28 Km ಮೈಲೇಜ್.. 7 ಲಕ್ಷ, 5-ಸೀಟರ್.. ಆದರೂ ಈ ಟೊಯೊಟಾ ಕಾರನ್ನು ಗ್ರಾಹಕರು ಕೊಳ್ಳುತ್ತಿಲ್ಲ, ಕಾರಣವೇನು?

ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ (Toyota Urban Cruiser Taisor) ಪ್ರಖ್ಯಾತ ಕಾಂಪ್ಯಾಕ್ಟ್ ಎಸ್‌ಯುವಿಯಾಗಿದೆ. ಇದು ಮಾರುತಿ ಸುಜುಕಿ ಫ್ರಾಂಕ್ಸ್ ಕಾರಿನ ರೀ-ಬ್ಯಾಡ್ಜ್ ಮಾಡೆಲ್ ಆಗಿದ್ದು, 2024ರಲ್ಲಿ ಬಿಡುಗಡೆಗೊಳಿಸಲಾಗಿತ್ತು. ಆರಂಭದಲ್ಲಿ ಭಾರೀ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿತ್ತು. ಅದರ ಹೊರತಾಗಿ ದಿನದಿಂದ ದಿನಕ್ಕೆ ಕಾರಿನ ಮಾರಾಟ ಸಂಖ್ಯೆ ಕುಸಿತವಾಗುತ್ತಿದೆ. ಈ ಜೂನ್ ತಿಂಗಳಲ್ಲೂ ಅದು ಮುಂದುವರಿದಿದ್ದು, ಒಟ್ಟು 2,408 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ. ಇದರೊಂದಿಗೆ ವರ್ಷದಿಂದ ವರ್ಷಕ್ಕೆ ಮಾರಾಟ ಪ್ರಮಾಣವು ಶೇಕಡ -24% ಇಳಿಕೆಯಾಗಿದೆ. 2024ರ ಇದೇ ಅವಧಿಯಲ್ಲಿ 3,185 ಯುನಿಟ್‌ನ್ನು ಮಾರಲಾಗಿತ್ತು.

ಈ ವರ್ಷದ ಮೊದಲ 5 ತಿಂಗಳಲ್ಲೂ 'ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್' ಎಸ್‌ಯುವಿ, ಮಾರಾಟದಲ್ಲಿ ಹಾವು-ಏಣಿ ಆಟ ಮುಂದುವರಿದಿದ್ದು, ಹಲವು ಏರಿಳಿತಗಳನ್ನು ಕಾಣಲಾಗಿದೆ. ಬರೋಬ್ಬರಿ 14,998 ಯುನಿಟ್‌ಗಳನ್ನು ಮಾರಲಾಗಿದೆ. ಈ ಅಂಕಿಸಂಖ್ಯೆಯನ್ನು ಲೆಕ್ಕ ಹಾಕಿದಾಗ, ಪ್ರತಿ ತಿಂಗಳು 3,000 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ.

Toyota Urban Cruiser Taisor June 2025 Sales Details

ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ ಮಾರಾಟ ಸಂಖ್ಯೆ ಇಳಿಮುಖವಾಗಲು ನಾನಾ ಕಾರಣಗಳಿವೆ. ಬಹುಮುಖ್ಯವಾಗಿ ಈ ಕಾರಿನ ಬೆಲೆಗೆ ಇತರೆ ಕಂಪನಿಯ ವಿವಿಧ ಎಸ್‌ಯುವಿಗಳು ಲಭ್ಯವಿವೆ. ಗ್ರಾಹಕರು ಅವುಗಳನ್ನು ಕೊಂಡುಕೊಳ್ಳಲು ಮನಸ್ಸು ಮಾಡಿದ್ದಾರೆ. ಜೊತೆಗೆ ಮಾರುತಿ ಫ್ರಾಂಕ್ಸ್ ಕಾರನ್ನೇ ಹಲವು ಖರೀದಿ ಮಾಡುತ್ತಿದ್ದಾರೆ. ಹೀಗಾಗಿ 'ಟೈಸರ್' ಮಾರಾಟ ಪ್ರಮಾಣವು ಕಡಿಮೆಯಾಗುತ್ತಿದೆ.

ಟೊಯೊಟಾ ಟೈಸರ್ ವಿಶೇಷತೆಗಳೇನು:

ಈ ಎಸ್‌ಯುವಿಯು ಕೈಗೆಟುಕುವ ಬೆಲೆಯಲ್ಲಿ ಸಿಗಲಿದ್ದು, ಮಧ್ಯಮ ಹಾಗೂ ಶ್ರೀಮಂತ ಗ್ರಾಹಕರು ಸುಲಭವಾಗಿ ಖರೀದಿ ಮಾಡಬಹುದು. ಇದು ಕನಿಷ್ಠ ರೂ.7.74 ಲಕ್ಷ ಹಾಗೂ ಗರಿಷ್ಠ ರೂ.13 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಇ, ಎಸ್, ಜಿ ಹಾಗೂ ವಿ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ದೊರೆಯುತ್ತದೆ.

Toyota Urban Cruiser Taisor June 2025 Sales Details

ನೂತನ ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ ಎಸ್‌ಯುವಿ ಹೊರಭಾಗದಲ್ಲಿ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದೆ. ಇದು ನೋಡುಗರನ್ನು ಸೆಳೆಯುತ್ತದೆ. ಎಂಟೈಸಿಂಗ್ ಸಿಲ್ವರ್, ಸ್ಪೋರ್ಟಿನ್ ರೆಡ್ ಹಾಗೂ ಗೇಮಿಂಗ್ ಗ್ರೇ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. ಈ ಕಾರು 3995 ಎಂಎಂ ಉದ್ದ, 1765 ಎಂಎಂ ಅಗಲ ಹಾಗೂ 1550 ಎಂಎಂ ಎತ್ತರವು ಇದೆ. 190 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2520 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಇದರಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ದೂರದ ಊರುಗಳಿಗೆ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 308 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ. 37 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ. 195/60 ಆರ್16 ಟೈರ್‌ಗಳನ್ನು ಪಡೆದಿದೆ.

ಈ ಕಾರು ಶಕ್ತಿಯುತವಾದ ಪವರ್‌ಟ್ರೇನ್‌ ಆಯ್ಕೆಯನ್ನು ಹೊಂದಿದೆ. 1.2-ಲೀ. ಪೆಟ್ರೋಲ್, 1.0-ಲೀ. ಟರ್ಬೊ ಪೆಟ್ರೋಲ್ ಹಾಗೂ 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್ ಹಾಗೂ 6-ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 19 ರಿಂದ 28 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ.

ಹೊಸ ಟೊಯೊಟಾ ಟೈಸರ್ ಎಸ್‌ಯುವಿಯ ಕ್ಯಾಬಿನ್ ವಿನ್ಯಾಸವು ತುಂಬಾ ಚೆನ್ನಾಗಿದೆ. 9-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ ಸ್ಟೀರಿಂಗ್-ಮೌಂಟೆಡ್ ಕಂಟ್ರೋಲ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಇದು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಯಾಗಿ 6-ಏರ್‌ಬ್ಯಾಗ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

More from DriveSpark

Article Published On: Saturday, July 12, 2025, 8:30 [IST]
English summary
Toyota urban cruiser taisor june 2025 sales details
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+