ವರಮಹಾಲಕ್ಷ್ಮಿ ಹಬ್ಬ.. 6+ ಸೀಟರ್, ಈ ಫ್ಯಾಮಿಲಿ ಕಾರುಗಳನ್ನು ನಿಮ್ಮ ಮನೆಗೆ ತರಬಹುದು!

ನಾಳೆ (ಆಗಸ್ಟ್ 8) ವರಮಹಾಲಕ್ಷ್ಮಿ ಹಬ್ಬ (Varamahalakshmi festival) ಬಂದಿದ್ದು, ರಾಜ್ಯಾದ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಈ ಹಬ್ಬದ ದಿನದಂದು ನಿಮ್ಮ ತುಂಬು ಕುಟುಂಬಕ್ಕಾಗಿ ಹೆಚ್ಚು ಸೂಕ್ತವಾಗಬಲ್ಲ ಹೊಚ್ಚ ಹೊಸ ಕಾರೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ, ಟಾಟಾ ಸಫಾರಿ, ಕಿಯಾ ಕ್ಯಾರೆನ್ಸ್ ಕ್ಲಾವಿಸ್, ರೆನಾಲ್ಟ್ ಟ್ರೈಬರ್ ಫೇಸ್‌ಲಿಫ್ಟ್, ಮಹೀಂದ್ರಾ ಎಕ್ಸ್‌ಯುವಿ700 ಹಾಗೂ ಟೊಯೊಟಾ ರೂಮಿಯನ್ ಕಾರುಗಳು ಅತ್ಯುತ್ತಮವಾದ ಆಯ್ಕೆಯಾಗಲಿವೆ. ಬನ್ನಿ, ಇವುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಯೋಣ.

ಟಾಟಾ ಸಫಾರಿ (Tata Safari):

ಇದೊಂದು ಫ್ಯಾಮಿಲಿ ಎಸ್‌ಯುವಿ ಎಂದೇ ಹೆಸರುವಾಸಿಯಾಗಿದೆ. ರೂ.15.50 ಲಕ್ಷದಿಂದ ರೂ.27.25 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದೆ. ಸ್ಟಾರ್‌ಡಸ್ಟ್ ಆಶ್ ಮತ್ತು ಕಾಸ್ಮಿಕ್ ಗೋಲ್ಡ್, ಲೂನಾರ್ ಸ್ಲೇಟ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಲಭ್ಯವಿದೆ. 6/ 7 ಆಸನಗಳನ್ನು ಹೊಂದಿದೆ.

Varamahalakshmi Festival Best Family Cars To Buy Safari Carens Clavis Triber XUV700 Rumion

ಈ ಕಾರು 2-ಲೀಟರ್ ಡೀಸೆಲ್ ಎಂಜಿನ್‌ ಹಾಗೂ 6-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 14.50 ರಿಂದ 16.30 ಕಿ.ಮೀವರೆಗೆ ಮೈಲೇಜ್ ಕೊಡಬಲ್ಲದು. 12.3-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿರುವ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜಿಂಗ್, 10-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಹಾಗೂ ಸನ್‌ರೂಫ್‌ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 7-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಕಿಯಾ ಕ್ಯಾರೆನ್ಸ್ ಕ್ಲಾವಿಸ್ (Kia Carens Clavis):

ಇದು ಕೂಡ ಒಂದು ತುಂಬು ಕುಟುಂಬಕ್ಕೆ ಪರ್ಫೆಕ್ಟ್ ಫ್ಯಾಮಿಲಿ ಎಂಪಿವಿಯಾಗಿದೆ. ಕನಿಷ್ಠ ರೂ.11.50 ಲಕ್ಷ ಹಾಗೂ ಗರಿಷ್ಠ ರೂ.21.50 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಇಂಪೀರಿಯಲ್ ಬ್ಲೂ, ಗ್ಲೇಸಿಯರ್ ವೈಟ್ ಪರ್ಲ್, ಗ್ರಾವಿಟಿ ಗ್ರೇ ಹಾಗೂ ಸ್ಪಾರ್ಕ್ಲಿಂಗ್ ಸಿಲ್ವರ್ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 6/ 7 ಆಸನಗಳನ್ನು ತನ್ನದಾಗಿಸಿಕೊಂಡಿದೆ.

Varamahalakshmi Festival Best Family Cars To Buy Safari Carens Clavis Triber XUV700 Rumion

ನೂತನ ಕ್ಯಾರೆನ್ಸ್ ಕ್ಲಾವಿಸ್ 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ & 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 15.95 ರಿಂದ 17.50 ಕಿ.ಮೀ ವರೆಗೆ ಮೈಲೇಜ್ ನೀಡಬಲ್ಲದು. 10.25-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್‌, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಹಾಗೂ ಪನೋರಮಿಕ್ ಸನ್‌ರೂಫ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ರೆನಾಲ್ಟ್ ಟ್ರೈಬರ್ ಫೇಸ್‌ಲಿಫ್ಟ್ (Renault Triber Facelift):

ಈ ಎಂಪಿವಿಯು ರೂ.6.29 ಲಕ್ಷದಿಂದ ರೂ.9.16 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಪಡೆದಿದೆ. 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಹಾಗೂ 5-ಸ್ಪೀಡ್ ಮ್ಯಾನುವಲ್/ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 20 ಕಿ.ಮೀ ವರೆಗೆ ಮೈಲೇಜ್ ನೀಡಬಲ್ಲದು. 7-ಆಸನಗಳನ್ನು ತನ್ನದಾಗಿಸಿಕೊಂಡಿದೆ. 8-ಇಂಚಿರುವ ಪ್ಲೋಟಿಂಗ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಹಾಗೂ 6-ಏರ್‌ಬ್ಯಾಗ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Varamahalakshmi Festival Best Family Cars To Buy Safari Carens Clavis Triber XUV700 Rumion

ಮಹೀಂದ್ರಾ ಎಕ್ಸ್‌ಯುವಿ700 (Mahindra XUV700):

ಇದು ಎಸ್‍ಯುವಿಯಾಗಿದ್ದು, ಕನಿಷ್ಠ ರೂ.14.49 ಲಕ್ಷ ಮತ್ತು ಗರಿಷ್ಠ ರೂ.25.14 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಉತ್ತಮವಾದ ವಿನ್ಯಾಸವನ್ನು ಹೊಂದಿದೆ. 2-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 2.2-ಲೀಟರ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 17 ಕಿ.ಮೀ ವರೆಗೆ ಮೈಲೇಜ್ ಕೊಡಬಲ್ಲದು. 6/ 7 ಆಸನಗಳನ್ನು ತನ್ನದಾಗಿಸಿಕೊಂಡಿದೆ. 10.25-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು 7 ಏರ್‌ಬ್ಯಾಗ್‌ನಂತಹ ವಿವಿಧ ವೈಶಿಷ್ಟ್ಯಗಳನ್ನು ಕೂಡ ಪಡೆದಿದೆ.

Varamahalakshmi Festival Best Family Cars To Buy Safari Carens Clavis Triber XUV700 Rumion

ಟೊಯೊಟಾ ರೂಮಿಯನ್ (Toyota Rumion):

ಈ ಎಂಪಿವಿಯು ರೂ.10.66 ಲಕ್ಷದಿಂದ ರೂ.13.95 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಅತ್ಯಾಕರ್ಷಕವಾದ ವಿನ್ಯಾಸವನ್ನು ಪಡೆದಿದೆ. 1.5-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 20 ರಿಂದ 26 ಕಿ.ಮೀ ವರೆಗೆ ಮೈಲೇಜ್ ನೀಡಬಲ್ಲದು. 7 ಆಸನಗಗಳನ್ನು ಹೊಂದಿದ್ದು, 7-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಆಟೋಮೆಟಿಕ್ ಎಸಿ ಹಾಗೂ 4 ಏರ್‌ಬ್ಯಾಗ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Article Published On: Thursday, August 7, 2025, 13:21 [IST]
English summary
Varamahalakshmi festival best family cars to buy safari carens clavis triber xuv700 rumion
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+