ಈ Toyota Suv ನಮಗೂ ಒಂದರಲ್ಲಿ ಎನ್ನುತ್ತಿದ್ದಾರೆ ಗ್ರಾಹಕರು.. 7 ಲಕ್ಷ, 28 ಕಿ.ಮೀ ಮೈಲೇಜ್!

ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ (Toyota Urban Cruiser Taisor) ವಿಶ್ವಾಸಾರ್ಹ ಎಸ್‌ಯುವಿಯಾಗಿದೆ. ಇದು ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಕಾರಿನ ರೀ ಬ್ಯಾಡ್ಜ್ ಮಾಡೆಲ್ ಆಗಿದ್ದು, ಹೆಚ್ಚು ಆಕರ್ಷಕವಾಗಿರುವುದರಿಂದ ಖರೀದಿದಾರರು ಸಹ ಇಷ್ಟಪಟ್ಟು ಕೊಂಡುಕೊಳುತ್ತಿದ್ದಾರೆ. ಈ 'ಮೇ'ನಲ್ಲೂ 'ಅರ್ಬನ್ ಕ್ರೂಸರ್ ಟೈಸರ್' ಕಾರು ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಕಳೆದ ತಿಂಗಳು (ಮೇ-2025) ಟೊಯೊಟಾ ಇಂಡಿಯಾ, ಒಟ್ಟು 3,035 ಯುನಿಟ್ 'ಅರ್ಬನ್ ಕ್ರೂಸರ್ ಟೈಸರ್' ಎಸ್‌ಯುವಿಗಳನ್ನು ಮಾರಾಟ ಮಾಡಿದೆ. 2024ರಲ್ಲಿ ಮೇ ತಿಂಗಳಲ್ಲಿ 2,180 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. ಈ ಅಂಕಿ - ಸಂಖ್ಯೆಗೆ ಹೋಲಿಕೆ ಮಾಡಿದರೆ, ಮಾರಾಟ ಪ್ರಮಾಣ ವರ್ಷದಿಂದ ವರ್ಷಕ್ಕೆ ಶೇಕಡ 39% ಪ್ರಗತಿಯಾಗಿದೆ.

Toyota Urban Cruiser Taisor Suv May 2025 Sales Report 39 Percent Growth Details

ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ ಎಸ್‌ಯುವಿ ಮಾರಾಟ ಸಂಖ್ಯೆ ಅಧಿಕಗೊಳ್ಳಲು ನಾನಾ ಕಾರಣಗಳಿವೆ. ಬಹುಮುಖ್ಯವಾಗಿ ಈ ಕಾರು ಅತ್ಯಾಧುನಿಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಇದರೊಂದಿಗೆ ಬಜೆಟ್ ಬೆಲೆಯಲ್ಲಿ ಖರೀದಿಗೆ ಸಿಗುತ್ತಿರುವ ಹಿನ್ನೆಲೆ, ಭಾರೀ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ ಎಂದು ಆಟೋಮೊಬೈಲ್ ವಾಹನೋದ್ಯಮ ತಜ್ಞರು ವಿಶ್ಲೇಷಣೆ ಮಾಡುತ್ತಿದ್ದಾರೆ.

ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ ಕಾರಿನ ವಿಶೇಷತೆಗಳೇನು..

ಇದೊಂದು ಎಸ್‌ಯುವಿಯಾಗಿದ್ದು, ರೂ.7.74 ಲಕ್ಷದಿಂದ ರೂ.13 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ಬೆಲೆಯನ್ನು ಒಳಗೊಂಡಿದೆ. ಇ, ಎಸ್ ಮತ್ತು ಎಸ್ ಪ್ಲಸ್ ಒಳಗೊಂಡಂತೆ ಹಲವು ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. ಹೊರಭಾಗದಲ್ಲಿ ಉತ್ತಮವಾದ ವಿನ್ಯಾಸವನ್ನು ಹೊಂದಿದೆ. ಎಂಟೈಸಿಂಗ್ ಸಿಲ್ವರ್, ಸ್ಪೋರ್ಟಿನ್ ರೆಡ್ ಮತ್ತು ಗೇಮಿಂಗ್ ಗ್ರೇ ಎಂಬ ಬಣ್ಣಗಳ ಆಯ್ಕೆಯನ್ನು ಪಡೆದಿದೆ.

Toyota Urban Cruiser Taisor Suv May 2025 Sales Report 39 Percent Growth Details

ಈ ಕಾರು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 1.2-ಲೀಟರ್ ಪೆಟ್ರೋಲ್, 1.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.2-ಲೀಟರ್ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಮತ್ತು 6-ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಸಾಮಾನ್ಯ ಬೈಕ್‌ನಂತೆ 19 ರಿಂದ 28 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದೆ. ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 308 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. 9 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಹೆಡ್ಸ್-ಅಪ್ ಡಿಸ್‌ಪ್ಲೇ, ಸ್ಟೀರಿಂಗ್-ಮೌಂಟೆಡ್ ಕಂಟ್ರೋಲ್‌ಗಳು ಹಾಗೂ ಪ್ಯಾಡಲ್ ಶಿಫ್ಟರ್‌ಗಳನ್ನು ಒಳಗೊಂಡಿದೆ.

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 - ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಹಿಲ್ - ಹೋಲ್ಡ್ ಅಸಿಸ್ಟ್, ಕ್ರೂಸ್ ಕಂಟ್ರೋಲ್ ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಡ್ರೈವ್‌ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Tuesday, June 10, 2025, 8:30 [IST]
English summary
Toyota urban cruiser taisor suv may 2025 sales report 39 percent growth details
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+