TATA ನಂ.1 ಆಗುತ್ತಾ?.. ಬಿಡುಗಡೆಗೆ ಸಿದ್ದಗೊಳ್ಳುತ್ತಿವೆ 3 ಹೊಸ 'Suv'ಗಳು, ಬೆಲೆ ಎಷ್ಟಿರಲಿದೆ, ವಿಶೇಷತೆಗಳೇನು?

ಟಾಟಾ ಮೋಟಾರ್ಸ್ (Tata Motors) ಪ್ರಖ್ಯಾತ ಸ್ವದೇಶಿ ವಾಹನ ತಯಾರಕ ಕಂಪನಿಯಾಗಿದ್ದು, ದೇಶೀಯ ಮಾರುಕಟ್ಟೆಯಲ್ಲಿ ವಿವಿಧ ಕಾರುಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಇವುಗಳು ಸುರಕ್ಷತೆಗಾಗಿ ಹೆಸರುವಾಸಿಯಾಗಿದ್ದು, ಗ್ರಾಹಕರು ಕೂಡ ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ಸದ್ಯ ಕಂಪನಿಯು 3 ಹೊಚ್ಚ ಹೊಸ ಎಸ್‌ಯುವಿಗಳನ್ನು ಅದ್ದೂರಿಯಾಗಿ ಮಾರಾಟಕ್ಕೆ ತರಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇದರೊಂದಿಗೆ ಪ್ರಯಾಣಿಕ ವಾಹನ (Passenger Vehicle) ವಿಭಾಗದಲ್ಲಿ ನಂಬರ್ 1 ಸ್ಥಾನಕ್ಕೂ ಬರಲು ಹಣಿಯಾಗುತ್ತಿದೆ. ಬನ್ನಿ, ನೂತನ ಕಾರುಗಳ ಬೆಲೆ ಎಷ್ಟಿರಲಿದೆ.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಟಾಟಾ ಹ್ಯಾರಿಯರ್ ಇವಿ (Tata Harrier EV): ಇದೊಂದು ಎಲೆಕ್ಟ್ರಿಕ್ ಎಸ್‌ಯುವಿಯಾಗಿದ್ದು, ಜೂನ್ 3 ರಂದು ಬಿಡುಗಡೆಯಾಗಲಿದೆ. ಈ ಕಾರು ರೂ.30 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. ಇದರಲ್ಲಿ 5 ಆಸನಗಳಿರಲಿದ್ದು, ಹಲವು ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಖರೀದಿಗೆ ದೊರೆಯುವ ನಿರೀಕ್ಷೆಯಿದೆ.

Upcoming 3 Tata Suvs Harrier EV Sierra And Avinya X Details

ಈ ಎಲೆಕ್ಟ್ರಿಕ್ ಕಾರು ದೊಡ್ಡ ಗಾತ್ರದ 75 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದುಕೊಂಡಿರಲಿದೆ. ಸಂಪೂರ್ಣ ಚಾರ್ಜ್‌ನಲ್ಲಿ 500 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡಬಹುದು ಎಂದು ಹೇಳಲಾಗಿದೆ. ಇದರೊಂದಿಗೆ 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡುಯಲ್ ಜೋನ್ ಆಟೋಮೆಟಿಕ್ ಎಸಿ ಹಾಗೂ ಸನ್‌ರೂಫ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿರಬಹುದು ಎನ್ನಲಾಗಿದೆ. ಸುರಕ್ಷತೆಗಾಗಿ 7-ಏರ್‌ಬ್ಯಾಗ್‌ಗಳನ್ನು ಹೊಂದಿರುವ ಸಾಧ್ಯತೆಯೂ ದಟ್ಟವಾಗಿದೆ.

ಟಾಟಾ ಸಿಯೆರಾ (Tata Sierra): ಇದು ಎಸ್‌ಯುವಿಯಾಗಿದ್ದು, ಮುಂಬರುವ ಕೆಲವೇ ತಿಂಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಈ ಕಾರು ಇಂಧನ (ಪೆಟ್ರೋಲ್/ಡೀಸೆಲ್) ಹಾಗೂ ಎಲೆಕ್ಟ್ರಿಕ್ ರೂಪದಲ್ಲಿ ಮಾರಾಟಕ್ಕೆ ಬರಲಿದೆ. ಇದರ ಇಂಧನ ಚಾಲಿತ ಮಾಡೆಲ್, ರೂ.10 ಲಕ್ಷ ಹಾಗೂ ಎಲೆಕ್ಟ್ರಿಕ್ ಚಾಲಿತ ಮಾಡೆಲ್, ರೂ.25 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿರಬಹುದು ಎಂದು ಹೇಳಲಾಗಿದೆ.

Upcoming 3 Tata Suvs Harrier EV Sierra And Avinya X Details

ನೂತನ ಸಿಯೆರಾ ಎಲೆಕ್ಟ್ರಿಕ್ ಎಸ್‌ಯುವಿಯ ಇಂಧನ ಚಾಲಿತ ಮಾಡೆಲ್, 1.5-ಲೀ. ಟರ್ಬೊ ಪೆಟ್ರೋಲ್ ಮತ್ತು 2-ಲೀಟರ್ ಡೀಸೆಲ್ ಎಂಜಿನ್‌ನ್ನು ಪಡೆದುಕೊಂಡಿರಬಹುದು. ಹಾಗೆಯೇ 20 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುವ ಸಾಧ್ಯತೆಯಿದೆ. ಎಲೆಕ್ಟ್ರಿಕ್ ಚಾಲಿತ ಮಾಡೆಲ್, 75 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಒಳಗೊಂಡಿರಲಿದ್ದು, ಭರ್ತಿ ಚಾರ್ಜ್‌ನಲ್ಲಿ 500 ಕಿಲೋಮೀಟರ್ ಓಡಬಹುದು ಎನ್ನಲಾಗಿದೆ.

ಟಾಟಾ ಅವಿನ್ಯಾ ಎಕ್ಸ್ (Tata Avinya X): ಇದೊಂದು ಪ್ರೀಮಿಯಂ ಎಲೆಕ್ಟ್ರಿಕ್ ಎಸ್‌ಯುವಿಯಾಗಿರಲಿದ್ದು, 2026ರಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಈ ಕಾರಿನಲ್ಲಿ 5 ಆಸನಗಳಿರಲಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ನಡೆಸಬಹುದು. ಇದು ಬರೋಬ್ಬರಿ ರೂ.40 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

Upcoming 3 Tata Suvs Harrier EV Sierra And Avinya X Details

ಈ ಎಲೆಕ್ಟ್ರಿಕ್ ಕಾರು, ಬೃಹತ್ ಗಾತ್ರದ ಬ್ಯಾಟರಿ ಪ್ಯಾಕ್ ಹೊಂದಿರಲಿದ್ದು, ಪೂರ್ತಿ ಚಾರ್ಜ್‌ನಲ್ಲಿ 500 ಕಿಲೋಮೀಟರ್ ಕ್ರಮಿಸುವ ನಿರೀಕ್ಷೆಯಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋಮೆಟಿಕ್ ಎಸಿ ಮತ್ತು ವೈರ್‌ಲೆಸ್ ಫೋನ್ ಚಾರ್ಜಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿರಲಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳನ್ನು ಹೊಂದಿರುವ ಸಾಧ್ಯತೆಯಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, May 30, 2025, 16:29 [IST]
English summary
Upcoming 3 tata suvs harrier ev sierra and avinya x details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+