Maruti Suzuki: ಸಿಹಿಸುದ್ದಿ.. 5 ಹೊಸ ಕಾರುಗಳು ಬರಲಿವೆ, ಎಲ್ಲರೂ ಬಹುಪರಾಕ್ - ಬಹುಪರಾಕ್ ಅಂತ ಹೇಳಲೇಬೇಕು!
ಮಾರುತಿ ಸುಜುಕಿ ಇಂಡಿಯಾ (Maruti Suzuki India), ಮುಂದಿನ 2-3 ವರ್ಷಗಳಲ್ಲಿ ವಿವಿಧ ಹೊಚ್ಚ ಹೊಸ ಕಾರುಗಳನ್ನು ಬಿಡುಗಡೆಗೊಳಿಸಲು ತಯಾರಿ ಮಾಡಿಕೊಳ್ಳುತ್ತಿದೆ. ವಿಶೇಷವಾಗಿ ಎದುರುಳಿ ಕಂಪನಿಗಳಿಗೆ ತೀವ್ರ ಸ್ಪರ್ಧೆಯೊಡ್ಡಲು ಹೆಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಹಾಗೂ ಎಲೆಕ್ಟ್ರಿಕ್ ಚಾಲಿತ ಕಾರುಗಳನ್ನು ಮಾರಾಟಕ್ಕೆ ತರಲು ಹೆಚ್ಚಿನ ಗಮನವನ್ನು ಹರಿಸುತ್ತಿದೆ. ಅದರಲ್ಲೂ ಕಂಪನಿಯು ಪರಿಚಯಿಸಲು ಸಿದ್ದವಾಗಿರುವ ಈ 5 ನೂತನ ಕಾರುಗಳ ಮೇಲೆ ಗ್ರಾಹಕರು ಕೂಡ ದೊಡ್ಡಮಟ್ಟದಲ್ಲಿ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಬನ್ನಿ.. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.
ಮಾರುತಿ ಸುಜುಕಿ ಇ ವಿಟಾರಾ (Maruti Suzuki e Vitara): ಇದೊಂದು ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ಈ ಕಾರು ಅತಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಕಳೆದ ಜನವರಿಯಲ್ಲಿ ಅದ್ದೂರಿಯಾಗಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ನೂತನ 'ಇ ವಿಟಾರಾ' ಎಸ್‌ಯುವಿಯನ್ನು ಅದ್ದೂರಿಯಾಗಿ ಅನಾವರಣಗೊಳಿಸಲಾಗಿತ್ತು.

ಈ ಮಾರುತಿ ಸುಜುಕಿ ಇ ವಿಟಾರಾ ಎಲೆಕ್ಟ್ರಿಕ್ ಎಸ್‌ಯುವಿ, ಹೊರಭಾಗದಲ್ಲಿ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಇದು 49 ಕೆಡಬ್ಲ್ಯೂಹೆಚ್ ಮತ್ತು 61 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದೆ. ಪೂರ್ತಿ ಚಾರ್ಜ್‌ನಲ್ಲಿ 500 ಕಿಲೋಮಿಟರ್‌ಗೂ ಅಧಿಕ ರೇಂಜ್ (ಮೈಲೇಜ್) ನೀಡಬಹುದು ಎಂದು ಅಂದಾಜಿಸಲಾಗಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಪನೋರಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
5-ಆಸನಗಳ ಹೊಸ ಮಾರುತಿ ಎಸ್‌ಯುವಿ (5-seater New Maruti SUV): ಇನ್ನೂ ಹೆಸರಿಡದ 5 ಆಸನಗಳನ್ನು ಒಳಗೊಂಡಿರುವ ನೂತನ ಎಸ್‌ಯುವಿಯೊಂದನ್ನು ಬಿಡುಗಡೆಗೊಳಿಸಲು ಸಹ ಮಾರುತಿ ಸುಜುಕಿಯು ಹಣಿಯಾಗುತ್ತಿದೆ. ಈ ಕಾರನ್ನು ಅರೆನಾ ಡೀಲರ್‌ಶಿಪ್ ಮೂಲಕ ಮಾರಾಟಗೊಳಿಬಹುದು ಎನ್ನಲಾಗಿದೆ. ಬಹುತೇಕ ಗ್ರ್ಯಾಂಡ್ ವಿಟಾರಾಕ್ಕೆ ಹೋಲಿಕೆಯಾಗುವ ವಿನ್ಯಾಸವನ್ನು ಹೊಂದಿರಿರಲಿದೆ. ಹಾಗೆಯೇ ಹೊಸ ಎಸ್‌ಯುವಿಯನ್ನು ಮುಂದಿನ ಮೂರು ತಿಂಗಳೊಳಗೆ ಪರಿಚಯಿಸುವ ನಿರೀಕ್ಷೆಯಿದೆ.

ಮಾರುತಿ ಸುಜುಕಿ ಫ್ರಾಂಕ್ಸ್ ಫೇಸ್‌ಲಿಫ್ಟ್ (Maruti Suzuki Fronx Hybrid): ಈ ಕಾರು ಇದೇ ವರ್ಷದ ದ್ವಿತೀಯಾರ್ಧದಲ್ಲಿ ಮಾರಾಟಕ್ಕೆ ಬರುವ ಸಾಧ್ಯತೆಯಿದೆ. ಬಹುಮುಖ್ಯವಾಗಿ ಹೆಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿರಲಿದ್ದು, ಬರೋಬ್ಬರಿ 35 ಕೆಎಂಪಿಎಲ್‌ಗೂ ಅಧಿಕ ಮೈಲೇಜ್ ನೀಡಬಹುದು ಎಂದು ಅಂದಾಜಿಸಲಾಗಿದೆ. ಅದರ ಹೊರತಾಗಿ ಈ ಕಾರಿನ ವಿನ್ಯಾಸದಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ ಎಂದು ಹೇಳಲಾಗಿದೆ.
ಸದ್ಯ ದೇಶೀಯವಾಗಿ ಲಭ್ಯವಿರುವ ಹೊಚ್ಚ ಹೊಸ 'ಮಾರುತಿ ಫ್ರಾಂಕ್ಸ್' ಎಸ್‌ಯುವಿ, ರೂ.7.52 ರಿಂದ ರೂ.13.03 ಲಕ್ಷ ಎಕ್ಸ್-ಶೋರೂಂ ಬೆಲೆಯನ್ನು ಒಳಗೊಂಡಿದೆ. ಪೆಟ್ರೋಲ್ & ಸಿಎನ್‌ಜಿ ಪವರ್‌ಟ್ರೇನ್‌ನ್ನು ಹೊಂದಿದೆ. 20.1 ರಿಂದ 28.51 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಮಾರುತಿ ಸುಜುಕಿ ಇಡಬ್ಲ್ಯೂಎಕ್ಸ್ (Maruti Suzuki eWX): ಇದೊಂದು ಪುಟ್ಟ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್ ಆಗಿದೆ. ಈ ಕಾರನ್ನು ಕಂಪನಿಯು ಟಾಟಾ ಟಿಯಾಗೊ ಇವಿ ಹಾಗೂ ಎಂಜಿ ಕಾಮೆಟ್ ಇವಿಗಳಿಗೆ ಪ್ರತಿಸ್ಪರ್ಧಿಯಾಗಿ ಹೊರತರಲಿದ್ದು, 2027ರಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ರೂ.ಲಕ್ಷಕ್ಕಿಂತ ಕಡಿಮೆ ಬೆಲೆಗೆ ದೊರೆಯಲಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 200 ಕಿಲೋಮಿಟರ್‌ಗೂ ಹೆಚ್ಚಿನ ರೇಂಜ್ (ಮೈಲೇಜ್) ನೀಡಬಹುದು ಎಂದು ಹೇಳಲಾಗಿದೆ.
ಹೊಸ ಮಾರುತಿ ಸುಜುಕಿ ಕಾಂಪ್ಯಾಕ್ಟ್ ಎಂಪಿವಿ (New Maruti Suzuki Compact MPV): ಕಡಿಮೆ ಬೆಲೆಗೆ ಹೊಚ್ಚ ಹೊಸ ಫ್ಯಾಮಿಲಿ ಕಾರನ್ನು ಬಿಡುಗಡೆಗೊಳಿಸಲು ಕೂಡ ಕಂಪನಿಯು ಸಿದ್ಧತೆಯನ್ನು ನಡೆಸುತ್ತಿದೆ. ಎಲ್ಲವು ಅಂದುಕೊಂಡಂತೆ ನಡೆದರೆ, 2027ರಲ್ಲಿ ಈ ಎಂಪಿವಿಯು ಮಾರಾಟಕ್ಕೆ ಬರಲಿದ್ದು, ರೂ.7 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಖರೀದಿಗೆ ದೊರೆಬಹುದು ಎಂದು ಅಂದಾಜಿಸಲಾಗಿದೆ. ಈಗಾಗಲೇ, 'ವೈಡಿಬಿ' ಎಂಬ ಕೋಡ್ ನೇಮ್ ಹೊಂದಿರುವ ಕಾರೊಂದು ಪರೀಕ್ಷಾರ್ಥ ಸಂಚಾರ ನಡೆಸುವಾಗಲು ಕಾಣಿಸಿಕೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications