TATA: ಸಿದ್ಧರಾಗಿ.. ಕಲ್ಲು ಬಂಡೆಯಂತಹ 3 ಹೊಸ ಟಾಟಾ ಕಾರುಗಳು ಬರಲಿವೆ, ಬೆಲೆ ಎಷ್ಟು.. ವಿಶೇಷತೆಗಳೇನು?
ಟಾಟಾ ಮೋಟಾರ್ಸ್ (Tata Motors) ಜಗಮೆಚ್ಚಿದ ಕಾರು ತಯಾರಕ ಕಂಪನಿಯಾಗಿದೆ. ದೇಶೀಯವಾಗಿ ಟಿಯಾಗೊ, ಪಂಚ್, ನೆಕ್ಸಾನ್, ಹ್ಯಾರಿಯರ್, ಸಫಾರಿ ಸೇರಿದಂತೆ ವಿವಿಧ ಹ್ಯಾಚ್‌ಬ್ಯಾಕ್ & ಎಸ್‌ಯುವಿಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಸದ್ಯ 3 ಹೊಚ್ಚ ಹೊಸ ಕಾರುಗಳನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಲು ಕಂಪನಿಯು ಎಲ್ಲ ರೀತಿಯ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ಟಾಟಾ ಅವಿನ್ಯಾ ಎಕ್ಸ್ (Tata Avinya X):
ನೂತನ 'ಅವಿನ್ಯಾ' ಎಲೆಕ್ಟ್ರಿಕ್ ಚಾಲಿತ ಎಸ್‌ಯುವಿಯಾಗಿದ್ದು, ಇದೇ ವರ್ಷಾರಂಭದಲ್ಲಿ ಕೊನೆಗೊಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ'ದಲ್ಲೂ ಈ ಕಾರನ್ನು ಪ್ರದರ್ಶಿಸಲಾಗಿತ್ತು. ಅಲ್ಲಿ ತೋರಿಸಲಾದ ಮಾಡೆಲ್ ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿತ್ತು. ಎಲ್‌ಇಡಿ ಹೆಡ್‌ಲೈಟ್‌ಗಳು, 'ಟಿ' ಆಕಾರಕ್ಕೆ ಹೋಲಿಕೆಯಾಗಬಲ್ಲ ಎಲ್‌ಇಡಿ ಡಿಆರ್‌ಎಲ್‌ಗಳು, ಬ್ಲ್ಯಾಂಕೆಡ್ ಆಫ್ ಗ್ರಿಲ್ & ಟೈಲ್ ಲೈಟ್‌ಗಳನ್ನು ಪಡೆದಿತ್ತು.

ಇದು ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿರುವ ನೀರಿಕ್ಷೆಯಿದೆ. ಬಹುಮುಖ್ಯವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋಮೆಟಿಕ್ ಎಸಿ, ವೈರ್‌ಲೆಸ್ ಫೋನ್ ಚಾರ್ಜಿಂಗ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಒಳಗೊಂಡಿರಬಹುದು ಎನ್ನಲಾಗಿದೆ. ಅದೇ ರೀತಿಯಲ್ಲಿ ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360 ಡಿಗ್ರಿ ಕ್ಯಾಮೆರಾಗಳನ್ನು ಹೊಂದಿರುವ ಸಾಧ್ಯತೆಯಿದೆ.
ಈ ಕಾರು 5 ಆಸನಗಳನ್ನು ಒಳಗೊಂಡಿರಲಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ಮಾಡಬಹುದು. ದೊಡ್ಡ ಗಾತ್ರದ ಬ್ಯಾಟರಿ ಪ್ಯಾಕ್‌ನ್ನು ಪಡೆದುಕೊಂಡಿರಲಿದೆ. ಭರ್ತಿ ಚಾರ್ಜ್‌ನಲ್ಲಿ 500 ಕಿ.ಮೀಗೂ ಅಧಿಕ ರೇಂಜ್ (ಮೈಲೇಜ್) ನೀಡಬಹುದು ಎಂದು ಅಂದಾಜಿಸಲಾಗಿದೆ. 2026ರ ದ್ವಿತೀಯಾರ್ಧದಲ್ಲಿ ಬಿಡುಗಡೆಯಾಗಬಹುದು ಎಂದು ಹೇಳಲಾಗಿದೆ. ರೂ.40 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿರುವ ನಿರೀಕ್ಷೆಯಿದೆ.

ಟಾಟಾ ಸಫಾರಿ ಇವಿ (Tata Safari EV):
ಇದೊಂದು ಎಲೆಕ್ಟ್ರಿಕ್ ಚಾಲಿತ ಫ್ಯಾಮಿಲಿ ಎಸ್‌ಯುವಿಯಾಗಿರಲಿದೆ. ಸಾಮಾನ್ಯ 'ಸಫಾರಿ' ಕಾರಿನಂತೆ ವಿನ್ಯಾಸವನ್ನು ಹೊಂದಿರಲಿದೆ. ಅತ್ಯುತ್ತಮವಾದ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಒಳಗೊಂಡಿರಲಿದೆ ಎನ್ನಲಾಗಿದೆ. ಜೊತೆಗೆ ಉತ್ತಮವಾದ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಾಗುವ ಸಾಧ್ಯತೆಯಿದೆ.
ಹೊಸ 'ಸಫಾರಿ ಇವಿ' ಹ್ಯಾರಿಯರ್ ಇವಿಯಂತೆ 65 & 75 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿರಲಿದೆ. ಸಂಪೂರ್ಣ ಚಾರ್ಜ್‌ನಲ್ಲಿ 627 ಕಿ.ಮೀವರೆಗೆ ರೇಂಜ್ (ಮೈಲೇಜ್) ಕೊಡಬಹುದು ಎನ್ನಲಾಗಿದೆ. 6 ಆಸನಗಳನ್ನು ಒಳಗೊಂಡಿರಲಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ನಿರೀಕ್ಷೆಯಿದೆ. ರೂ.32 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಪಡೆದುಕೊಂಡಿರಬಹುದು ಎಂದು ಅಂದಾಜಿಸಲಾಗಿದ್ದು, 2026ರ ಮೊದಲರ್ಧದಲ್ಲಿ ಬಿಡುಗಡೆಯಾಗಬಹದು ಎಂದು ಹೇಳಲಾಗಿದೆ.

ಟಾಟಾ ಸಿಯೆರಾ (Tata Sierra):
ಇದು ಮುಂದಿನ ತಿಂಗಳಲ್ಲೇ (ನವೆಂಬರ್) ಮಾರಾಟಕ್ಕೆ ಬರುವ ನಿರೀಕ್ಷೆಯಿದ್ದು, ಇಂಧನ (ಪೆಟ್ರೋಲ್/ಡೀಸೆಲ್) & ಎಲೆಕ್ಟ್ರಿಕ್ ಚಾಲಿತ ರೂಪದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಾಗಲಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿರಲಿದೆ. ಈ ಕಾರಿನ ಇಂಧನ ಆಯ್ಕೆಯ ಮಾಡೆಲ್, ರೂ.10 ಲಕ್ಷ ಹಾಗೂ ಎಲೆಕ್ಟ್ರಿಕ್ ಮಾಡೆಲ್ ರೂ.25 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿರಬಹುದು ಎಂದು ಹೇಳಲಾಗಿದೆ.
ನೂತನ 'ಸಿಯೆರಾ' 5 ಆಸನಗಳನ್ನು ಒಳಗೊಂಡಿರಲಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಸಂಚಾರ ಮಾಡಬಹುದು. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಸನ್‌ರೂಫ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿರುವ ನಿರೀಕ್ಷೆಯಿದೆ. 7 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿರಬಹುದು ಎನ್ನಲಾಗಿದೆ.


Click it and Unblock the Notifications








