28 Km ಮೈಲೇಜ್.. 7 ಲಕ್ಷ.. 5-ಸೀಟರ್, ಈ ಜನಪ್ರಿಯ ಟೊಯೊಟಾ ಕಾರಿಗೆ ಭಾರೀ ರಿಯಾಯಿತಿ ಘೋಷಣೆ!

ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ (Toyota Urban Cruiser Taisor) ಪ್ರಖ್ಯಾತ ಎಸ್‌ಯುವಿಯಾಗಿ ಹೊರಹೊಮ್ಮಿದೆ. ದೇಶೀಯ ಮಾರುಕಟ್ಟೆಯಲ್ಲಿ 'ಮಾರುತಿ ಸುಜುಕಿ ಫ್ರಾಂಕ್ಸ್' ಆಧಾರಿತ ಈ ಕಾರನ್ನು 2024ರ ಏಪ್ರಿಲ್ ತಿಂಗಳಲ್ಲಿ ಅದ್ದೂರಿಯಾಗಿ ಮಾರಾಟಕ್ಕೆ ತರಲಾಗಿತ್ತು. ನೂತನ 'ಟೈಸರ್' ಎಸ್‌ಯುವಿಯು ಹೆಚ್ಚು ಆಕರ್ಷಕವಾಗಿರುವ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿದೆ. ಜೊತೆಗೆ ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಸದ್ಯ, ಈ ಕಾರಿನ ಖರೀದಿ ಮೇಲೆ ದೊಡ್ಡ ಮಟ್ಟದ ಹಣಕಾಸಿನ ಪ್ರಯೋಜನಗಳನ್ನು ಘೋಷಣೆ ಮಾಡಲಾಗಿದೆ.

ಬೆಂಗಳೂರಿನ ವಿವಿಧ ಡೀಲರ್‌ಶಿಪ್‌ಗಳು, ಈ ಮೇ ತಿಂಗಳು 'ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್' ಎಸ್‌ಯುವಿಗೆ ಒಟ್ಟು ರೂ.90,000 ರಿಂದ ರೂ.95,000 ವರೆಗೆ ರಿಯಾಯಿತಿಯನ್ನು ನೀಡುತ್ತಿವೆ. ಇದರಲ್ಲಿ ರೂ.25,000 ನಗದು ರಿಯಾಯಿತಿ (Cash Discount) ಮತ್ತು ರೂ.50,000 ವಿನಿಮಯ ಬೋನಸ್ (Exchange Bonus) ಸೇರಿದಂತೆ ಇತರೆ ಹಣಕಾಸಿನ ಪ್ರಯೋಜನಗಳು ಸೇರಿವೆ.

Toyota Urban Cruiser Taisor Suv Get Upto Rs 95 000 Discount In May 2025 Details

ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ ವಿಶೇಷತೆಗಳೇನು:

ಇದೊಂದು ಎಸ್‌ಯುವಿಯಾಗಿದೆ. ರೂ.7.74 ಲಕ್ಷದಿಂದ ರೂ.13.04 ಲಕ್ಷವರೆಗೆ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಇ, ಎಸ್ & ಎಸ್ ಪ್ಲಸ್ ಒಳಗೊಂಡಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. ಈ ಕಾರು ಹೊರಭಾಗದಲ್ಲೂ ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದೆ. ಇದು ನೋಡುಗರನ್ನು ಸೆಳೆಯುತ್ತದೆ. ಸ್ಪ್ಲಿಟ್ ಹೆಡ್‌ಲೈಟ್ ಸೆಟಪ್‌ ಹಾಗೂ ಡುಯಲ್- ಟೋನ್ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ.

ನೂತನ ಟೈಸರ್ ಕಾರು 3995 ಎಂಎಂ ಉದ್ದ, 1765 ಎಂಎಂ ಅಗಲ ಮತ್ತು 1550 ಎಂಎಂ ಎತ್ತರವಿದೆ. ಇದರೊಟ್ಟಿಗೆ 2520 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. ಲ್ಯೂಸೆಂಟ್ ಆರೆಂಜ್, ಕೆಫೆ ವೈಟ್, ಎಂಟೈಸಿಂಗ್ ಸಿಲ್ವರ್, ಗೇಮಿಂಗ್ ಗ್ರೇ ಹಾಗೂ ಸ್ಪೋರ್ಟಿನ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

Toyota Urban Cruiser Taisor Suv Get Upto Rs 95 000 Discount In May 2025 Details

ಈ ಎಸ್‌ಯುವಿಯು 1.2.ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. ಯಾವುದೇ ಸಾಮಾನ್ಯ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 19.8 ರಿಂದ 28.5 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ. ಇದರಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 308 ಲೀಟರ್‌ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಹೊಸ ಟೊಯೊಟಾ ಟೈಸರ್ ಕಾರು ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. ಬಹುಮುಖ್ಯವಾಗಿ 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್‌ಗಳು, ರೇರ್ ಎಸಿ ವೆಂಟ್‌ಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ ಮಾರಾಟ ಹೇಗಿದೆ: ಈ ಕಾರನ್ನು ಪ್ರತಿ ತಿಂಗಳು ಕಂಪನಿಯು ಸ್ಪರ್ಧಾತ್ಮಕ ಸಂಖ್ಯೆಯಲ್ಲಿ ಮಾರಾಟ ಮಾಡುತ್ತಿದೆ. ಏಪ್ರಿಲ್‌ನಲ್ಲಿ 2,421 ಯುನಿಟ್ ಮಾರ್ಚ್‌ನಲ್ಲಿ 3,468 ಯುನಿಟ್, ಫೆಬ್ರವರಿಯಲ್ಲಿ 3,604 ಯುನಿಟ್ ಹಾಗೂ ಜನವರಿ ತಿಂಗಳಲ್ಲಿ 2,470 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, May 15, 2025, 10:55 [IST]
English summary
Toyota urban cruiser taisor suv get upto rs 95000 discount in may 2025 details
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+