ಬೈಕ್‌ನಂತೆ 28 Km ಮೈಲೇಜ್.. 7 ಲಕ್ಷ, ಈ ಟೊಯೊಟಾ SUVಗೆ ಪುಲ್ ಡಿಮ್ಯಾಂಡ್.. ಬಿಸಿ - ಬಿಸಿ ಜಿಲೇಬಿಯಂತೆ ಸೇಲ್ಸ್!
ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ (Toyota Urban Cruiser Taisor) ಪ್ರಖ್ಯಾತ ಎಸ್‌ಯುವಿಯಾಗಿದೆ. ಇದು ನೋಡಲು ತುಂಬಾ ಚೆನ್ನಾಗಿದ್ದು, ವಿವಿಧ ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಈ ಅಕ್ಟೋಬರ್ ತಿಂಗಳಲ್ಲೂ 'ಟೈಸರ್' ಕಾರು ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 4,561 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2024ರ ಇದೇ ಅವಧಿಯಲ್ಲಿ 3,092 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ ಸಂಖ್ಯೆಯನ್ನು ವಿಶ್ಲೇಷಿಸಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಶೇಕಡ 48% ಬೆಳವಣಿಗೆಯಾಗಿದೆ.
'ಟೊಯೊಟಾ ಟೈಸರ್' ವಿಶೇಷತೆಗಳೇನು:
ಈ ಎಸ್‌ಯುವಿಯು ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ರೂ.7.21 ಲಕ್ಷದಿಂದ ರೂ.12.06 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಇ (E), ಜಿ (G), ಎಸ್ (S) ಮತ್ತು ಎಸ್ ಪ್ಲಸ್ (S Plus) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಾಗಿದೆ.

ಇದು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ 16 ಇಂಚಿರುವ ಅಲಾಯ್ ವೀಲ್‌ಗಳನ್ನು ತನ್ನದಾಗಿಸಿಕೊಂಡಿದೆ. ಕೆಫೆ ವೈಟ್, ಗೇಮಿಂಗ್ ಗ್ರೇ, ಲ್ಯೂಸೆಂಟ್ ಆರೆಂಜ್, ಸ್ಪೋರ್ಟಿನ್ ರೆಡ್ ಮತ್ತು ಬ್ಲೂಯಿಶ್ ಬ್ಲ್ಯಾಕ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ. 190 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,520 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.
ನೂತನ 'ಟೈಸರ್' 3 ಪವರ್‌ಟ್ರೇನ್‌ನ್ನು ಒಳಗೊಂಡಿದೆ. ಇದರ 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್, 100 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 148 ಎನ್ಎಂ (ನ್ಯೂಟನ್ ಮೀಟರ್) ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್ ಹಾಗೂ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 20.1 ರಿಂದ 21.5 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ.

ಮತ್ತೊಂದು 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 90 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 113 ಎನ್ಎಂ (ನ್ಯೂಟನ್ ಮೀಟರ್) ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 21.79 ರಿಂದ 22.89 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ.
ಇನ್ನೊಂದು 1.2-ಲೀಟರ್ ಪೆಟ್ರೋಲ್ + ಸಿಎನ್‌ಜಿ ಎಂಜಿನ್, 77.5 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 98.5 ಎನ್ಎಂ (ನ್ಯೂಟನ್ ಮೀಟರ್) ಉತ್ಪಾದಿಸುತ್ತದೆ. ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 28.51 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ.

ಈ ಕಾರು 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ದೂರದ ಊರುಗಳಿಗೆ ಹೋಗುವ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 308 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ. 175 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 10.98 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ಹೊಸ ಟೈಸರ್' ಕ್ಯಾಬಿನ್ ವಿನ್ಯಾಸವು ಸಾಕಷ್ಟು ಅತ್ಯಾಕರ್ಷಕವಾಗಿದೆ. 9 ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್‌ಗಳು, ವೈರ್‌ಲೆಸ್ ಫೋನ್ ಚಾರ್ಜಿಂಗ್ ಮತ್ತು ರೇರ್ ಎಸಿ ವೆಂಟ್‌ಗಳು ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್ ಹೋಲ್ಡ್ ಅಸಿಸ್ಟ್ ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.


Click it and Unblock the Notifications








