ಸರ್.. ಇದು ಟಾಟಾ ನ್ಯಾನೋ ಅಲ್ಲ, ಅತಿ ಶೀಘ್ರದಲ್ಲೇ ಹೊಸ ಬ್ರ್ಯಾಂಡ್‌ನ ಈ ಕಾರು ಮಾರಾಟಕ್ಕೆ.. ಭಾರೀ ಕಡಿಮೆ ಬೆಲೆ?
ವಿಯೆಟ್ನಾಂ ಮೂಲದ ವಿನ್‌ಫಾಸ್ಟ್ (VinFast), ಜಾಗತಿಕ ಮಟ್ಟದಲ್ಲಿ ಪ್ರಖ್ಯಾತ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ಇದೇ ಸೆಪ್ಟೆಂಬರ್‌ನಲ್ಲಿ ನೂತನ ವಿಎಫ್6 & ವಿಎಫ್7 ಎಲೆಕ್ಟ್ರಿಕ್ ಎಸ್‌ಯುವಿಗಳನ್ನು ಮಾರಾಟಕ್ಕೆ ತಂದಿತ್ತು. ಈಗ ಮೊದಲ ಬ್ಯಾಚ್‍ನ ಕಾರುಗಳ ವಿತರಣೆಯನ್ನು ಪ್ರಾರಂಭಿಸಿದೆ. ಸದ್ಯ, ಕಂಪನಿಯು ಮತ್ತೊಂದು ನೂತನ ಕಾರನ್ನು ಬಿಡುಗಡೆಗೊಳಿಸಲು ತಯಾರಿ ಮಾಡಿಕೊಳ್ಳುತ್ತಿದೆ. ಎಲ್ಲವು ಅಂದುಕೊಂಡಂತೆ ನಡೆದರೆ, ಶೀಘ್ರದಲ್ಲೇ 'ವಿಎಫ್3' ಹೆಸರಿನ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್‌ನ್ನು ಪರಿಚಯಿಸಲಾಗುತ್ತದೆ.
ವಿನ್ಯಾಸ & ಬಣ್ಣಗಳು (Design & Colors):
ನೂತನ ವಿನ್‌ಫಾಸ್ಟ್ ವಿಎಫ್3 (VinFast VF3) ಕಾರು, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿಯೂ ಖರೀದಿಗೆ ಲಭ್ಯವಿದೆ. ಫಿಲಿಪೈನ್ಸ್ ಹಾಗೂ ಇಂಡೋನೇಷ್ಯಾ ದೇಶಗಳ ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಇದು ತುಂಬಾ ಸರಳವಾದ ವಿನ್ಯಾಸವನ್ನು ಹೊಂದಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಒಳಗೊಂಡಿದೆ. ಎಲೆಕ್ಟ್ರಿಕ್ ಬ್ಲೂ, ಅರ್ಬನ್ ಮಿಂಟ್, ಸಮ್ಮರ್ ಯೆಲ್ಲೋ & ರೋಸ್ ಪಿಂಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.

ಸುತ್ತಳತೆ (Dimensions):
ಇದು ಪುಟ್ಟ 'ಟಾಟಾ ನ್ಯಾನೋ'ದಂತೆ ಕಂಡರೂ 3,190 ಮಿ.ಮೀ ಉದ್ದ, 1,679 ಮಿ.ಮೀ ಅಗಲ ಮತ್ತು 1,622 ಮಿ.ಮೀ ಎತ್ತರವಿದೆ. ಜೊತೆಗಿದು 191 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,075 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 1157 ಕೆಜಿ ತೂಕವಿದೆ.
ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):
ಸಾಮಾನ್ಯ ಕಾರುಗಳಿಗೆ ಹೋಲಿಕೆ ಮಾಡಿದರೆ, 'ವಿನ್‌ಫಾಸ್ಟ್ ವಿಎಫ್3' ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್ 4 ಆಸನಗಳನ್ನು ಮಾತ್ರ ಹೊಂದಿದೆ. ಆದರೂ ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 285 ಲೀ. ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

ಕಾರ್ಯಕ್ಷಮತೆ (Performance):
ಈ ಕಾರು ಹೆಚ್ಚು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 18.64 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ತನ್ನದಾಗಿಸಿಕೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 215 ಕಿ.ಮೀವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. 100 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. 5.3 ಸೆಕೆಂಡುಗಳಲ್ಲಿ 0 ರಿಂದ 50 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.
ವೈಶಿಷ್ಟ್ಯಗಳು (Features):
ಇದರ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ (10 ಇಂಚು), ಮ್ಯಾನುವಲ್ ಎಸಿ, ಕ್ರೂಸ್ ಕಂಟ್ರೋಲ್ ಮತ್ತು ಫ್ರಂಟ್ ಪವರ್ ವಿಂಡೋಗಳು ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಇಕೋ, ಕಂಫರ್ಟ್ ಹಾಗೂ ಸ್ಪೋರ್ಟ್ ಎಂಬ 3 ಡ್ರೈವಿಂಗ್ ಮೋಡ್‌ಗಳನ್ನು ಪಡೆದಿದೆ. ಈ ಕಾರಿನಲ್ಲಿರುವ ಬ್ಯಾಟರಿ ಪ್ಯಾಕ್, ಫಾಸ್ಟ್ ಚಾರ್ಜರ್ ಬಳಕೆಯಲ್ಲಿ ಕೇವಲ 36 ನಿಮಿಷಗಳಲ್ಲಿ 10% ರಿಂದ 70% ಚಾರ್ಜ್ ಆಗಿ ಬಿಡುತ್ತದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features):
ಹೊಸ 'ವಿನ್‌ಫಾಸ್ಟ್ ವಿಎಫ್3' ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್ ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ ಮಲ್ಟಿಪಲ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು ರೇರ್ ವ್ಯೂ ಕ್ಯಾಮೆರಾವನ್ನು ಒಳಗೊಂಡಿದೆ.
ಬೆಲೆ (Price):
ಈ ಕಾರು ದೇಶೀಯವಾಗಿ 2026ರ ಫೆಬ್ರವರಿಯಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಕನಿಷ್ಠ ರೂ.7.50 ಲಕ್ಷ ಹಾಗೂ ಗರಿಷ್ಠ ರೂ.10 ಲಕ್ಷ (ಎಕ್ಸ್-ಶೋರೂಂ - ನವದೆಹಲಿ) ದರವನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದೆ. ಇದಕ್ಕೆ ಎಂಜಿ ಕಾಮೆಟ್ ಇವಿ ಹಾಗೂ ಟಾಟಾ ಟಿಯಾಗೊ ಇವಿಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಲಿವೆ.


Click it and Unblock the Notifications








