ಬೈಕ್‌ನಂತೆ 28 ಕಿ.ಮೀ ಮೈಲೇಜ್.. 7.89 ಲಕ್ಷ.. ಈ ಟೊಯೊಟಾ ಕಾರನ್ನು ಗ್ರಾಹಕರು ಹೆಚ್ಚು ಖರೀದಿಸಿಲ್ಲ, ಯಾಕೆ?

ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ (Toyota Urban Cruiser Taisor) ಜಗಮೆಚ್ಚಿದ ಎಸ್‌ಯುವಿ ಎಂದೇ ಹೆಸರುವಾಸಿಯಾಗಿದೆ. ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹಾಗೂ ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಆದರೂ ಈ ಆಗಸ್ಟ್ ತಿಂಗಳು 'ಟೈಸರ್' ಮಾರಾಟ ಸಂಖ್ಯೆ ಇಳಿಮುಖವಾಗಿದೆ. ಒಟ್ಟು 2,683 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 3,213 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಅಂಶವನ್ನು ವಿಶ್ಲೇಷಣೆ ಮಾಡಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ -16% ಕುಸಿತವಾಗಿದೆ.

ನೂತನ 'ಟೊಯೊಟಾ ಟೈಸರ್' ಮಾರಾಟ ಸಂಖ್ಯೆ ಆಗಸ್ಟ್‌ನಲ್ಲಿ ಇಳಿಕೆಯಾಗಲು ವಿವಿಧ ಕಾರಣಗಳನ್ನು ಪಟ್ಟಿ ಮಾಡಬಹುದು. ಹೊಸ ಕಾರುಗಳ ಖರೀದಿ ಮೇಲೆ ಕೇಂದ್ರ ಸರ್ಕಾರ 'ಜಿಎಸ್‌ಟಿ'ಯನ್ನು ಕಡಿಮೆಯಾಗಲಿದೆ ಎಂಬ ಸುಳಿವು ಗ್ರಾಹಕರಿಗೆ ಲಭ್ಯವಾಗಿತ್ತು. ಜೊತೆಗೆ ಖರೀದಿದಾರರು ಇದೇ ಬೆಲೆಗೆ ಲಭ್ಯವಿರುವ ಎಸ್‌ಯುವಿಗಳನ್ನು ಕೊಳ್ಳಲು ಆಸಕ್ತಿ ತೋರಿಸಿದ್ದರಿಂದ 'ಟೈಸರ್' ಮಾರಾಟ ಕುಂಠಿತವಾಗಿದೆ ಎನ್ನಲಾಗಿದೆ.

Toyota Urban Cruiser Taisor Suv August 2025 Sales Report

ಪ್ರಸ್ತುತ ಈ ಕಾರು ರೂ.7.89 ಲಕ್ಷದಿಂದ ರೂ.13.19 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಜಿಎಸ್‌ಟಿ ಪರಿಷ್ಕರಿಸಲಾಗಿದ್ದು, ನೂತನ ತೆರಿಗೆ ದರಗಳು ಸೆ.22ರಿಂದ ಅಧಿಕೃತವಾಗಿ ಜಾರಿಯಾಗಲಿದೆ. ಆ ಬಳಿಕ 'ಟೈಸರ್' ಬೆಲೆ ಮತ್ತಷ್ಟು ಇಳಿಕೆಯಾಗಲಿದೆ. ಇದು ಇ, ಎಸ್ ಹಾಗೂ ಎಸ್ ಪ್ಲಸ್ ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಹೊಸ ಟೈಸರ್ ನೋಡುಗರ ಕಣ್ಣು ಕುಕ್ಕುವಂತಹ ವಿನ್ಯಾಸವನ್ನು ಹೊಂದಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು 16 ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಬ್ಲ್ಯೂಯಿಸ್ ಬ್ಲ್ಯಾಕ್, ಲ್ಯೂಸೆಂಟ್ ಆರೆಂಜ್, ಸ್ಪೋರ್ಟಿನ್ ರೆಡ್, ಕೆಫೆ ವೈಟ್ ಮತ್ತು ಗೇಮಿಂಗ್ ಗ್ರೇ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

Toyota Urban Cruiser Taisor Suv August 2025 Sales Report

ಈ ಕಾರು ವಿಶಾಲ ಗಾತ್ರದಲ್ಲಿದೆ. 3,995 ಎಂಎಂ ಉದ್ದ, 1,765 ಎಂಎಂ ಅಗಲ ಹಾಗೂ 1,550 ಎಂಎಂ ಎತ್ತರವಿದೆ. 190 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,520 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. ಸರಿ ಸುಮಾರು 1,060 ಕೆಜಿ ತೂಕವಿದೆ.

ಇದು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.2-ಲೀಟರ್ ಪೆಟ್ರೋಲ್, 1.0-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಹಾಗೂ 6-ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 19 ರಿಂದ 28 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 37 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ತನ್ನದಾಗಿಸಿಕೊಂಡಿದೆ. 175 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 10.98 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

Toyota Urban Cruiser Taisor Suv August 2025 Sales Report

ನೂತನ ಟೈಸರ್ ಕ್ಯಾಬಿನ್ ವಿನ್ಯಾಸವು ಆಧುನಿಕವಾಗಿದೆ. 5 ಆಸನಗಳನ್ನು ಹೊಂದಿದೆ. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 308 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್‌ಗಳು, ವೈರ್‌ಲೆಸ್ ಫೋನ್ ಚಾರ್ಜಿಂಗ್, ಕ್ರೂಸ್ ಕಂಟ್ರೋಲ್ ಮತ್ತು ರೇರ್ ಎಸಿ ವೆಂಟ್‌ಗಳು ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಪ್ರಯಾಣಿಕರಿಗೆ ಗರಿಷ್ಠ ಒದಗಿಸುತ್ತದೆ. ಅದಕ್ಕಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಹಿಲ್ ಹೋಲ್ಡ್ ಅಸಿಸ್ಟ್, ಕ್ರೂಸ್ ಕಂಟ್ರೋಲ್ ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ. ಇದಕ್ಕೆ ಮಾರುತಿ ಸುಜುಕಿ ಫ್ರಾಂಕ್ಸ್, ಸ್ಕೋಡಾ ಕೈಲಾಕ್, ನಿಸ್ಸಾನ್ ಮ್ಯಾಗ್ನೈಟ್ ಹಾಗೂ ಕಿಯಾ ಸೋನೆಟ್ ಎಸ್‌ಯುವಿಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

More from DriveSpark

Article Published On: Thursday, September 18, 2025, 8:33 [IST]
English summary
Toyota urban cruiser taisor suv august 2025 sales report
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+