ಹಬ್ಬಕ್ಕೆ ಗಟ್ಟಿಮುಟ್ಟಾದ ಟೊಯೊಟಾ ಕಾರು ಖರೀದಿಸಬೇಕೇ.. 27.97 ಕಿ.ಮೀ ಮೈಲೇಜ್, ಆನ್-ರೋಡ್ ದರವೆಷ್ಟು.. EMI ಏನು?
ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ (Toyota Urban Cruiser Hyryder) ಜನಮೆಚ್ಚಿದ ಎಸ್‌ಯುವಿಯಾಗಿದೆ. ಪ್ರತಿ ತಿಂಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ರೂ.10.95 ಲಕ್ಷದಿಂದ ರೂ.19.76 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದೆ. ನೀವು ನೂತನ ಕಾರೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ, 'ಅರ್ಬನ್ ಕ್ರೂಸರ್ ಹೈರೈಡರ್' ಅತ್ಯುತ್ತಮ ಆಯ್ಕೆಯಾಗಲಿದೆ. ನಾವಿಲ್ಲಿ ಈ ಎಸ್‌ಯುವಿಯ ಆನ್-ರೋಡ್ ಬೆಲೆ (On-Road Price) ಹಾಗೂ ಇಎಂಐ (EMI) ಕುರಿತಂತೆ ಪ್ರಮುಖ ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.
ಹೊಸ 'ಅರ್ಬನ್ ಕ್ರೂಸರ್ ಹೈರೈಡರ್' ಹಲವು ವಿಧದಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಇದರ 'ಇ' (ಪೆಟ್ರೋಲ್) ರೂಪಾಂತರ, ರೂ.13.44 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ರೂ.3 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಕೊಂಡುಕೊಂಡರೆ, ರೂ.10.44 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ಮಾಸಿಕ ರೂ.21,000 ವರೆಗೆ ಇಎಂಐ ಕಟ್ಟಬೇಕು.

ಇನ್ನೊಂದು 'ಎಸ್' (ಪೆಟ್ರೋಲ್) ರೂಪಾಂತರ, ರೂ.15.28 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ರೂ.3 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.12,28 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ 5 ವರ್ಷಕ್ಕೆ ತಿಂಗಳಿಗೆ ರೂ.25,000 ವರೆಗೆ ಇಎಂಐ ಪಾವತಿ ಮಾಡಬೇಕು.
ಮತ್ತೊಂದು 'ಜಿ' ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ರೂಪಾಂತರ, ರೂ.22.55 ಲಕ್ಷವರೆಗೆ ಆನ್-ರೋಡ್ ದರವನ್ನು ಹೊಂದಿದೆ. ರೂ.3 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ತೆಗೆದುಕೊಂಡರೆ, ರೂ.19.55 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಗಳಿಗೆ ಮಾಸಿಕ ರೂ.39,000 ವರೆಗೆ ಇಎಂಐ ಕಟ್ಟಬೇಕು.

ಇದೇ ಕಾರಿನ 'ಎಸ್' (ಸಿಎನ್‌ಜಿ) ರೂಪಾಂತರ, ರೂ.16.34 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ರೂ.3 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಖರೀದಿ ಮಾಡಿದರೆ, ರೂ.13.34 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.27,000 ವರೆಗೆ ಇಎಂಐ ಪಾವತಿಸಬೇಕು.
'ಟೊಯೊಟಾ ಹೈರೈಡರ್' ವಿಶೇಷತೆಗಳೇನು:
ಈ ಎಸ್‌ಯುವಿಯು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಎಂಟೈಸಿಂಗ್ ಸಿಲ್ವರ್, ಕೆಫೆ ವೈಟ್, ಗೇಮಿಂಗ್ ಗ್ರೇ, ಸ್ಪೋರ್ಟಿನ್ ರೆಡ್, ಮಿಡ್‌ನೈಟ್ ಬ್ಲ್ಯಾಕ್, ಕೇವ್ ಬ್ಲ್ಯಾಕ್ & ಸ್ಪೀಡಿ ಬ್ಲೂ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 210 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,600 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 1,755 ಕೆಜಿ ತೂಕವಿದೆ.

ಇದು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಮತ್ತು 1.5-ಲೀಟರ್ ಪೆಟ್ರೋಲ್/ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಹಾಗೂ ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 19 ರಿಂದ 27.97 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ.
ನೂತನ 'ಹೈರೈಡರ್' 5 ಆಸನಗಳನ್ನು ಪಡೆದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 373 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (9 ಇಂಚು), ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸನ್‌ರೂಫ್ ಹಾಗೂ ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ.
ನಿಮ್ಮ ಗಮನಕ್ಕೆ.. ಇಲ್ಲಿ 'ಟೊಯೊಟಾ ಹೈರೈಡರ್' ಕಾರಿನ ಕೆಲವೇ ರೂಪಾಂತರಗಳ ಆನ್-ರೋಡ್ ಬೆಲೆ & ಇಎಂಐ ಆಯ್ಕೆಯ ಬಗ್ಗೆ ಮಾತ್ರ ವಿವರಿಸಿದ್ದೇವೆ. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.


Click it and Unblock the Notifications








