28 ಕಿ.ಮೀ ಮೈಲೇಜ್.. 7 ಲಕ್ಷ.. 5-ಸೀಟರ್, ಈ 'Toyota Suv'ಗೆ ಮುಗಿಬಿದ್ದ ಗ್ರಾಹಕರು.. ಫುಲ್ ಡಿಮ್ಯಾಂಡ್!

ಟೊಯೊಟಾ (Toyota) ಪ್ರಮುಖ ಕಾರು ತಯಾರಕ ಕಂಪನಿಯಾಗಿದ್ದು, ಹಳ್ಳಿಯಿಂದ ದಿಲ್ಲಿವರೆಗೆ ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಇನ್ನೋವಾ, ಗ್ಲ್ಯಾನ್ಜಾ, ಫಾರ್ಚುನರ್ & ರೂಮಿಯನ್ ಸೇರಿದಂತೆ ವಿವಿಧ ಕಾರುಗಳನ್ನು ಮಾರಾಟಗೊಳಿಸುತ್ತಿದೆ. ಕಳೆದ ತಿಂಗಳು (ಏಪ್ರಿಲ್- 2025) ಸಹ ಟೊಯೊಟಾ ಕಂಪನಿಯು ಒಟ್ಟು 24,833 ಯುನಿಟ್‌ ಕಾರುಗಳನ್ನು ಗ್ರಾಹಕರಿಗೆ ವಿತರಿಸಿದೆ. ಅದರಲ್ಲೂ ಪ್ರಖ್ಯಾತ ಎಸ್‌ಯುವಿ ಅರ್ಬನ್ ಕ್ರೂಸರ್ ಟೈಸರ್ (Urban Cruiser Taisor) ಭಾರೀ ಸಂಖ್ಯೆಯಲ್ಲಿಯೂ ಮಾರಾಟಗೊಂಡಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಹೋದ ತಿಂಗಳು ಟೊಯೊಟಾ ಕಂಪನಿಯು 2,421 ಯುನಿಟ್ 'ಅರ್ಬನ್ ಕ್ರೂಸರ್ ಟೈಸರ್' ಎಸ್‌ಯುವಿಯನ್ನು ಯಶಸ್ವಿಯಾಗಿ ಮಾರಾಟ ಮಾಡಿದೆ. ಈ ವರ್ಷದ ಮೊದಲ ತಿಂಗಳಲ್ಲೂ ಇದೇ ಕಾರು ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಮಾರ್ಚ್‌ನಲ್ಲಿ 3,468 ಯುನಿಟ್, ಫೆಬ್ರವರಿಯಲ್ಲಿ 3,604 ಯುನಿಟ್ ಮತ್ತು ಜನವರಿಯಲ್ಲಿ 2,470 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ.

Toyota Urban Cruiser Taisor Suv April 2025 Sales Details

ಈ ಅಂಕಿ ಸಂಖ್ಯೆಯಲ್ಲಿ ಲೆಕ್ಕಹಾಕಿದಾಗ ಪ್ರತಿ ತಿಂಗಳು ಸರಾಸರಿ 2,500 ಯುನಿಟ್‌ಗೂ ಅಧಿಕ 'ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್' ಎಸ್‌ಯುವಿಗಳು ಮಾರಾಟಗೊಂಡಿವೆ. ಇದು 'ಮಾರುತಿ ಸುಜುಕಿ ಫ್ರಾಂಕ್ಸ್' ಕಾರಿನ ರೀ-ಬ್ಯಾಡ್ಜ್ ಮಾಡೆಲ್ ಆಗಿದೆ. ಈ ಎಸ್‌ಯುವಿ ಬಿಡುಗಡೆಯಾಗಿ 1 ವರ್ಷದ ಮೊದಲೇ ಉತ್ತಮ ಬೇಡಿಕೆಯನ್ನು ಪಡೆದುಕೊಳ್ಳುತ್ತಿದೆ. ಇದರಲ್ಲಿರುವ ವೈಶಿಷ್ಟ್ಯಗಳು ಹಾಗೂ ಕೈಗೆಟುಕುವ ಬೆಲೆಯಿಂದ ಅದು ಸಾಧ್ಯವಾಗಿದೆ.

ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ ವಿಶೇಷತೆಗಳೇನು..

ಇದೊಂದು ಪ್ರಮುಖ ಎಸ್‌ಯುವಿಯಾಗಿದ್ದು, ಅತ್ಯಂತ ಕೈಗೆಟುಕುವ ಬೆಲೆಯಲ್ಲಿಯೂ ಖರೀದಿಗೆ ದೊರೆಯುತ್ತದೆ. ಕನಿಷ್ಠ ರೂ.7.74 ಲಕ್ಷ ಮತ್ತು ಗರಿಷ್ಠ ರೂ.13.04 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಹೊರಭಾಗದಲ್ಲೂ ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಆರೆಂಜ್, ಕೆಫೆ ವೈಟ್, ಎಂಟೈಸಿಂಗ್ ಸಿಲ್ವರ್ ಮತ್ತು ಗೇಮಿಂಗ್ ಗ್ರೇ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

Toyota Urban Cruiser Taisor Suv April 2025 Sales Details

ಈ ಕಾರು 1.2.ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1-ಲೀ. ಟರ್ಬೊ ಪೆಟ್ರೋಲ್ ಮತ್ತು 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್ & 6-ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 19 ರಿಂದ 28 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ನೂತನ ಅರ್ಬನ್ ಕ್ರೂಸರ್ ಟೈಸರ್ ಎಸ್‌ಯುವಿಯು ಇ, ಎಸ್, ಎಸ್ ಪ್ಲಸ್, ಜಿ ಹಾಗೂ ವಿ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ದೊರೆಯುತ್ತದೆ. ಇದರಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚರಿಸಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 308 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.

ಈ ಎಸ್‌ಯುವಿ 9-ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜಿಂಗ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸ್ಟೀರಿಂಗ್-ಮೌಂಟೆಡ್ ಕಂಟ್ರೋಲ್‌ಗಳು, ಕ್ರೂಸ್ ಕಂಟ್ರೋಲ್ ಹಾಗೂ ಪ್ಯಾಡಲ್ ಶಿಫ್ಟರ್‌ನಂತಹ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, May 26, 2025, 13:13 [IST]
English summary
Toyota urban cruiser taisor suv april 2025 sales details
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+