ಭಾರತದಲ್ಲಿ ಹೊಸ ಬ್ರ್ಯಾಂಡ್‌ನ ಅಬ್ಬರ! ಮತ್ತೆರಡು ಕಾರು ಬಿಡುಗಡೆಗೊಳಿಸಲು ಸಿದ್ಧತೆ.. ಯಾವುವು, ಬೆಲೆ ಎಷ್ಟು?

ವಿಯೆಟ್ನಾಂ ಮೂಲದ ವಿನ್‌ಫಾಸ್ಟ್‌ (VinFast) ಪ್ರಮುಖ ಕಾರು ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ದೇಶೀಯವಾಗಿ ಇದೇ ಸೆಪ್ಟೆಂಬರ್‌ನಲ್ಲಿ ನೂತನ ವಿಎಫ್6 & ವಿಎಫ್7 ಎಲೆಕ್ಟ್ರಿಕ್ ಎಸ್‌ಯುವಿಯನ್ನು ಮಾರಾಟಕ್ಕೂ ತಂದಿದೆ. ಮೊದಲ ಬ್ಯಾಚ್‍ನ ಕಾರುಗಳ ವಿತರಣೆಯನ್ನು ಶುರು ಮಾಡಲಾಗಿದೆ. ಅಕ್ಟೋಬರ್ ತಿಂಗಳಲ್ಲಿ ಸರಿ ಸುಮಾರು 131 ಯುನಿಟ್‌ಗಳನ್ನು ಮಾರಾಟಗೊಳಿಸಿದೆ. ಸದ್ಯ ಕಂಪನಿಯು ಮತ್ತೆರೆಡು ಹೊಚ್ಚ ಹೊಸ ಕಾರುಗಳನ್ನು ಬಿಡುಗಡೆಗೊಳಿಸಲು ಎಲ್ಲ ರೀತಿಯ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ವಿನ್‌ಫಾಸ್ಟ್‌ ಲಿಮೋ ಗ್ರೀನ್‌ (VinFast Limo Green):

ಇದೊಂದು ಫ್ಯಾಮಿಲಿ ಎಂಪಿವಿಯಾಗಿದೆ. ಭಾರತದಲ್ಲಿ ಈ ಕಾರನ್ನು ಉತ್ಪಾದಿಸಲು ಪೇಟೆಂಟ್‌ನ್ನು ಸಲ್ಲಿಸಲಾಗಿದೆ. ಇತ್ತೀಚೆಗೆ ಮೊದಲ ಬಾರಿಗೆ ಪರೀಕ್ಷಾರ್ಥ ಓಡಾಟ ನಡೆಸುವಾಗಲೂ ಕಾಣಿಸಿಕೊಂಡಿತ್ತು. ನೂತನ 'ಲಿಮೋ ಗ್ರೀನ್‌' ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿಯೂ ಖರೀದಿಗೆ ಲಭ್ಯವಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಫುಲ್ ವಿಡ್ತ್ ಡಿಆರ್‌ಎಲ್‌ಗಳು, ಸಿಗ್ನೇಚರ್ ಟೈಲ್ ಲ್ಯಾಂಪ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಪಡೆದಿದೆ.

Upcoming Vinfast Cars In India Limo Green And VF3 Expected Price Details

ಈ ಎಂಪಿವಿಯು ಡೀಪ್ ಓಷನ್, ಡೆಸಾಟ್ ಸಿಲ್ವರ್, ನೆಪ್ಚೂನ್ ಗ್ರೇ, ಕ್ರಿಮ್ಸನ್ ರೆಡ್, ಸನ್‌ಸೆಟ್ ಆರೆಂಜ್ ಮತ್ತು ಜೆಟ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 170 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,840 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. 7 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 285 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.

ಹೊಸ 'ವಿನ್‌ಫಾಸ್ಟ್‌ ಲಿಮೋ ಗ್ರೀನ್‌' ಕಾರು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 60.13 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 450 ಕಿ.ಮೀ ರೇಂಜ್ (ಮೈಲೇಜ್) ಕೊಡುತ್ತದೆ. ಇನ್ಫೋಟೈನ್‌ಮೆಂಟ್ ಡಿಸ್‌ಪ್ಲೇ (10.1 ಇಂಚು), 3-ಸ್ಪೋಕ್ ಸ್ಟೀರಿಂಗ್ ವೀಲ್ ಹಾಗೂ ಫ್ಲೋಟಿಂಗ್ ಸೆಂಟರ್ ಕನ್ಸೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 4 ಏರ್‌ಬ್ಯಾಗ್‌ಗಳು ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

Upcoming Vinfast Cars In India Limo Green And VF3 Expected Price Details

ದೇಶೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗುವ ಈ ಎಲೆಕ್ಟ್ರಿಕ್ ಎಂಪಿವಿ, ಸ್ವಲ್ಪ ಮಟ್ಟಿಗೆ ದುಬಾರಿ ಬೆಲೆಯನ್ನು ಹೊಂದಿರುವ ನೀರಿಕ್ಷೆಯಿದೆ. ರೂ.25 ಲಕ್ಷದಿಂದ ರೂ.30 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದೆ. 2026ರ ಮಧ್ಯಭಾಗದಲ್ಲಿ ಮಾರಾಟಕ್ಕೂ ಬರಬಹುದು. ಇದಕ್ಕೆ 'ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಇವಿ' ಪ್ರಬಲವಾದ ಎದುರಾಳಿಯಾಗುವ ಎಲ್ಲ ಸಾಧ್ಯತೆಯಿದೆ.

ವಿನ್‌ಫಾಸ್ಟ್ ವಿಎಫ್3 (VinFast VF3):

ಈ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್‌ ಫಿಲಿಪೈನ್ಸ್ ಮತ್ತು ಇಂಡೋನೇಷ್ಯಾ ಸೇರಿದಂತೆ ವಿವಿಧ ಜಾಗತಿಕ ಮಾರುಕಟ್ಟೆಯಲ್ಲಿ ಗ್ರಾಹಕರ ಖರೀದಿ ಲಭ್ಯವಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು & ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಪಡೆದಿದೆ. ಎಲೆಕ್ಟ್ರಿಕ್ ಬ್ಲೂ, ಅರ್ಬನ್ ಮಿಂಟ್, ಸಮ್ಮರ್ ಯೆಲ್ಲೋ ಮತ್ತು ರೋಸ್ ಪಿಂಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 191 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,075 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

ನೂತನ 'ವಿನ್‌ಫಾಸ್ಟ್ ವಿಎಫ್3' ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 18.64 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಪೂರ್ತಿ ಚಾರ್ಜ್‌ನಲ್ಲಿ 215 ಕಿ.ಮೀ ರೇಂಜ್ (ಮೈಲೇಜ್) ನೀಡುತ್ತದೆ. 4 ಆಸನಗಳನ್ನು ತನ್ನದಾಗಿಸಿಕೊಂಡಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ (10 ಇಂಚು), ಮ್ಯಾನುವಲ್ ಎಸಿ, ಕ್ರೂಸ್ ಕಂಟ್ರೋಲ್ ಮತ್ತು ಫ್ರಂಟ್ ಪವರ್ ವಿಂಡೋಗಳು ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ ಮಲ್ಟಿಪಲ್ ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಇದು ಭಾರತದಲ್ಲಿ ಅತಿ ಕಡಿಮೆ ಬೆಲೆಯಲ್ಲಿ ಮಾರಾಟಕ್ಕೆ ಬರುವ ಎಲ್ಲ ಸಾಧ್ಯತೆಗಳಿವೆ. ರೂ.7.50 ಲಕ್ಷದಿಂದ ರೂ.10 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿರಬಹುದು ಎನ್ನಲಾಗಿದೆ. 2026ರ ಮಧ್ಯಭಾಗದಲ್ಲಿ ಬಿಡುಗಡೆಯಾಗುವ ನೀರಿಕ್ಷೆಯಿದೆ. ಈ ಕಾರಿಗೆ ಎಂಜಿ ಕಾಮೆಟ್ ಇವಿ ಹಾಗೂ ಟಾಟಾ ಟಿಯಾಗೊ ಇವಿಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಲಿವೆ.

More from DriveSpark

Article Published On: Friday, November 21, 2025, 13:24 [IST]
English summary
Upcoming vinfast cars in india limo green and vf3 expected price details
Read more on VinFast india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+