Duster: 24 Km ಮೈಲೇಜ್.. 8 ಲಕ್ಷ? ಜ.26ಕ್ಕೆ ಬರುತ್ತೆ ಹೊಸ ರೆನಾಲ್ಟ್ ಡಸ್ಟರ್ SUV.. ಪ್ರಮುಖಾಂಶಗಳಿವು!

ರೆನಾಲ್ಟ್ ಇಂಡಿಯಾ (Renault India), ಪ್ರಮುಖ ವಾಹನ ತಯಾರಕ ಕಂಪನಿಯಾಗಿದೆ. ಜಗಮೆಚ್ಚಿದ ಎಸ್‌ಯುವಿ ಎಂದೇ ಖ್ಯಾತಿ ಗಳಿಸಿದ್ದ 'ಡಸ್ಟರ್'ನ್ನು ಹೊಸ ರೂಪದಲ್ಲಿ ಮಾರಾಟಕ್ಕೆ ತರಲು ಸಿದ್ದವಾಗಿದೆ. ಈ ನೂತನ ಕಾರನ್ನು ಜನವರಿ 26 ರ ಗಣರಾಜ್ಯೋತ್ಸವದಂದು ಅನಾವರಣಗೊಳಿಸಲಾಗತ್ತದೆ. ಹೊಸ 'ಡಸ್ಟರ್' ಬರುವಿಕೆಗೆ ಗ್ರಾಹಕರು ಕೂಡ ತುದಿಗಾಲಿನಲ್ಲಿ ನಿಂತುಕೊಂಡು ಕಾಯುತ್ತಿದ್ದಾರೆ. ದೇಶೀಯ ಮಾರುಕಟ್ಟೆಯಲ್ಲಿ 2012 ರಿಂದ 2020ರ ಅವಧಿಯಲ್ಲಿ ಇದೇ ಎಸ್‌ಯುವಿಯು ಭಾರೀ ಸಂಖ್ಯೆಯಲ್ಲಿಯೂ ಮಾರಾಟಗೊಂಡಿತ್ತು.

ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ, ಈ ರೆನಾಲ್ಟ್ ಡಸ್ಟರ್‌ (Renault Duster) ಅತ್ಯುತ್ತಮವಾದ ಆಯ್ಕೆಯಾಗಲಿದೆ. ಬನ್ನಿ, ಈ ಕಾರಿನ ನಿರೀಕ್ಷಿತ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

Upcoming Renault Duster Suv Expected Price Mileage Features And All Top Things

ಬೆಲೆ (Price):

ಹೊಚ್ಚ ಹೊಸ 'ರೆನಾಲ್ಟ್ ಡಸ್ಟರ್‌' ಎಸ್‌ಯುವಿ ಕೈಗೆಟುಕುವ ಬೆಲೆಯಲ್ಲಿಯೂ ಗ್ರಾಹಕರ ಖರೀದಿಗೆ ದೊರೆಯುವ ನಿರೀಕ್ಷೆಯಿದೆ. ಕನಿಷ್ಠ ರೂ.8 ಲಕ್ಷ ಹಾಗೂ ಗರಿಷ್ಠ ರೂ.15 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದ್ದು, ಎಲ್ಲ ವರ್ಗದ ಗ್ರಾಹಕರಿಗೂ ಸುಲಭವಾಗಿ ಕೈಗೆಟುಕುವಂತಿರಲಿದೆ ಎಂದು ಹೇಳಲಾಗಿದೆ.

ವಿನ್ಯಾಸ (Design):

ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿರಲಿದೆ. ಈಗಾಗಲೇ, ನೂತನ 'ಡಸ್ಟರ್‌' ಪ್ರಾಯೋಗಿಕ ಸಂಚಾರ ನಡೆಸುವಾಗಲು ಕ್ಯಾಮೆರಾ ಕಣ್ಣಿಗೆ ಸೆರೆ ಸಿಕ್ಕಿದೆ. ಅಲ್ಲಿ ಕಾಣಿಸಿಕೊಂಡ ಮಾಡೆಲ್, ಹಿಂಭಾಗ (ರೇರ್) 'ವಿ' ಆಕಾರದಲ್ಲಿರುವ ಟೈಲ್ ಲ್ಯಾಂಪ್‌ಗಳು, ಥೀಕ್ ವೀಲ್ ಆರ್ಚ್ ಕ್ಲಾಡಿಂಗ್, ಶಾರ್ಕ್-ಫಿನ್ ಆಂಟೆನಾ, ರೂಫ್ ರೈಲ್‌ಗಳು, ವಿಂಡ್‌ಶೀಲ್ಡ್, ವಾಷರ್ ಮತ್ತು ವೈಪರ್‌ನ್ನು ಪಡೆದಿದೆ. ಇದರೊಂದಿಗೆ ಮುಂಭಾಗ (ಫ್ರಂಟ್) ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಹಾಗೂ ಸರ್ಕ್ಯುಲರ್ ಫಾಗ್ ಲೈಟ್‌ಗಳನ್ನು ಒಳಗೊಂಡಿರುವ ಸಾಧ್ಯತೆಯಿದೆ.

Upcoming Renault Duster Suv Expected Price Mileage Features And All Top Things

ಸುತ್ತಳತೆ (Dimensions):

ಹೊಸ 'ರೆನಾಲ್ಟ್ ಡಸ್ಟರ್‌' ಹೆಚ್ಚು ವಿಶಾಲ ಗಾತ್ರದಲ್ಲಿರಲಿದೆ. 4,360 ಮಿ.ಮೀ ಉದ್ದ, 1,822 ಮಿ.ಮೀ ಅಗಲ ಮತ್ತು 1695 ಮಿ.ಮೀ ಎತ್ತರವಿರಲಿದೆ. ಜೊತೆಗೆ 205 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,673 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿರುವ ನಿರೀಕ್ಷೆಯಿದೆ.

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):

ಈ ಕಾರು 5/ 7 ಆಸನಗಳನ್ನು ಪಡೆದಿರಲಿದ್ದು, ಪ್ರಯಾಣಿಕರು ಆರಾಮದಾಯಕ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಯಲು ಸಾಧ್ಯವಾಗುವಂತೆ 472 ಲೀಟರ್‌ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿರಬಹುದು ಎನ್ನಲಾಗಿದೆ.

ಕಾರ್ಯಕ್ಷಮತೆ (Performance):

ಇದು ಶಕ್ತಿಯುತವಾದ 3 ಪವರ್‌ಟ್ರೇನ್‌ನ್ನು ಒಳಗೊಂಡಿರಲಿದೆ. 1.3-ಲೀ. ಟರ್ಬೊ ಪೆಟ್ರೋಲ್, 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.0-ಲೀ. ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಪಡೆದಿರಬಹುದು ಎಂದು ಹೇಳಲಾಗಿದೆ. ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್ & ಸಿವಿಟಿ ಗೇರ್‌ಬಾಕ್ಸ್‌ನ್ನು ಹೊಂದಿರಬಹುದು. ಸರಿ ಸುಮಾರು 24 ಕಿ.ಮೀವರೆಗೆ ಮೈಲೇಜ್ ನೀಡುವ ಸಾಧ್ಯತೆಯಿದೆ.

ವೈಶಿಷ್ಟ್ಯಗಳು (Features):

ನೂತನ 'ರೆನಾಲ್ಟ್ ಡಸ್ಟರ್‌' ಎಸ್‌ಯುವಿಯ ಕ್ಯಾಬಿನ್ ವಿನ್ಯಾಸವು ಚೆನ್ನಾಗಿರಲಿದೆ. 10 ಇಂಚಿನ ಟಚ್‌ಸ್ಕ್ರೀನ್‌ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಸ್ಕ್ರೀನ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ರೇರ್ ಎಸಿ ವೆಂಟ್‌ಗಳು ಹಾಗೂ ಅರ್ಕಾಮಿಸ್ 3ಡಿ-ಸೌಂಡ್ ಸಿಸ್ಟಮ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿರುವ ನಿರೀಕ್ಷೆಯಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features):

ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿರಲಿದ್ದು, ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಲಿದೆ. ಅದಕ್ಕಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಎಸ್‍ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು ಆಲ್-ವೀಲ್ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿರಬಹುದು ಎನ್ನಲಾಗಿದೆ.

More from DriveSpark

Article Published On: Sunday, November 9, 2025, 9:36 [IST]
English summary
Upcoming renault duster suv expected price mileage features and all top things
Read more on renault india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+