Toyota: ಗಟ್ಟಿಮುಟ್ಟಾದ ಕಾರಿದು.. 27.97 ಕಿ.ಮೀ ಮೈಲೇಜ್, 10.95 ಲಕ್ಷ.. ಈ ಟೊಯೊಟಾ ಎಸ್‌ಯುವಿಗೆ ಮನಸೋತ ಗ್ರಾಹಕರು!

ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ (Toyota Urban Cruiser Hyryder) ಜಗಮೆಚ್ಚಿದ ಎಸ್‌ಯುವಿಯಾಗಿದೆ. 2022ರಲ್ಲಿ ಈ ಕಾರನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಲಾಯಿತು. ಇದು ನೋಡಲು ತುಂಬಾ ಚೆನ್ನಾಗಿದ್ದು, ನಾನಾ ಬಗೆಯ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಈ ಅಕ್ಟೋಬರ್ ತಿಂಗಳಲ್ಲೂ 'ಹೈರೈಡರ್' ದೊಡ್ಡ ಸಂಖ್ಯೆಯಲ್ಲಿ ಮಾರಾಟವಾಗಿದೆ. ಸರಿ ಸುಮಾರು 11,555 ಯುನಿಟ್‌ಗಳನ್ನು ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 5,449 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯನ್ನು ವಿಶ್ಲೇಷಣೆ ಮಾಡಿದಾಗ, ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 41.28% ಪ್ರಗತಿಯಾಗಿದೆ.

ಇದೇ ಅಕ್ಟೋಬರ್‌ನಲ್ಲಿ 'ಟೊಯೊಟಾ ಹೈರೈಡರ್' ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗಲು ಹತ್ತಾರು ಕಾರಣಗಳಿವೆ. ಬಹುಮುಖ್ಯವಾಗಿ ಈ ಕಾರು 'ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ'ದ ರೀ-ಬ್ಯಾಡ್ಜ್ ಮಾಡೆಲ್ ಆಗಿದೆ. ಸೆಪ್ಟೆಂಬರ್ 22 ರಿಂದ ಜಿಎಸ್‌ಟಿ ಪರಿಷ್ಕರಣೆಗೊಂಡಿದೆ. 'ಹೈರೈಡರ್' ಬೆಲೆಯೂ ಇಳಿಕೆಯಾಗಿದೆ. ಜೊತೆಗೆ ದೀಪಾವಳಿ ಹಬ್ಬವಿದ್ದ ಹಿನ್ನೆಲೆಯಲ್ಲಿಯೂ ಭಾರೀ ಪ್ರಯಾಣದಲ್ಲಿ ಮಾರಾಟಗೊಂಡಿದೆ ಎಂಬ ಲೆಕ್ಕಾಚಾರಗಳಿವೆ.

Toyota Urban Cruiser Hyryder Suv October 2025 Sales Details

'ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್' ವಿಶೇಷತೆಗಳೇನು:

ಇದು ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ರೂ.10.95 ಲಕ್ಷದಿಂದ ರೂ.19.76 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದೆ. ಮಧ್ಯಮ ಹಾಗೂ ಶ್ರೀಮಂತ ವರ್ಗದ ಗ್ರಾಹಕರು ಕೂಡ ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ. ಇ, ಎಸ್, ಜಿ ಮತ್ತು ವಿ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ.

ಈ ಕಾರು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು 17 ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. 210 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,600 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 1,755 ಕೆಜಿ ತೂಕವಿದೆ.

Toyota Urban Cruiser Hyryder Suv October 2025 Sales Details

ನೂತನ 'ಟೊಯೊಟಾ ಹೈರೈಡರ್' 3 ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. ಇದರ 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 103 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 137 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 19.20 ರಿಂದ 21.11 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.

ಮತ್ತೊಂದು 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಎಂಜಿನ್, 116 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 141 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 27.97 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ.

Toyota Urban Cruiser Hyryder Suv October 2025 Sales Details

ಇನ್ನೊಂದು 1.5-ಲೀಟರ್ ಪೆಟ್ರೋಲ್ + ಸಿಎನ್‌ಜಿ ಎಂಜಿನ್‌, 88 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 121.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 26.6 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.

ಈ ಕಾರು ಕೆಫೆ ವೈಟ್, ಎಂಟೈಸಿಂಗ್ ಸಿಲ್ವರ್, ಗೇಮಿಂಗ್ ಗ್ರೇ, ಸ್ಪೋರ್ಟಿನ್ ರೆಡ್, ಮಿಡ್‌ನೈಟ್ ಬ್ಲ್ಯಾಕ್ ಮತ್ತು ಕೇವ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 5 ಆಸನಗಳನ್ನು ಪಡೆದಿದೆ. 373 ಲೀಟರ್‌ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಸನ್‌ರೂಫ್ ಮತ್ತು ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಜೊಂಡಿದೆ.

ಹೊಸ 'ಟೊಯೊಟಾ ಹೈರೈಡರ್' ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೆಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

More from DriveSpark

Article Published On: Wednesday, November 12, 2025, 8:43 [IST]
English summary
Toyota urban cruiser hyryder suv october 2025 sales details
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+