ಇನ್ನು ಗ್ರಾಹಕರು ಸಾಲು ಕಟ್ಟುವರು.. ಶೀಘ್ರ ಮಾರುತಿ, ಟಾಟಾ & ಮಹೀಂದ್ರಾದ ಹೊಸ ಕಾರುಗಳು ಬಿಡುಗಡೆ, ಬೆಲೆ ಎಷ್ಟಿರಲಿದೆ?
ವಿಶ್ವದಲ್ಲೇ ಭಾರತವು ಅತಿದೊಡ್ಡ ವಾಹನ ಮಾರುಕಟ್ಟೆಯನ್ನು ಹೊಂದಿದೆ. ಪ್ರತಿ ತಿಂಗಳು ಒಂದಿಲ್ಲೊಂದು ಕಂಪನಿಯ ಹೊಚ್ಚ ಹೊಸ ಕಾರುಗಳು ಬಿಡುಗಡೆಯಾಗುತ್ತಲೇ ಇರುತ್ತವೆ. ಜನಪ್ರಿಯ ವಾಹನ ತಯಾರಕರಾದ ಮಾರುತಿ ಸುಜುಕಿ, ಟಾಟಾ ಮೋಟಾರ್ಸ್ ಹಾಗೂ ಮಹೀಂದ್ರಾ ಕಂಪನಿಗಳು ಸಹ ನೂತನ ಕಾರುಗಳನ್ನು ಬಿಡುಗಡೆಗೊಳಿಸಲು ತಯಾರಿ ಮಾಡಿಕೊಳ್ಳುತ್ತಿವೆ. ಎಲ್ಲವು ಅಂದುಕೊಂಡಂತೆ ನಡೆದರೆ, ಈ ಮೂರು ಜಬರ್ದಸ್ತ್ ಕಾರುಗಳು ಅತಿ ಶೀಘ್ರದಲ್ಲೇ ಮಾರಾಟಕ್ಕೂ ಬರಲಿವೆ. ಬನ್ನಿ.. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.
ಮಾರುತಿ ಸುಜುಕಿ ಇ-ವಿಟಾರಾ (Maruti Suzuki e Vitara):
ಇದೊಂದು ಎಲೆಕ್ಟ್ರಿಕ್ ಎಸ್‌ಯುವಿಯಾಗಿದ್ದು, ಬಹುತೇಕ ಡಿಸೆಂಬರ್ ತಿಂಗಳಲ್ಲಿ ಪರಿಚಯಗೊಳ್ಳುವ ನಿರೀಕ್ಷೆಯಿದೆ. ಸ್ಪರ್ಧಾತ್ಮಕ ಬೆಲೆಯಲ್ಲಿಯೂ ಖರೀದಿಗೆ ದೊರೆಯಬಹುದು ಎಂದು ಅಂದಾಜಿಸಲಾಗಿದೆ. ಕನಿಷ್ಠ ರೂ.17 ಲಕ್ಷ ಹಾಗೂ ಗರಿಷ್ಠ ರೂ.22.50 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿರುವ ಸಾಧ್ಯತೆಯಿದೆ. ಡೆಲ್ಟಾ, ಜಿಟಾ ಮತ್ತು ಆಲ್ಫಾ ಎಂಬ 3 ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗಲಿದೆ.

ಈ ವರ್ಷಾರಂಭದಲ್ಲಿ ಕೊನೆಗೊಂಡ 'ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ'ದಲ್ಲಿಯೂ 'ಇ-ವಿಟಾರಾ'ವನ್ನು ಪ್ರದರ್ಶಿಸಲಾಗಿತ್ತು. ಅಲ್ಲಿ ತೋರಿಸಲಾದ ಮಾಡೆಲ್, ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿತ್ತು. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲೈಟ್ ಮತ್ತು ಅಲಾಯ್ ವೀಲ್‌ಗಳನ್ನು ಪಡೆದಿತ್ತು. ವಿಶೇಷವಾಗಿ, ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (10.25 ಇಂಚು) & ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿತ್ತು. ಸುರಕ್ಷತೆಗಾಗಿ 7-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿತ್ತು.
ನೂತನ 'ಮಾರುತಿ ಇ-ವಿಟಾರಾ' 49 ಹಾಗೂ 61 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿರಲಿದೆ. ಭರ್ತಿ ಚಾರ್ಜ್‌ನಲ್ಲಿ 500 ಕಿ.ಮೀವರೆಗೆ ರೇಂಜ್ (ಮೈಲೇಜ್) ನೀಡಬಹುದು ಎಂದು ಹೇಳಲಾಗಿದೆ. ಜೊತೆಗಿದು 5 ಆಸನಗಳ ಆಯ್ಕೆಯಲ್ಲಿಯೂ ಲಭ್ಯವಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹದು.

ಟಾಟಾ ಸಿಯೆರಾ (Tata Sierra):
ಇದು ಎಸ್‌ಯುವಿಯಾಗಿದ್ದು, ಇಂಧನ (ಪೆಟ್ರೋಲ್/ಡೀಸೆಲ್) & ಎಲೆಕ್ಟ್ರಿಕ್ ಚಾಲಿತ ರೂಪದಲ್ಲಿ ಬಿಡುಗಡೆಯಾಗಲಿದೆ. ಮುಂದಿನ ತಿಂಗಳೇ (ನವೆಂಬರ್) ಮಾರಾಟಕ್ಕೆ ಬರಬಹುದು ಎನ್ನಲಾಗಿದೆ. ಆದರೆ, ಈ ಕುರಿತಂತೆ ಖಚಿತ ವಿವರಗಳು ದೊರೆತಿಲ್ಲ. ಇದು ಆಕರ್ಷಕವಾದ ವಿನ್ಯಾಸ ಹೊಂದಿರಲಿದ್ದು, 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿರಲಿದೆ.
ಹೊಸ 'ಸಿಯೆರಾ' 1.5-ಲೀ. ಟರ್ಬೊಚಾರ್ಜ್ಡ್ ಪೆಟ್ರೋಲ್ & 2.0-ಲೀ. ಟರ್ಬೊ ಡೀಸೆಲ್ ಎಂಜಿನ್‌ನ್ನು ಒಳಗೊಂಡಿರಲಿದೆ. ಹಾಗೆಯೇ 65 ಮತ್ತು 75 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿರಲಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 627 ಕಿ.ಮೀವರೆಗೆ ರೇಂಜ್ (ಮೈಲೇಜ್) ಕೊಡಬಹುದು ಎಂದು ಹೇಳಲಾಗಿದೆ. ರೂ.10 ಲಕ್ಷ ಆರಂಭಿಕ ಬೆಲೆಯನ್ನು ಹೊಂದಿರುವ ಸಾಧ್ಯತೆಯೂ ಇದೆ.

ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಇವಿ (Mahindra XUV 3XO EV):
ಈ ಎಲೆಕ್ಟ್ರಿಕ್ ಎಸ್‌ಯುವಿಯನ್ನು 2026ರಲ್ಲಿ ಪರಿಚಯಿಸಬಹುದು ಎನ್ನಲಾಗಿದೆ. ಇದು ರೂ.15 ಲಕ್ಷದಿಂದ ರೂ.18 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುವ ನಿರೀಕ್ಷೆಯಿದೆ. 34.5 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಹೊಂದಿರಲಿದ್ದು, ಪೂರ್ತಿ ಚಾರ್ಜ್‌ನಲ್ಲಿ 375 ಕಿ.ಮೀ ರೇಂಜ್ (ಮೈಲೇಜ್) ನೀಡಬಹುದು ಎಂದು ಅಂದಾಜಿಸಲಾಗಿದೆ.
ನೂತನ 'ಎಕ್ಸ್‌ಯುವಿ 3ಎಕ್ಸ್ಒ ಇವಿ'ಯು 5 ಆಸನಗಳನ್ನು ಒಳಗೊಂಡಿರಲಿದೆ. ಡುಯಲ್ ಡಿಸ್‌ಪ್ಲೇಗಳು (10.25 ಇಂಚು), ಡುಯಲ್ ಝೋನ್ ಎಸಿ, ವೈರ್‌ಲೆಸ್ ಫೋನ್ ಚಾರ್ಜರ್, ಸನ್‌ರೂಫ್ & ಕ್ರೂಸ್ ಕಂಟ್ರೋಲ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದುಕೊಂಡಿರಲಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿರುವ ನಿರೀಕ್ಷೆಯಿದೆ.


Click it and Unblock the Notifications








