ಬ್ರೋ.. 28 ಕಿ.ಮೀ ಮೈಲೇಜ್.. 7 ಲಕ್ಷ.. 'ಮೈಸೂರ್ ಪಾಕ್'ನಂತೆ ಸೇಲ್ ಆಯ್ತು ಟೊಯೊಟಾ ಟೈಸರ್ ಕಾರು!
ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ (Toyota Urban Cruiser Taisor) ಪ್ರಮುಖ ಎಸ್‌ಯುವಿಯಾಗಿದೆ. ಈ ಕಾರನ್ನು ಕಳೆದ ವರ್ಷದ (2024) ಏಪ್ರಿಲ್ ತಿಂಗಳಲ್ಲಿ ಅದ್ದೂರಿಯಾಗಿ ಬಿಡುಗಡೆಗೊಳಿಸಲಾಗಿತ್ತು. ದೇಶದಲ್ಲಿ ಹಲವು ಎಸ್‌ಯುವಿಗಳ ಮಾರಾಟ ದಿನದಿಂದ ದಿನಕ್ಕೆ ಕುಸಿತವಾಗುತ್ತಿದೆ. ಅದರ ಹೊರತಾಗಿಯೂ ಟೊಯೊಟಾ ಟೈಸರ್ ಕಾರಿನ ಮಾರಾಟ ಮಾತ್ರ ನಿಧಾನಗತಿಯಲ್ಲಿ ಬೆಳವಣಿಗೆಯಾಗುತ್ತಿದೆ. ಈ ಮಾರ್ಚ್‌ನಲ್ಲಿಯೂ ನೂತನ ಟೈಸರ್‌ನ್ನು ಗ್ರಾಹಕರು ತಾಮುಂದು - ನಾಮುಂದು ಎಂಬಂತೆ ಖರೀದಿ ಮಾಡಿದ್ದಾರೆ. ಬನ್ನಿ.. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ,
ಹೋದ ತಿಂಗಳು (ಮಾರ್ಚ್-2025) ಟೊಯೊಟಾ ಇಂಡಿಯಾ, ಸರಿ ಸುಮಾರು 3,468 ಯುನಿಟ್ 'ಅರ್ಬನ್ ಕ್ರೂಸರ್ ಟೈಸರ್' ಎಸ್‌ಯುವಿಗಳನ್ನು ಮಾರಾಟಗೊಳಿಸಲು ಯಶಸ್ವಿಯಾಗಿದೆ. ಅದೇ ರೀತಿಯಲ್ಲಿ ಫೆಬ್ರವರಿಯಲ್ಲಿ 3,604 ಯುನಿಟ್ ಹಾಗೂ ಜನವರಿಯಲ್ಲಿ 2,470 ಯುನಿಟ್ ಟೈಸರ್ ಕಾರುಗಳನ್ನು ಮಾರಾಟ ಮಾಡಲಾಗಿದೆ.

2024ರ ಕೊನೆಯ ಆರು ತಿಂಗಳು ಕೂಡ ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ ಕಾರುಗಳು ಹೆಚ್ಚಿನ ಸಂಖ್ಯೆಯಲ್ಲಿಯೂ ಮಾರಾಟಗೊಂಡಿವೆ. ಡಿಸೆಂಬರ್‌ನಲ್ಲಿ 2,628 ಯುನಿಟ್, ನವೆಂಬರ್‌ನಲ್ಲಿ 3,620 ಯುನಿಟ್, ಅಕ್ಟೋಬರ್‌ನಲ್ಲಿ 3,092 ಯುನಿಟ್, ಸೆಪ್ಟೆಂಬರ್‌ನಲ್ಲಿ 2,278 ಯುನಿಟ್, ಆಗಸ್ಟ್‌ನಲ್ಲಿ 3,213 ಯುನಿಟ್ ಹಾಗೂ ಜುಲೈ ತಿಂಗಳಲ್ಲಿ 2,640 ಯುನಿಟ್ ಟೈಸರ್ ಎಸ್‌ಯುವಿಗಳು ಮಾರಾಟವಾಗಿವೆ.
ಈ ಮಾರಾಟದ ಅಂಕಿಸಂಖ್ಯೆಯನ್ನು ಗಮನಿಸಿದಾಗ ಪ್ರತಿ ತಿಂಗಳು 3000 ಯುನಿಟ್‌ನಷ್ಟು ಟೊಯೊಟಾ ಟೈಸರ್ ಎಸ್‌ಯುವಿಗಳನ್ನು ಮಾರಲಾಗಿದೆ. ನೂತನ ಟೈಸರ್ 'ಫ್ರಾಂಕ್ಸ್' ಕಾರಿನ ರೀ-ಬ್ಯಾಡ್ಜ್ ಮಾಡೆಲ್ ಆಗಿದೆ. ಮಾರುತಿ ಸುಜುಕಿ ಮತ್ತು ಟೊಯೊಟಾ ಕಂಪನಿಗಳು ವ್ಯಾಪಾರ ಪಾಲುದಾರಿಕೆಯನ್ನು ಹೊಂದಿರುವುದರಿಂದ ಈ ರೀತಿಯಾಗಿ ಕಾರುಗಳನ್ನು ಮಾರಾಟಗೊಳಿಸಲಾಗುತ್ತದೆ.

ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ ವಿಶೇಷತೆಗಳೇನು: ಈ ಕಾರು ಕನಿಷ್ಠ ರೂ.7.74 ಲಕ್ಷ ಹಾಗೂ ಗರಿಷ್ಠ ರೂ.13.04 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.2.ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1-ಲೀ. ಟರ್ಬೊ ಪೆಟ್ರೋಲ್ ಮತ್ತು 1.2-ಲೀ. ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ & 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಯಾವ ಬೈಕ್‌ಗೂ ಮೀರಿಸುವಂತೆ 19.8 ರಿಂದ 28.5 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ.
ನೂತನ ಟೈಸರ್ ಎಸ್‌ಯುವಿ 5 ಆಸನಗಳನ್ನು ಹೊಂದಿದ್ದು, ಪ್ರಯಾಣಿಕರು ಸುಲಭವಾಗಿ ದೂರದ ಊರುಗಳಿಗೆ ಸಂಚರಿಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 308 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಹೊಂದಿದ್ದು, ಲುಸೆಂಟ್ ಆರೆಂಜ್, ಸ್ಪೋರ್ಟಿನ್ ರೆಡ್, ಕೆಫೆ ವೈಟ್, ಎಂಟೈಸಿಂಗ್ ಸಿಲ್ವರ್ & ಗೇಮಿಂಗ್ ಗ್ರೇ ಸೇರಿದಂತೆ ಹಲವು ಬಣ್ಣಗಳೊಂದಿಗೂ ದೊರೆಯುತ್ತದೆ.
ಈ ಕಾರು ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜಿಂಗ್ ಮತ್ತು ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್‌ಗಳು ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಇದರೊಂದಿಗೆ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಅದಕ್ಕಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








