ಇದು ಮಾರುತಿ & ಟಾಟಾ ಗಾಡಿಯಲ್ಲ.. ರೂ.5 ಲಕ್ಷಕ್ಕಿಂತ ಅಗ್ಗ, ಶೀಘ್ರದಲ್ಲೇ ಈ ಹೊಸ ಕಾರು ಬಿಡುಗಡೆ!

ಫ್ರಾನ್ಸ್ ಮೂಲದ ರೆನಾಲ್ಟ್ (Renault) ಜನಮೆಚ್ಚಿದ ವಾಹನ ತಯಾರಕ ಕಂಪನಿಯಾಗಿದೆ. ವಿಶ್ವದಲ್ಲೇ ಅತಿದೊಡ್ಡ ಕಾರು ಮಾರುಕಟ್ಟೆ ಹೊಂದಿರುವ ಭಾರತದಲ್ಲಿ ಭದ್ರವಾಗಿ ನೆಲೆಯೂರಲು ಪ್ರಯತ್ನಿಸುತ್ತಿದೆ. ಇತ್ತೀಚೆಗೆ ಟ್ರೈಬರ್ ಎಂಪಿವಿ ಹಾಗೂ ಕೈಗರ್ ಎಸ್‌ಯುವಿಗಳನ್ನು ನವೀಕರಿಸಿ, ಬಿಡುಗಡೆಗೊಳಿಸಿತ್ತು. ಸದ್ಯ, ಕಂಪನಿಯ ಆರಂಭಿಕ ಶ್ರೇಣಿ ಮಾದರಿ (ಎಂಟ್ರಿ ಲೆವೆಲ್ ಮಾಡೆಲ್) ಎಂದೇ ಹೆಸರುವಾಸಿಯಾಗಿರುವ 'ಕ್ವಿಡ್' ಹ್ಯಾಚ್‌ಬ್ಯಾಕ್‌ನ್ನು ಹೊಸ ರೂಪದಲ್ಲಿ ಪರಿಚಯಿಸಲು ತಯಾರಿ ನಡೆಸುತ್ತಿದೆ ಎಂದು ವರದಿಯಾಗಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಎಲ್ಲವು ಅಂದುಕೊಂಡಂತೆ ನಡೆದರೆ, ನೂತನ ರೆನಾಲ್ಟ್ ಕ್ವಿಡ್ ಫೇಸ್‌ಲಿಫ್ಟ್ (Renault Kwid Facelift) ಅತಿ ಶೀಘ್ರದಲ್ಲೇ ಮಾರಾಟಕ್ಕೆ ಬರಲಿದೆ. 2015ರಲ್ಲಿ ದೇಶೀಯವಾಗಿ ಈ ಕಾರನ್ನು ಅದ್ದೂರಿಯಾಗಿ ಬಿಡುಗಡೆ ಮಾಡಲಾಗಿತು. ಆ ಬಳಿಕ 2015 ಹಾಗೂ 2019ರಲ್ಲಿ ಇದೇ ಹ್ಯಾಚ್‌ಬ್ಯಾಕ್‌ನ್ನು ಮೇಲ್ದರ್ಜೆರಿಸಲಾಗಿತ್ತು.

Updated Renault Kwid Car Launch Soon Details

ಮುಂಬರುವ ಹೊಚ್ಚ ಹೊಸ 'ರೆನಾಲ್ಟ್ ಕ್ವಿಡ್ ಫೇಸ್‌ಲಿಫ್ಟ್' ಅತಿ ಕಡಿಮೆ ಬೆಲೆಯಲ್ಲಿಯೂ ಖರೀದಿಗೆ ದೊರೆಯುವ ನಿರೀಕ್ಷೆಯಿದೆ. ಈಗಿರುವ ಕಾರಿನಂತೆ ರೂ.4.70 ಲಕ್ಷದಿಂದ ರೂ.6.45 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದುಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಇದಕ್ಕೆ ಮಾರುತಿ ಸುಜುಕಿ ಆಲ್ಟೊ 10 ಹಾಗೂ ಟಾಟಾ ಟಿಯಾಗೊ ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

ಈ ರೆನಾಲ್ಟ್ ಕ್ವಿಡ್ ಫೇಸ್‌ಲಿಫ್ಟ್ ಕಾರಿನ ವಿನ್ಯಾಸದಲ್ಲಿ ಒಂದಷ್ಟು ಬದಲಾವಣೆಗಳನ್ನು ಹೊಂದಿರುವ ಸಾಧ್ಯತೆಯಿದೆ. ಐಸ್ ಕೂಲ್ ವೈಟ್, ಔಟ್‌ಬ್ಯಾಕ್ ಬ್ರೊನ್ ಹಾಗೂ ಮೂನ್‌ಲೈಟ್ ಸಿಲ್ವರ್ ಬಣ್ಣಗಳ ಆಯ್ಕೆಯಲ್ಲಿಯೂ ಸಿಗಬಹುದು ಎನ್ನಲಾಗಿದೆ. 5 ಆಸನಗಳನ್ನು ಒಳಗೊಂಡಿರಲಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು 279 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿರಲಿದೆ ಎಂದು ಹೇಳಲಾಗಿದೆ.

Updated Renault Kwid Car Launch Soon Details

ಇದರ ಪವರ್‌ಟ್ರೇನ್‌ನಲ್ಲೂ ಯಾವುದೇ ಮಾರ್ಪಾಡುಗಳಿರುವುದಿಲ್ಲ. 1-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿರಲಿದ್ದು, 68 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) & 91 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಲಿಸಲಿದೆ. 5-ಸ್ಪೀಡ್ ಮ್ಯಾನುವಲ್/ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿರಲಿದ್ದು, 22 ಕಿ.ಮೀ ವರೆಗೆ ಮೈಲೇಜ್ ನೀಡುವ ಎಲ್ಲ ಲಕ್ಷಣಗಳಿವೆ.

ನೂತನ ರೆನಾಲ್ಟ್ ಕ್ವಿಡ್ ಫೇಸ್‌ಲಿಫ್ಟ್ ಕ್ಯಾಬಿನ್ ಸಹ ಹಲವು ಹೊಸತನಗಳಿಗೆ ಸಾಕ್ಷಿಯಾಗಿರುವ ನಿರೀಕ್ಷೆಯಿದೆ. 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಕೀ ಲೆಸ್ ಎಂಟ್ರಿ ಹಾಗೂ ಮ್ಯಾನುವಲ್ ಎಸಿ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದುಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.

ಈ ಕಾರು ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಪಡೆದುಕೊಂಡಿರಲಿದ್ದು, ಪ್ರಯಾಣಿಕರಿಗೆ ಹೆಚ್ಚಿನ ರಕ್ಷಣೆ ಒದಗಿಸಬಲ್ಲದು. ಅದಕ್ಕಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೆನ್ಸರ್‌ಗಳು, ಹಿಲ್-ಸ್ಟಾರ್ಟ್ ಅಸಿಸ್ಟ್ ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿರಬಹುದು ಎಂದು ಹೇಳಲಾಗಿದೆ.

ರೆನಾಲ್ಟ್ ಕೈಗರ್ & ರೆನಾಲ್ಟ್ ಟ್ರೈಬರ್ ಫೇಸ್‌ಲಿಫ್ಟ್ ವಿಶೇಷತೆಗಳೇನು:

ರೆನಾಲ್ಟ್ ಕೈಗರ್ ಫೇಸ್‌ಲಿಫ್ಟ್: ಇದು ಎಸ್‌ಯುವಿಯಾಗಿದೆ. ರೂ.6.29 ಲಕ್ಷದಿಂದ ರೂ.11.29 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.0-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1.0-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 19 ರಿಂದ 20 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ಒಳಗೊಂಡಿದ್ದು, 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ರೆನಾಲ್ಟ್ ಟ್ರೈಬರ್ ಫೇಸ್‌ಲಿಫ್ಟ್: ಈ ಎಂಪಿವಿಯು ರೂ.6.29 ಲಕ್ಷದಿಂದ ರೂ.9.16 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 20 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 7-ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. 8-ಇಂಚಿರುವ ಪ್ಲೋಟಿಂಗ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 6-ಸ್ಪೀಕರ್ ಸೌಂಡ್ ಸಿಸ್ಟಮ್‌ನಂತಹ ವೈಶಿಷ್ಟ್ಯಗಳನ್ನು ಹೊಂದಿದೆ.

Article Published On: Thursday, August 28, 2025, 17:22 [IST]
English summary
Updated renault kwid car launch soon details
Read more on renault india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+