ್ಯೂ ನಿಂತ ಗ್ರಾಹಕರು!

ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ (Toyota Urban Cruiser Hyryder) ಪ್ರಮುಖ ಎಸ್‌ಯುವಿಯಾಗಿ ಹೊರ ಹೊಮ್ಮಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಪ್ರತಿ ತಿಂಗಳು ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದ್ದು, ಅದು ಈ ನವೆಂಬರ್ ತಿಂಗಳಲ್ಲೂ ಮುಂದಿವರಿದಿದೆ. ಒಟ್ಟು 7,393 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2024ರ ಇದೇ ಅವಧಿಯಲ್ಲಿ 4,857 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯನ್ನು ಲೆಕ್ಕಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಶೇಕಡ 52% ಪ್ರಗತಿಯಾಯಾಗಿದೆ.

ಇದೇ ನವೆಂಬರ್‌ನಲ್ಲಿ 'ಟೊಯೊಟಾ ಹೈರೈಡರ್' ಮಾರಾಟವು ಅಧಿಕಗೊಳ್ಳಲು ಹಲವು ಕಾರಣಗಳಿವೆ. ಇದು 'ಹೈಬ್ರಿಡ್' ಎಸ್‌ಯುವಿಯಾಗಿದ್ದು, ಹೆಚ್ಚಿನ ಮೈಲೇಜ್ ನೀಡುತ್ತದೆ. ಜೊತೆಗೆ ಪ್ರತಿಸ್ಪರ್ಧಿ ಕಂಪನಿಗಳ ಕಾರುಗಳಿಗೆ ಹೋಲಿಕೆ ಮಾಡಿದರೆ, ಸ್ಪರ್ಧಾತ್ಮಕ ದರದಲ್ಲಿ ಖರೀದಿಗೆ ಲಭ್ಯವಿದೆ. ಹೀಗಾಗಿ, ದೊಡ್ಡ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತದೆ.

Toyota Urban Cruiser Hyryder Suv November 2025 Sales 52 Percent Growth Details

ಜೂನ್‌ನಿಂದ ಅಕ್ಟೋಬರ್ ತಿಂಗಳವರೆಗೂ 'ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್' ಉತ್ತಮ ಸಂಖ್ಯೆಯಲ್ಲಿಯೇ ಮಾರಾಟವಾಗಿದೆ. ಬರೋಬ್ಬರಿ 44,539 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಅಂದರೆ ಪ್ರತಿ ತಿಂಗಳು ಸರಾಸರಿ 8,907 ಯುನಿಟ್‌ಗಳನ್ನು ಮಾರಲಾಗಿದೆ. ನೂತನ 'ಹೈರೈಡರ್' ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ ರೂ.10.95 ಲಕ್ಷದಿಂದ ರೂ.19.76 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ.

ಈ ಕಾರು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ನೋಡುಗರ ಕಣ್ಮನ ಸೆಳೆಯುತ್ತದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ 17-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಕೆಫೆ ವೈಟ್, ಎಂಟೈಸಿಂಗ್ ಸಿಲ್ವರ್, ಗೇಮಿಂಗ್ ಗ್ರೇ, ಸ್ಪೋರ್ಟಿನ್ ರೆಡ್, ಮಿಡ್‌ನೈಟ್ ಬ್ಲ್ಯಾಕ್, ಕೇವ್ ಬ್ಲ್ಯಾಕ್ ಮತ್ತು ಸ್ಪೀಡಿ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

Toyota Urban Cruiser Hyryder Suv November 2025 Sales 52 Percent Growth Details

ನೂತನ 'ಟೊಯೊಟಾ ಹೈರೈಡರ್' ಸಾಕಷ್ಟು ವಿಶಾಲವಾಗಿದೆ. 4,365 ಎಂಎಂ ಉದ್ದ, 1,795 ಎಂಎಂ ಅಗಲ ಮತ್ತು 1,645 ಎಂಎಂ ಎತ್ತರವಿದೆ. 210 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,600 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚರಿಸಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ 373 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.

ಇದು ಬೆಲೆಗೆ ತಕ್ಕಂತೆ ಬಲಿಷ್ಠವಾದ 3 ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಹಾಗೂ 1.5-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಹಾಗೂ ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಹೊಂದಿದೆ. 19 ರಿಂದ 28 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 12.4 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

Toyota Urban Cruiser Hyryder Suv November 2025 Sales 52 Percent Growth Details

ಈ ಕಾರಿನ ಕ್ಯಾಬಿನ್ ವಿನ್ಯಾಸವು ಅತ್ಯುತ್ತಮವಾಗಿದೆ. ಭರ್ಜರಿಯಾದ ಡ್ಯಾಶ್‌ಬೋರ್ಡ್‌ನ್ನು ಹೊಂದಿದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸನ್‌ರೂಫ್, ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್‌ಗಳು ಮತ್ತು ರೇರ್-ಎಸಿ ವೆಂಟ್‌ಗಳನ್ನು ಒಳಗೊಂಡಿದೆ.

ಹೊಸ 'ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್' ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೆಕಿಂಗ್ ಸಿಸ್ಟಮ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ರೇರ್ ಪಾರ್ಕಿಂಗ್ ಸೆನ್ಸರ್ಸ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ. ಇದಕ್ಕೆ ಮಾರುತಿ ಸುಜುಕಿ ವಿಕ್ಟೋರಿಸ್ ಹಾಗೂ ಮಾರುತಿ ಸುಜುಕಿ ಗ್ರಾಂಡ್ ವಿಟಾರಾಗಳು ಎದುರಾಳಿಯಾಗಿವೆ.

More from DriveSpark

Article Published On: Saturday, December 13, 2025, 8:56 [IST]
English summary
Toyota urban cruiser hyryder suv november 2025 sales 52 percent growth details
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+