ಬಿಡುಗಡೆಯೇ ಆಗಿಲ್ಲ.. ಈ ಅತಿ ಸಣ್ಣ ಎಲೆಕ್ಟ್ರಿಕ್ ಕಾರಿಗೆ ಸಾಲು-ಸಾಲು ಪ್ರತಿಸ್ಪರ್ಧಿಗಳು, ಕಡಿಮೆ ಬೆಲೆಗೂ ಲಭ್ಯ?

ವಿಯೆಟ್ನಾಂ ಮೂಲದ ವಿನ್‌ಫಾಸ್ಟ್ (VinFast) ಜನಪ್ರಿಯ ವಾಹನ ತಯಾರಕ ಕಂಪನಿ ಆಗಿದ್ದು, ಭಾರತದ ಕಾರು ಮಾರುಕಟ್ಟೆಯನ್ನು ಪ್ರವೇಶಿಸಲು ಭರದಿಂದ ಸಿದ್ದತೆಯನ್ನು ಮಾಡಿಕೊಳ್ಳುತ್ತಿದೆ. ಕಳೆದ ಜನವರಿಯಲ್ಲಿ ಮುಕ್ತಾಯಗೊಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಮೊದಲ ಬಾರಿಗೆ ಹೊಚ್ಚ ಹೊಸ 'ವಿಎಫ್3' ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್‌ನ್ನು ಅನಾವರಣಗೊಳಿಸಿತ್ತು. ಈ ಕಾರು ಬಿಡುಗಡೆಯಾದ ಮೇಲೆ ಟಾಟಾ ಟಿಯಾಗೊ ಇವಿ, ಎಂಜಿ ಕಾಮೆಟ್ ಇವಿ ಹಾಗೂ ಸಿಟ್ರನ್ ಇಸಿ3 ಎಲೆಕ್ಟ್ರಿಕ್ ಕಾರುಗಳ ಪ್ರಬಲವಾದ ಸ್ಪರ್ಧೆಯನ್ನು ಎದುರಿಸಬೇಕಾಗಿದೆ.

ಈ ವಿನ್‌ಫಾಸ್ಟ್ ವಿಎಫ್3 ಇವಿ (VinFast VF3 EV), ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿಯೂ ಖರೀದಿಗೆ ಲಭ್ಯವಿದೆ. ಇದು ಹೊರಭಾಗದಲ್ಲಿ ಹೆಚ್ಚು ಆಕರ್ಷಕ ವಿನ್ಯಾಸವನ್ನು ಒಳಗೊಂಡಿದ್ದು, ನೋಡುಗರ ಕಣ್ಮನ ಸೆಳೆಯುತ್ತದೆ. ಎಲ್ಇಡಿ ಹೆಡ್‌ಲೈಟ್‌ಗಳು, ಕ್ರೋಮ್ ಗ್ರಿಲ್ ಬಾರ್ ಮತ್ತು 'ವಿ' ಆಕಾರಕ್ಕೆ ಹೋಲಿಕೆಯಾಗಲ್ಲ ಟೈಲ್‌ಗೇಟ್‌ನ್ನು ಹೊಂದಿದೆ.

VinFast VF 3 Strong Rival To Tiago Ev Comet Ev And Ec3 Expected Price Range And Features Details

ಈ ವಿನ್‌ಫಾಸ್ಟ್ ವಿಎಫ್3 ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್‌ 18.64 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 215 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ. ನೂತನ ಕಾರು ಕೇವಲ 5.3 ಸೆಕೆಂಡುಗಳಲ್ಲಿ 0 ರಿಂದ 50 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಹೊಸ ವಿನ್‌ಫಾಸ್ಟ್ ವಿಎಫ್3 ಇವಿ 2-ಡೋರ್ ಆಯ್ಕೆಯನ್ನು ಹೊಂದಿದೆ. 4 ಆಸನಗಳನ್ನು ಹೊಂದಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. 10-ಇಂಚಿನ ಫ್ಲೋಟಿಂಗ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 2-ಸ್ಪೋಕ್ ಸ್ಟೀರಿಂಗ್ ವೀಲ್ ಸೇರಿದಂತೆ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಮಲ್ಟಿಪಲ್ ಏರ್‌ಬ್ಯಾಗ್‌ಗಳನ್ನು ಹೊಂದಿರುವ ನೀರಿಕ್ಷೆಯಿದೆ. ರೂ.10 ಲಕ್ಷಕ್ಕಿಂತ ಕಡಿಮೆ (ಎಕ್ಸ್-ಶೋರೂಂ) ಬೆಲೆಯಲ್ಲಿ ಖರೀದಿಗೆ ದೊರೆಯಬಹುದು ಎಂದು ಅಂದಾಜಿಸಲಾಗಿದೆ.

VinFast VF 3 Strong Rival To Tiago Ev Comet Ev And Ec3 Expected Price Range And Features Details

ವಿನ್‌ಫಾಸ್ಟ್ ವಿಎಫ್3 ಎಲೆಕ್ಟ್ರಿಕ್ ಕಾರಿಗೆ ಪ್ರಬಲವಾದ ಎದುರಾಳಿಯಾಗಬಲ್ಲ ಟಾಟಾ ಟಿಯಾಗೊ ಇವಿ (Tata Tiago EV), ರೂ.7.99 ಲಕ್ಷದಿಂದ ರೂ.11.14 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 19.2 ಕೆಡಬ್ಲ್ಯೂಹೆಚ್ ಮತ್ತು 24 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 250 ರಿಂದ 315 ಕಿಲೋಮೀಟರ್ ಓಡುತ್ತದೆ.

ಈ ವಿಎಫ್3 ಇವಿಗೆ ಎಂಜಿ ಕಾಮೆಟ್ ಇವಿ (MG Comet EV) ಕೂಡ ಪ್ರಬಲವಾದ ಪ್ರತಿಸ್ಪರ್ಧಿಯಾಗಬಲ್ಲದು. ಈ ಕಾಮೆಟ್ ಎಲೆಕ್ಟ್ರಿಕ್ ಕಾರು ರೂ.4.99 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 17.3 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್‌ನ್ನು ಹೊಂದಿದ್ದು, ಪೂರ್ತಿ ಚಾರ್ಜ್‌ನಲ್ಲಿ 230 ಕಿಲೋಮೀಟರ್‌ ಕ್ರಮಿಸುತ್ತದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್‌ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ ಸ್ಕ್ರೀನ್ ಸೆಟಪ್ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ನೂತನ ವಿನ್‌ಫಾಸ್ಟ್ ವಿಎಫ್3 ಎಲೆಕ್ಟ್ರಿಕ್ ಕಾರು ಸಿಟ್ರನ್ ಇಸಿ3 (Citroen eC3) ಜೊತೆಯಲ್ಲಿಯೂ ಸ್ಪರ್ಧಿಸಬೇಕಾಗಿದೆ. ಈ ಇಸಿ3 ಎಲೆಕ್ಟ್ರಿಕ್ ಕಾರು ರೂ.12.90 ರಿಂದ ರೂ.13.41 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 29.2 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿದೆ. 320 ಕಿಲೋಮೀಟರ್‌ ಓಡುತ್ತದೆ. 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, March 31, 2025, 18:19 [IST]
English summary
Vinfast vf 3 strong rival to tiago ev comet ev and ec3 expected price range and features details
Read more on VinFast india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+