Toyota: 28.5 Km ಮೈಲೇಜ್.. 5-ಸೀಟರ್, ಜನಪ್ರಿಯ ಟೊಯೊಟಾ ಟೈಸರ್ ಕಾರಿನ ಬೆಲೆ ಪರಿಷ್ಕರಣೆ.. ಎಷ್ಟಾಗಿದೆ?

ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ (Toyota Urban Cruiser Taisor) ಜನಪ್ರಿಯ ಎಸ್‌ಯುವಿಯಾಗಿದೆ. ಈ ಕಾರು ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ರೀ-ಬ್ಯಾಡ್ಜ್ ಮಾಡೆಲ್ ಆಗಿದ್ದು, ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ ನೂತನ ಟೈಸರ್ ಎಸ್‌ಯುವಿ ಬೆಲೆಯನ್ನು ಕಂಪನಿಯು ಪರಿಷ್ಕರಣೆ ಮಾಡಿದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಹೊಸ ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ ಎಸ್‌ಯುವಿ ದರ ರೂ.5,500 ಅಧಿಕಗೊಂಡಿದೆ. ಇದು ಎಸ್ ಎಎಂಟಿ ಹಾಗೂ ಎಸ್ ಪ್ಲಸ್ ಎಎಂಟಿ ರೂಪಾಂತರಗಳಿಗೆ (ವೇರಿಯೆಂಟ್) ಮಾತ್ರ ಅನ್ವಯಿಸುತ್ತದೆ. ಉಳಿದ ಎಲ್ಲ ರೂಪಾಂತರಗಳ ಬೆಲೆ ರೂ.500ರಷ್ಟು ಹೆಚ್ಚಳಗೊಂಡಿದೆ. ಇದರೊಂದಿಗೆ ನೂತನ ಕಾರು ರೂ.7.74 ಲಕ್ಷದಿಂದ ರೂ.13.04 ಲಕ್ಷ ಎಕ್ಸ್-ಶೋರೂಂ ದರವನ್ನು ಒಳಗೊಂಡಿದೆ.

Toyota Urban Cruiser Taisor Suv Price Hike Details

ಈ ಕಾರು ಇ, ಎಸ್ & ಎಸ್ ಪ್ಲಸ್ ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಸಹ ಸಿಗುತ್ತದೆ. ಹೊರಭಾಗವು ಹೆಚ್ಚು ಆಕರ್ಷಕವಾಗಿದೆ. ಲ್ಯೂಸೆಂಟ್ ಆರೆಂಜ್, ಕೆಫೆ ವೈಟ್, ಎಂಟೈಸಿಂಗ್ ಸಿಲ್ವರ್, ಗೇಮಿಂಗ್ ಗ್ರೇ & ಸ್ಪೋರ್ಟಿನ್ ರೆಡ್ ಎಂಬ ಬಣ್ಣಗಳನ್ನು ಹೊಂದಿದೆ.

ನೂತನ ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ ಎಸ್‌ಯುವಿ 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು 308 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

Toyota Urban Cruiser Taisor Suv Price Hike Details

ಹೊಸ ಕಾರು 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1-ಲೀ. ಟರ್ಬೊ ಪೆಟ್ರೋಲ್ ಮತ್ತು 1.2-ಲೀ. ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. ಜೊತೆಗೆ 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್ & 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 19.8 ರಿಂದ 28.5 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ.

ಈ ಅರ್ಬನ್ ಕ್ರೂಸರ್ ಟೈಸರ್ ಎಸ್‌ಯುವಿ ಹಲವು ಅತ್ಯುತ್ತಮ ವೈಶಿಷ್ಟ್ಯಗಳನ್ನು ಪಡೆದಿದೆ. ಬಹುಮುಖ್ಯವಾಗಿ 9 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜಿಂಗ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್‌ಗಳು, ರೇರ್ ಎಸಿ ವೆಂಟ್‌ಗಳು, ಪ್ಯಾಡಲ್ ಶಿಫ್ಟರ್‌ಗಳು ಹಾಗೂ ಕ್ರೂಸ್ ಕಂಟ್ರೋಲ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ನೂತನ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್ ಹೋಲ್ಡ್ ಅಸಿಸ್ಟ್ ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ. ಈ ಎಸ್‌ಯುವಿಗೆ ಮಾರುತಿ ಫ್ರಾಂಕ್ಸ್, ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ, ಟಾಟಾ ನೆಕ್ಸಾನ್‌, ಹ್ಯುಂಡೈ ವೆನ್ಯೂ ಮತ್ತು ಕಿಯಾ ಸೋನೆಟ್ ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Friday, March 7, 2025, 8:36 [IST]
English summary
Toyota urban cruiser taisor suv price hike details
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+