ರೆಕಾರ್ಡ್ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ ಅಗ್ಗದ MG Windsor ಎಲೆಕ್ಟ್ರಿಕ್ ಕಾರು.. ಶೀಘ್ರ ಹೊಸ ರೂಪದಲ್ಲಿ ಬಿಡುಗಡೆ!

ದೇಶೀಯ ವಾಹನ ಮಾರುಕಟ್ಟೆಯಲ್ಲಿ ಜೆ‌ಎಸ್‌ಡಬ್ಲ್ಯೂ (JSW) & ಎಂಜಿ ಮೋಟಾರ್ (MG Motor) ಕಂಪನಿಗಳು ವ್ಯಾಪಾರ ಪಾಲುದಾರಿಕೆಯನ್ನು ಹೊಂದಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ.. ಇವೆರೆಡು ಕಂಪನಿಗಳು ಜಂಟಿಯಾಗಿ 2024ರ ಸೆಪ್ಟೆಂಬರ್ ತಿಂಗಳಲ್ಲಿ ಹೊಚ್ಚ ಹೊಸ 'ಎಂಜಿ ವಿಂಡ್ಸರ್' ಹೆಸರಿನ ಎಲೆಕ್ಟ್ರಿಕ್ ಎಸ್‌ಯುವಿಯನ್ನು ಮಾರಾಟಕ್ಕೆ ತಂದಿದ್ದವು. ಸದ್ಯ, ಇದೇ ಕಾರನ್ನು ನವೀನ ರೂಪದಲ್ಲಿಯೂ ಕೂಡ ಬಿಡುಗಡೆಗೊಳಿಸಲು ಭರದಿಂದ ಸಿದ್ಧತೆಗಳು ನಡೆಯುತ್ತಿವೆ ಎಂದು ವರದಿಯಾಗಿದೆ.

ಎಲ್ಲವು ಅಂದುಕೊಂಡಂತೆ ನಡೆದರೆ ನೂತನ ಎಂಜಿ ವಿಂಡ್ಸರ್ (MG Windsor) ಎಲೆಕ್ಟ್ರಿಕ್ ಕಾರಿನ 55 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿರುವ ಮಾಡೆಲ್, ಅತಿ ಶೀಘ್ರದಲ್ಲೇ ಮಾರಾಟಕ್ಕೆ ಬರಲಿದೆ. ಬಹುತೇಕ ಮುಂದಿನ ತಿಂಗಳೇ (ಮೇ-2025) ಬಿಡುಗಡೆಯಾಗಬಹುದು ಎನ್ನಲಾಗಿದೆ. ಇದು 500 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡಲಿದೆ ಎಂದು ಅಂದಾಜಿಸಲಾಗಿದೆ.

Updated New MG Windsor Electric Car Launch Soon What Expected Details

ಹೊಸ ಎಂಜಿ ವಿಂಡ್ಸರ್ 55 ಕೆಡಬ್ಲ್ಯೂಹೆಚ್ ಮಾಡೆಲ್‌ನಲ್ಲಿ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಿರುವ ಸಾಧ್ಯತೆಯಿದ್ದು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ವೈಶಿಷ್ಟ್ಯವನ್ನು ಹೊಂದಿರಬಹುದು ಎಂದು ಹೇಳಲಾಗಿದೆ. ಇದು ಆಟೊನೊಮಸ್ ಎಮರ್ಜೆನ್ಸಿ ಬ್ರೇಕಿಂಗ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್ ಹಾಗೂ ಲೇನ್ ಅಸಿಸ್ಟ್‌ನಂತಹ ವಿವಿಧ ರಕ್ಷಣಾತ್ಮಕ ಅಂಶಗಳನ್ನು ಹೊಂದಿರುವ ನಿರೀಕ್ಷೆಯಿದೆ.

ಪ್ರಸ್ತುತ ಖರೀದಿಗೆ ಸಿಗುವ ಎಂಜಿ ವಿಂಡ್ಸರ್ ಇವಿ ವಿಶೇಷತೆಗಳೇನು: ಈ ಎಲೆಕ್ಟ್ರಿಕ್ ಎಸ್‌ಯುವಿ, ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ ಕೈಗೆಟುಕುವ ಬೆಲೆಯಲ್ಲಿಯೇ ಸಿಗುತ್ತದೆ. ಕನಿಷ್ಠ ರೂ.14 ಲಕ್ಷ ಮತ್ತು ಗರಿಷ್ಠ ರೂ.16 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಇದರಲ್ಲಿ 5 ಮಂದಿ ಸಂಚಾರಿಸಬಹುದು. 604 ಲೀಟರ್‌ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

Updated New MG Windsor Electric Car Launch Soon What Expected Details

ಈ ಕಾರು ಹೆಚ್ಚು ಶಕ್ತಿಯುತವಾದ ಪವರ್‌ಟ್ರೇನ್‌ ಆಯ್ಕೆಯನ್ನು ಹೊಂದಿದೆ. 38 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 331 ಕಿಲೋಮೀಟರ್ ಓಡುತ್ತದೆ. ಹಾಗೆಯೇ ಹೊರಭಾಗದಲ್ಲಿ ಚೆನ್ನಾಗಿರುವ ವಿನ್ಯಾಸವನ್ನೇ ಒಳಗೊಂಡಿದ್ದು, ಹಲವು ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

ಹೊಸ ಎಂಜಿ ವಿಂಡ್ಸರ್ ಎಲೆಕ್ಟ್ರಿಕ್ ಕಾರು ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು ವೈರ್‌ಲೆಸ್ ಫೋನ್ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಎಂಜಿ ವಿಂಡ್ಸರ್ ಇವಿ ಮಾರಾಟ ಹೇಗಿದೆ: ಟಾಟಾ ನೆಕ್ಸಾನ್ ಮತ್ತು ಮಹೀಂದ್ರಾ ಎಕ್ಸ್‌ಯುವಿ400 ಇವಿಗಳಿಗೆ ಈ ಎಲೆಕ್ಟ್ರಿಕ್ ಕಾರು ಪ್ರಬಲವಾದ ಎದುರಾಳಿಯಾಗಿದ್ದು, ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಳುತ್ತಿದೆ. ಬಿಡುಗಡೆಯಾಗಿ 6 ತಿಂಗಳು ಕಳೆಯುವ ಮೊದಲೇ 20,000 ಯುನಿಟ್‌ ವಿಂಡ್ಸರ್ ಇವಿಗಳನ್ನು ಮಾರಾಟ ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ಮಾರಾಟ ಸಂಖ್ಯೆಯೂ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Friday, April 25, 2025, 13:22 [IST]
English summary
Updated new mg windsor electric car launch soon what expected details
Read more on mg motor india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+