ಸದ್ದಿಲ್ಲದೇ ಹೊಸ ಕಂಪನಿ ವಿನ್‌ಫಾಸ್ಟ್‌ನಿಂದ 7-ಸೀಟರ್ ಕಾರಿನ ಬಿಡುಗಡೆಗೆ ತಯಾರಿ.. ಯಾವುದು, ಬೆಲೆ ಎಷ್ಟಿರಲಿದೆ?

ವಿಯೆಟ್ನಾಂ ದೇಶದ ವಿನ್‌ಫಾಸ್ಟ್ (VinFast), ಪ್ರಮುಖ ವಾಹನ ತಯಾರಕ ಕಂಪನಿ ಎಂದೇ ಹೆಸರುವಾಸಿಯಾಗಿದೆ. ಭಾರತ ಕಾರು ಮಾರುಕಟ್ಟೆಯನ್ನು ಪ್ರವೇಶಿಸಲು ಎಲ್ಲ ರೀತಿಯ ತಯಾರಿಯನ್ನು ಮಾಡಿಕೊಳ್ಳುತ್ತಿದೆ. ಎಲ್ಲವು ಸುಸೂತ್ರವಾಗಿ ನಡೆದರೆ, ಇದೇ ಸೆಪ್ಟೆಂಬರ್‌ನಲ್ಲಿ ನೂತನ ವಿಎಫ್6 ಹಾಗೂ ವಿಎಫ್7 ಎಲೆಕ್ಟ್ರಿಕ್ ಎಸ್‌ಯುವಿಗಳನ್ನು ಅದ್ದೂರಿಯಾಗಿಯೂ ಮಾರಾಟಕ್ಕೆ ತರಲಿದೆ. ಈ ಕಾರುಗಳಿಗಾಗಿ ಬುಕ್ಕಿಂಗ್‌ನ್ನು ಪ್ರಾರಂಭಿಸಿದೆ. ಆಸಕ್ತರು, ಅಧಿಕೃತ ವೆಬ್‌ಸೈಟ್‌ ಅಥವಾ ಸಮೀಪದ ಶೋರೂಂಗೆ ಭೇಟಿ ನೀಡಿ, ರೂ.21,000 ಮುಂಗಡ ಹಣ ಪಾವತಿಸಿ, ಕಾಯ್ದಿರಿಸಬಹುದಾಗಿದೆ.

ಸದ್ಯ, ವಿನ್‌ಫಾಸ್ಟ್ ಕಂಪನಿಯು ಹೊಚ್ಚ ಹೊಸ ಲಿಮೋ ಗ್ರೀನ್‌ (Limo Green) ಕಾರಿನ ತಯಾರಿಕೆಗಾಗಿ ಪೇಟೆಂಟ್ ಪಡೆದಿದೆ. ಇದೊಂದು ಫ್ಯಾಮಿಲಿ ಎಂಪಿವಿಯಾಗಿದೆ. ಈ ಕಾರಿಗೆ ದೇಶೀಯ ಮಾರುಕಟ್ಟೆಯಲ್ಲಿ ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಇವಿ (Kia Carens Clavis EV) ಪ್ರಬಲವಾದ ಎದುರಾಳಿಯಾಗಲಿದೆ.

Vinfast Limo Green Mpv Patent In India Expected Price Details

ಜಾಗತಿಕವಾಗಿ ಖರೀದಿಗೆ ಲಭ್ಯವಿರುವ ವಿನ್‌ಫಾಸ್ಟ್ ಲಿಮೋ ಗ್ರೀನ್‌ (Vinfast Limo Green), ಹೊರಭಾಗದಲ್ಲಿ ನೋಡುಗರ ಕಣ್ಣು ಕುಕ್ಕುವಂತಹ ವಿನ್ಯಾಸವನ್ನು ಹೊಂದಿದೆ. ಅದು ವಿಎಫ್6 ಮತ್ತು ವಿಎಫ್7 ಕಾರುಗಾಳಿಗಳಿಗೂ ಹೋಲಿಕೆಯಾಗಬಲ್ಲದು. ಈ ಎಂಪಿವಿಯು ಸಿಗ್ನೇಚರ್ ಎಲ್ಇಡಿ ಹೆಡ್‌ಲೈಟ್‌ಗಳು, ಫುಲ್ ವಿಡ್ತ್ ಡಿಆರ್‌ಎಲ್‌ಗಳು ಮತ್ತು 18-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ.

ನೂತನ ವಿನ್‌ಫಾಸ್ಟ್ ಲಿಮೋ ಗ್ರೀನ್‌ ಕಾರು 4,740 ಎಂಎಂ ಉದ್ದ, 1,872 ಎಂಎಂ ಅಗಲ ಹಾಗೂ 1,728 ಎಂಎಂ ಎತ್ತರವು ಇದೆ. 170 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,840 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ. ಜೊತೆಗೆ ಆನ್-ವೀಲ್ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಈ ಕಾರು 60.13 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 450 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ಇದರಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್, 201 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 280 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.

ಇದು ಇಕೋ, ಕಂಫರ್ಟ್ ಮತ್ತು ಸ್ಪೋರ್ಟ್ ಎಂಬ 3 ಡ್ರೈವಿಂಗ್ ಮೋಡ್‌ಗಳನ್ನು ಹೊಂದಿದೆ. 10.1-ಇಂಚಿನ ಇನ್ಫೋಟೈನ್‌ಮೆಂಟ್ ಡಿಸ್‌ಪ್ಲೇ, 3-ಸ್ಪೋಕ್ ಸ್ಟೀರಿಂಗ್ ವೀಲ್, ಲೆಥೆರೆಟ್ ಸೀಟಿಂಗ್, 360 ಡಿಗ್ರಿ ಕ್ಯಾಮೆರಾ ಹಾಗೂ ಫ್ಲೋಟಿಂಗ್ ಸೆಂಟರ್ ಕನ್ಸೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಈ ಕಾರು ರೂ.25 ಲಕ್ಷದಿಂದ ರೂ.30 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿರುವ ನಿರೀಕ್ಷೆಯಿದೆ.

ವಿನ್‌ಫಾಸ್ಟ್‌ ಮಿನಿಯೋ ಗ್ರೀನ್ (VinFast Minio Green) ಕಾರಿಗೂ ಪೇಟೆಂಟ್:

ಇದು ಸಣ್ಣ ಗಾತ್ರದ ಎಲೆಕ್ಟ್ರಿಕ್ ಕಾರಾಗಿದೆ. ಈ ಹ್ಯಾಚ್‌ಬ್ಯಾಕ್‌ನ್ನು ಉತ್ಪಾದಿಸಲು ಸಹ ಪೇಟೆಂಟ್ ಪಡೆಯಲಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ರೂ.8.99 ಲಕ್ಷ (ಎಕ್ಸ್-ಶೋರೂಂ) ದರದಲ್ಲಿ ಖರೀದಿಗೆ ದೊರೆಯುವ ಸಾಧ್ಯತೆಯಿದೆ. ಅಂತರರಾಷ್ಟ್ರೀಯವಾಗಿಯೂ ಗ್ರಾಹಕರ ಖರೀದಿಗೆ ಲಭ್ಯವಾಗಲಿದೆ. ಹೊರಭಾಗದಲ್ಲಿ ಅತ್ಯುತ್ತಮವಾದ ಹೆಡ್‌ಲೈಟ್‌ಗಳು, ಫ್ಲಾಪ್ ಟೈಪ್ ಡೋರ್ ಹ್ಯಾಂಡಲ್‌ಗಳು, ಶಾರ್ಕ್ ಫಿನ್ ಆಂಟೆನಾ ಮತ್ತು 13-ಇಂಚಿನ ಸ್ಟೀಲ್ ವೀಲ್‌ಗಳನ್ನು ಪಡೆದಿದೆ.

ನೂತನ ಮಿನಿಯೋ ಗ್ರೀನ್ 14.7 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 170 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ. 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 6.5 ಸೆಕೆಂಡುಗಳಲ್ಲಿ 50 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ. 4 ಆಸನ ಆಯ್ಕೆ ವ್ಯವಸ್ಥೆಯನ್ನು ತನ್ನದಾಗಿಸಿಕೊಂಡಿದೆ.

ಈ ಕಾರು ಪುಟ್ಟದಾಗಿರುವ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌, 2 ಸ್ಪೋಕ್ ಸ್ಟೀರಿಂಗ್ ವೀಲ್, ಡ್ರೈವರ್ ಏರ್‌ಬ್ಯಾಗ್‌, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಹಾಗೂ ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್‌ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. 3,090 ಎಂಎಂ ಉದ್ದ, 1,496 ಎಂಎಂ ಅಗಲ ಮತ್ತು 1,625 ಎಂಎಂ ಎತ್ತರ ಕೂಡ ಇದೆ. 2,065 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.

More from DriveSpark

Article Published On: Tuesday, August 19, 2025, 10:53 [IST]
English summary
Vinfast limo green mpv patent in india expected price details
Read more on VinFast india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+