TATA: ಮಧ್ಯಮ ವರ್ಗದವರಿಗೆ ಸಿಹಿಸುದ್ದಿ.. ಟಾಟಾದಿಂದ ಬರಲಿವೆ 3 ಹೊಸ ಕಾರುಗಳು, 5 ಲಕ್ಷ ಆರಂಭಿಕ ಬೆಲೆ?
ಟಾಟಾ ಮೋಟಾರ್ಸ್ (Tata Motors), ಸುರಕ್ಷಿತ ಕಾರು ತಯಾರಿಕೆಯಿಂದಲೇ ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಬಜೆಟ್ ಬೆಲೆಯಲ್ಲಿ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿರುವ ವಿವಿಧ ಕಾರುಗಳನ್ನು ಮಾರಾಟಗೊಳಿಸುತ್ತಿದೆ. 2025 ಟಾಟಾಗೆ ಮಹತ್ವದ ವರ್ಷವಾಗಿದ್ದು, ವಿವಿಧ ಹೊಚ್ಚ ಹೊಸ ಕಾರುಗಳನ್ನು ಬಿಡುಗಡೆಗೊಳಿಸಲು ಸಿದ್ಧತೆಯನ್ನು ನಡೆಸುತ್ತಿದೆ. ಮುಂಬರುವ ನೂತನ ಕಾರುಗಳು ರೂ.5 ಲಕ್ಷದಿಂದ ರೂ.10 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿರಲಿದ್ದು, ಒಮ್ಮೆ ಮಾರಾಟಕ್ಕೆ ಬಂದ ಮೇಲೆ ಮಧ್ಯಮ ವರ್ಗದ ಜನರ ಆಯ್ಕೆಯ ವಾಹನವಾಗಲಿವೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.
ಮೊದಲಿಗೆ ಈ ವರ್ಷ ನವೀಕರಣಗೊಂದಿಗೆ ಮಾರಾಟಕ್ಕೆ ಬರಲಿರುವ ಟಾಟಾ ಪಂಚ್ ಫೇಸ್‌ಲಿಫ್ಟ್ (Tata Punch Facelift) ಬಗ್ಗೆ ಮಾತನಾಡೋಣ. ಇದೊಂದು ಮೈಕ್ರೋ ಎಸ್‌ಯುವಿಯಾಗಿದೆ. ಮುಂಬರಲಿರುವ ಹೊಸ ಕಾರು, ಪಂಚ್ ಎಲೆಕ್ಟ್ರಿಕ್ ಕಾರಿನಂತೆ ಆಕರ್ಷಕ ವಿನ್ಯಾಸವನ್ನು ಒಳಗೊಂಡಿರಲಿದೆ. ನವೀನವಾಗಿರುವ ಗ್ರಿಲ್, ಎಲ್‌ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು ಮತ್ತು ಎಲ್‌ಇಡಿ ಡಿಆರ್‌ಎಲ್‌ಗಳನ್ನು ಪಡೆದುಕೊಂಡಿರುವ ನೀರಿಕ್ಷೆಯಿದೆ.

ಟಾಟಾ ಪಂಚ್ ಫೇಸ್‌ಲಿಫ್ಟ್ ಎಸ್‌ಯುವಿ, 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಕಾರ್‌ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿರುವ ನಿರೀಕ್ಷೆಯಿದೆ. ಇದರಲ್ಲಿ 5 ಮಂದಿ ಸುಲಭವಾಗಿ ಓಡಾಟ ನಡೆಸಹುದು. ಈ ಕಾರಿನ ಎಂಜಿನ್ ಈಗಿರುವ ಮಾಡೆಲ್‌ನಂತೆಯೇ ಇರಲಿದ್ದು, ರೂ.6 ಲಕ್ಷ ಆರಂಭಿಕ ಬೆಲೆಯಲ್ಲಿ ಮಾರಾಟಕ್ಕೆ ಬರಬಹುದು ಎಂದು ಅಂದಾಜಿಸಲಾಗಿದೆ.
ನೂತನ ಟಾಟಾ ಟಿಯಾಗೊ ಫೇಸ್‌ಲಿಫ್ಟ್ (Tata Tiago Facelift) ಹ್ಯಾಚ್‌ಬ್ಯಾಕ್ ಸಹ ಇದೇ ವರ್ಷ ಬಿಡುಗಡೆಯಾಗುವ ನೀರಿಕ್ಷೆಯಿದೆ. ಹೊರಭಾಗದಲ್ಲಿ ಹೆಚ್ಚು ಅತ್ಯಾಧುನಿಕ ವಿನ್ಯಾಸಗಳನ್ನು ಪಡೆದುಕೊಂಡಿರಲಿದೆ. ಹೊಸದಾದ ಹೆಡ್‌ಲ್ಯಾಂಪ್‌ಗಳು, ಡಿಆರ್‌ಎಲ್‌ಗಳು, ರೇಡಿಯೇಟರ್ ಗ್ರಿಲ್, ಬಂಪರ್‌ಗಳು, ಅಲಾಯ್ ವೀಲ್‌ಗಳು ಹಾಗೂ ಟೈಲ್ ಲ್ಯಾಂಪ್‌ಗಳನ್ನು ಒಳಗೊಂಡಿರುವ ಸಾಧ್ಯತೆಯಿದೆ.

ಈ ಟಿಯಾಗೊ ಹ್ಯಾಚ್‌ಬ್ಯಾಕ್ 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದುಕೊಂಡಿರಲಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಯುಎಸ್‌ಬಿ ಟೈಪ್ ಸಿ ಪೋರ್ಟ್‌ಗಳು ಮತ್ತು ವೈರ್‌ಲೆಸ್ ಸ್ಮಾರ್ಟ್‌ಫೋನ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿರುವ ನಿರೀಕ್ಷೆಯಿದೆ. ಈ ಕಾರಿನ ಪವರ್‌ಟ್ರೇನ್‌ನಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ ಎಂದು ಹೇಳಲಾಗಿದೆ. ಇದು ರೂ.5 ಲಕ್ಷ (ಎಕ್ಸ್ ಶೋರೂಂ) ಬೆಲೆಯಲ್ಲಿ ಖರೀದಿಗೆ ದೊರೆಯಬಹುದು ಎಂದು ತಿಳಿದುಬಂದಿದೆ.
ಹೊಸ ಟಾಟಾ ಟಿಗೂರ್ ಫೇಸ್‌ಲಿಫ್ಟ್ (Tata Tigor Facelift) ಸೆಡಾನ್‌ನ್ನು ಈ ವರ್ಷವೇ ಮಾರಾಟಕ್ಕೆ ತರಲಿದೆ ಎನ್ನಲಾಗಿದೆ. ಈ ಕಾರು ಕೂಡ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಒಳಗೊಂಡಿರಲಿದೆ. ಇದರೊಟ್ಟಿಗೆ 5 ಆಸನ ಆಯ್ಕೆ ವ್ಯವಸ್ಥೆಯಲ್ಲಿ ಗ್ರಾಹಕರಿಗೆ ಲಭ್ಯವಾಗಲಿದ್ದು, ರೂ.6 ಲಕ್ಷ ಆರಂಭಿಕ ದರವನ್ನು ಪಡೆದುಕೊಂಡಿರಲಿದೆ ಎಂದು ಹೇಳಲಾಗಿದೆ.

ಟಿಗೂರ್ ಫೇಸ್‌ಲಿಫ್ಟ್ ಸೆಡಾನ್ ಎಂಜಿನ್‍ನಲ್ಲಿಯೂ ಯಾವುದೇ ಮಾರ್ಪಾಡುಗಳನ್ನು ಮಾಡಲಾಗುವುದಿಲ್ಲ ಎನ್ನಲಾಗಿದೆ. ಇದು ಕೂಡ ಸದ್ಯವಿರುವ ಕಾರಿನಂತೆ 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿರಲಿದ್ದು, 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿರಲಿದೆ. ಜೊತೆಗೆ 19.43 ರಿಂದ 28.06 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ ಎನ್ನಲಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications